AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಉಪೇಂದ್ರ ದಂಪತಿ ಮೊಬೈಲ್​ ಹ್ಯಾಕ್​ ಕೇಸ್​: ಆರೋಪಿ ಅರೆಸ್ಟ್​; ಶಾಕಿಂಗ್​ ವಿಚಾರ ಬಿಚ್ಚಿಟ್ಟ ಖಾಕಿ

ನಟ ಉಪೇಂದ್ರ ಮತ್ತು ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಬಿಹಾರ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆನ್‌ಲೈನ್ ಲಿಂಕ್ ಮೂಲಕ ಪ್ರಿಯಾಂಕಾ ಅವರ ವಾಟ್ಸಾಪ್ ಹ್ಯಾಕ್ ಮಾಡಿ, ಹಣ ವರ್ಗಾಯಿಸಲು ವಂಚಕರು ಸಂದೇಶ ಕಳುಹಿಸಿದ್ದರು. ಇನ್ನು, ಪೊಲೀಸರ ತನಿಖೆ ವೇಳೆ ಬಿಹಾರದಲ್ಲಿ ಒಂದೇ ಊರಿನ 150ಕ್ಕೂ ಹೆಚ್ಚು ಯುವಕರು ಸೈಬರ್ ಅಪರಾಧದಲ್ಲಿ ತೊಡಗಿರುವ ಅಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ನಟ ಉಪೇಂದ್ರ ದಂಪತಿ ಮೊಬೈಲ್​ ಹ್ಯಾಕ್​ ಕೇಸ್​: ಆರೋಪಿ ಅರೆಸ್ಟ್​; ಶಾಕಿಂಗ್​ ವಿಚಾರ ಬಿಚ್ಚಿಟ್ಟ ಖಾಕಿ
ವಿಕಾಸ್ ಕುಮಾರ್
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ಪ್ರಸನ್ನ ಹೆಗಡೆ|

Updated on: Nov 12, 2025 | 10:06 AM

Share

ಬೆಂಗಳೂರು, ನವೆಂಬರ್​ 12: ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಆರೋಪಿ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಪೊಲೀಸರೇ ಈ ಸೈಬರ್​ ಖದೀಮರ ಜಾಲ ನೋಡಿ ಶಾಕ್​ ಆಗಿದ್ದಾರೆ. 20ರಿಂದ 25 ವಯಸ್ಸಿನ ಯುವಕರು ಈ ದಂಧೆಯಲ್ಲಿ ನಿರತರಾಗಿದ್ದು, ಊರಿನ 150 ಮಂದಿ ಯುವಕರು ಸೈಬರ್ ಅಪರಾಧದಲ್ಲೇ ತೊಡಗಿಗೊಂಡಿರುವ ಆಘಾತಕಾರಿ ವಿಷಯ ಈ ವೇಳೆ ಬೆಳಕಿಗೆ ಬಂದಿದೆ. ಸದ್ಯ ಆರೋಪಿ ವಿಕಾಸ್​​ನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಸೆ.15ರಂದು ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಆಗಿತ್ತು. ಆನ್​ಲೈನ್​ನಲ್ಲಿ ಕೆಲ ವಸ್ತುಗಳನ್ನು ಪ್ರಿಯಾಂಕಾ ಉಪೇಂದ್ರ ಬುಕ್​ ಮಾಡಿದ್ದರು. ಈ ವೇಳೆ ಮೊಬೈಲ್​​ಗೆ ಲಿಂಕ್​ ಬಂದಿದ್ದು, ಆ ಲಿಂಕ್​ ಅನ್ನು ಪ್ರಿಯಾಂಕ ಕ್ಲಿಕ್​ ಮಾಡಿದ್ದರು. ಬಳಿಕ ನಟಿ ಪ್ರಿಯಾಂಕಾ ವಾಟ್ಸಾಪ್​ ಹ್ಯಾಕ್ ಮಾಡಿದ್ದ ಖದೀಮ, ಅವರ ಸಂಪರ್ಕದಲ್ಲಿದ್ದವರಿಗೆ 55 ಸಾವಿರ ಹಣ ಕಳುಹಿಸುವಂತೆ ಮೆಸೇಜ್​ ಮಾಡಿದ್ದ. ಈ ವೇಳೆ ಆರೋಪಿ ಯಾರೆಂದು ತಿಳಿಯಲು ಯತ್ನಿಸಿರುವ ಪ್ರಿಯಾಂಕಾ, ಪತಿ ಉಪೇಂದ್ರ ಹಾಗೂ ಮ್ಯಾನೇಜರ್ ನಂಬರ್​ನಿಂದ ಕರೆ ಮಾಡಿದ್ದರು. ಬಳಿಕ ಮ್ಯಾನೇಜರ್ ಹಾಗೂ ಉಪೇಂದ್ರ ಮೊಬೈಲ್ ಕೂಡ ಹ್ಯಾಕ್ ಆಗಿತ್ತು.

ಇದನ್ನೂ ಓದಿ: ಪ್ರಿಯಾಂಕಾ ಉಪೇಂದ್ರ ಮಾಡಿದ ಒಂದೇ ತಪ್ಪಿನಿಂದ ಆಯ್ತು ಮೊಬೈಲ್ ಹ್ಯಾಕ್

ಹಣ ಅಗತ್ಯವಿದೆ ಎಂದು ಪ್ರಿಯಾಂಕ ಅವರ ವಾಟ್ಸ್ಯಾಪ್​ನಿಂದ ಆರೋಪಿ ಹಲವರಿಗೆ ಮೆಸೇಜ್​ ಮಾಡಿದ್ದು, ಈ ವೇಳೆ ಪ್ರಿಯಾಂಕಾ ಅವರೇ ಸಂದೇಶ ಕಳುಹಿಸಿದ್ದು ಎಂದು ಕೆಲವರು ಹಣ ಹಾಕಿದ್ದಾರೆ. ಸ್ವತಃ ಉಪೇಂದ್ರ ಪುತ್ರ ಕೂಡ ತಾಯಿ ಅಕೌಂಟ್​ಗೆ ಐವತ್ತು ಸಾವಿರ ಹಣಹಾಕಿದ್ದರು. ಇನ್ನು ಕೆಲವರು ಅನುಮಾನಗೊಂಡು ಪ್ರಿಯಾಂಕಾ ಅವರ ನಂಬರ್​​ಗೆ ಕರೆ ಮಾಡಿದರೆ ಕಾಲ್​ ಕಟ್​​ ಆಗುತ್ತಿತ್ತು. ವಿಷಯ ಗೊತ್ತಾಗುತ್ತಿದ್ದಂತೆ ಸದಾಶಿವನಗರ ಠಾಣೆಗೆ ಈ ಬಗ್ಗೆ ಪ್ರಿಯಾಂಕಾ ದೂರು ನೀಡಿದ್ದರು. ಆದರೆ, ಅದಾಗಲೇ ಸೈಬರ್​ ವಂಚಕನ ಅಕೌಂಟ್​​ಗೆ ಒಂದೂವರೆ ಲಕ್ಷ ರೂಪಾಯಿ ಹಣ ವರ್ಗಾವಣೆ ಆಗಿತ್ತು. ದೂರು ದಾಖಲಾಗುತ್ತಿದ್ದಂತೆ ಅಲರ್ಟ್​ ಆದ ಪೊಲೀಸರು, ಆರೋಪಿ ಪತ್ತೆಗೆ ಬಲೆ ಬೀಸಿದ್ದರು. ತನಿಖೆ ವೇಳೆ ಆರೋಪಿ ಬಿಹಾರದ ದಶರತಪುರದ ನಿವಾಸಿ ಎನ್ನುವುದು ಗೊತ್ತಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.