ಬೆಂಗಳೂರು, ಡಿಸೆಂಬರ್ 23: ಕಾಡುಗೊಲ್ಲ ಸಮುದಾಯ (Kadugolla community) ವನ್ನು ಎಸ್ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಕೇಂದ್ರ ಸಚಿವ ಅರ್ಜುನ್ ಮುಂಡಾರಿಂದ ದೇವೇಗೌಡರಿಗೆ ಪತ್ರ ಬರೆಯಲಾಗಿದೆ. ಕಾಡುಗೊಲ್ಲರನ್ನು ಎಸ್ಟಿಗೆ ಸೇರಿಸುವ ಮನವಿ ಸ್ವೀಕರಿಸಿದ್ದೇನೆ. ನಿಮ್ಮ ಮನವಿ ಪರಿಶೀಲನೆ ಮಾಡುತ್ತೇನೆ ಎಂದು ದೇವೇಗೌಡರಿಗೆ ಪತ್ರದ ಮೂಲಕ ಅರ್ಜುನ್ ಮುಂಡಾ ಭರವಸೆ ನೀಡಿದ್ದಾರೆ.
ಕಾಡುಗೊಲ್ಲ ಸಮುದಾಯವನ್ನು ಎಸ್ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಮತ್ತು ಸಂಸದ ಪ್ರಜ್ವಲ್ ಕೇಂದ್ರಕ್ಕೆ ಮನವಿ ಮಾಡಿದ್ದರು.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.