ಕ್ರಿಸ್​ಮಸ್​ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಿದ KSRTC

ಕ್ರಿಸ್​ಮಸ್​ ಹಬ್ಬಕ್ಕೆ ರಜೆ ಹಿನ್ನೆಲೆ ಹೆಚ್ಚುವರಿ KSRTC ಬಸ್​ ವ್ಯವಸ್ಥೆ ಮಾಡಲಾಗಿದ್ದು, ರಾಜ್ಯದ ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಗೋಕರ್ಣ, ಶಿರಸಿ ಸೇರಿದಂತೆ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಬಸ್​ಗಳು ಹೊರಡಲಿದ್ದು, ಅದರಂತೆ ತಮಿಳುನಾಡು, ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್​ಗಳು ಸಂಚರಿಸಲಿವೆ.

ಕ್ರಿಸ್​ಮಸ್​ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಿದ KSRTC
ಕೆಎಸ್ಆರ್​ಟಿಸಿ ಬಸ್​
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 23, 2023 | 3:24 PM

ಬೆಂಗಳೂರು, ಡಿ.23: ಕ್ರಿಸ್​ಮಸ್​ ಹಬ್ಬಕ್ಕೆ ರಜೆಯಿರುವ ಹಿನ್ನೆಲೆ ಕೆಎಸ್​ಆರ್​ಟಿಸಿ (KSRTC) ಹೆಚ್ಚುವರಿಯಾಗಿ 1000 ಬಸ್​ ವ್ಯವಸ್ಥೆ ಮಾಡಿದೆ. ಪ್ರಯಾಣಿಕರಿಗೆ ತೊಂದರೆ ಆಗದ ಹಿನ್ನಲೆ  ಡಿ. 22 ರಿಂದ ಡಿ.24 ರವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಕ್ಕೆ ಹೆಚ್ಚುವರಿ ಬಸ್​ಗಳು ಕಾರ್ಯನಿರ್ವಹಿಸಲಿವೆ. ಅದರಂತೆ ಡಿ.25 ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್​ಗಳು  ಕಾರ್ಯಾಚರಣೆಗೊಳ್ಳಲಿದೆ.

ವಿವಿಧ ಸ್ಥಳಗಳಿಗೆ ಬಸ್​ ವ್ಯವಸ್ಥೆ; ಪ್ರಯಾಣಿಕರು ಮೊದಲೇ ಸೀಟ್ ರಿಸರ್ವ್ ಮಾಡಬಹುದು

ರಾಜ್ಯದ ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಗೋಕರ್ಣ, ಶಿರಸಿ ಸೇರಿದಂತೆ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಬಸ್​ಗಳು ಹೊರಡಲಿದ್ದು, ಅದರಂತೆ ತಮಿಳುನಾಡು, ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್​ಗಳು ಸಂಚರಿಸಲಿವೆ. ಪ್ರಯಾಣಿಕರು ಮೊದಲೇ ಸೀಟ್ ರಿಸರ್ವ್ ಮಾಡಬಹುದಾಗಿದೆ. ಇ-ಟಿಕೆಟ್ ಸಹ ವೆಬ್ ಸೈಟ್ ಮೂಲಕ ಪಡೆಯಬಹುದು. ಇನ್ನು ನಾಲ್ಕು ಹಾಗೂ ನಾಲ್ಕಕ್ಕಿಂತ ಹೆಚ್ಚಿನ ಟಿಕೆಟ್ ಕಾಯ್ದಿರಿಸಿದರೆ, 5 % ರಿಯಾಯಿತಿ ನೀಡಿದರೆ, ಹೋಗುವ ಹಾಗೂ ಬರುವ ಟಿಕೆಟ್ ಕಾಯ್ದಿರಿಸಿದರೆ ಬರೊಬ್ಬರಿ 10% ರಿಯಾಯಿತಿ ಕೊಡುತ್ತಿದೆ ಕೆಎಸ್​ಆರ್​ಟಿಸಿ.

ಇದನ್ನೂ ಓದಿ:ಕ್ರಿಸ್‌ಮಸ್: ಹೆಚ್ಚುವರಿ ಕೆಎಸ್​ಆರ್​ಟಿಸಿ ಬಸ್, ಟಿಕೆಟ್‌ ದರದಲ್ಲಿ ಶೇ.10 ರಷ್ಟು ಡಿಸ್ಕೌಂಟ್

ಇನ್ನು ಕೆಎಸ್​ಆರ್​ಟಿಸಿಯು ಪ್ರತಿ ಹಬ್ಬಗಳಲ್ಲೂ ಪ್ರಯಾಣಿಕರಿಗೆ ತೊಂದರೆ ಆಗದಂತೆ ಹೆಚ್ಚುವರಿ ಬಸ್​ಗಳನ್ನು ಏರ್ಪಡಿಸುತ್ತದೆ. ಈ ಹಿಂದಿನ ದೀಪಾವಳಿ ಹಬ್ಬದ ಪ್ರಯುಕ್ತ ಕೂಡ KSRTC ಯಿಂದ ಬರೊಬ್ಬರಿ 2 ಸಾವಿರ ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿತ್ತು. ಇದೀಗ ಕ್ರಿಸ್​ಮಸ್​ ಹಬ್ಬದ ಪ್ರಯುಕ್ತ ರಜೆ ಇರುವ ಹಿನ್ನಲೆ ಎಲ್ಲರೂ ತಮ್ಮ ತಮ್ಮ ಊರುಗಳಿಗೆ ಹೋಗುತ್ತಾರೆ. ಇದರಿಂದ ಕೆಎಸ್​ಆರ್​ಟಿಸಿ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡುವ ಮೂಲಕ ಪ್ರಯಾಣಿಕರಿಗೆ ಸಹಾಯ ಮಾಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Sat, 23 December 23