ವಾಹನ ಸವಾರರಿಗೆ ಬಿಗ್ ಅಲರ್ಟ್; ಹೆದ್ದಾರಿಗಳಲ್ಲಿ ರ್‍ಯಾಶ್ ಡ್ರೈವಿಂಗ್ ಮಾಡಿದ್ರೆ ಎಫ್​ಐಆರ್ ಫಿಕ್ಸ್

ಮೈಸೂರು ಬೆಂಗಳೂರು ಹೈವೇ ಸಿಸಿಟಿವಿ ಪರಿಶೀಲನೆ ಮಾಡಿದ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಅವರು ಹೆದ್ದಾರಿಯಲ್ಲಿ ರ್‍ಯಾಶ್ ಡ್ರೈವಿಂಗ್ ಹೆಚ್ಚಾಗುತ್ತಿರುವ ಹಿನ್ನೆಲೆ ಹೊಸ ಕಾನೂನು ಜಾರಿಗೊಳಿಸಿದ್ದಾರೆ. ಆಗಸ್ಟ್ 1 ರಿಂದ ಹೆದ್ದಾರಿಗಳಲ್ಲಿ ಅತಿ ವೇಗವಾಗಿ ವಾಹನ ಚಾಲನೆ ಮಾಡುವವರ ವಿರುದ್ದ ಎಫ್ಐಆರ್ ದಾಖಲಿಸಲು ಸೂಚನೆ ನೀಡಿದ್ದಾರೆ.

ವಾಹನ ಸವಾರರಿಗೆ ಬಿಗ್ ಅಲರ್ಟ್; ಹೆದ್ದಾರಿಗಳಲ್ಲಿ ರ್‍ಯಾಶ್ ಡ್ರೈವಿಂಗ್ ಮಾಡಿದ್ರೆ ಎಫ್​ಐಆರ್ ಫಿಕ್ಸ್
ಎಡಿಜಿಪಿ ಅಲೋಕ್ ಕುಮಾರ್
Edited By: ಆಯೇಷಾ ಬಾನು

Updated on: Jul 27, 2024 | 2:35 PM

ಬೆಂಗಳೂರು, ಜುಲೈ.27: ಹೆದ್ದಾರಿಗಳಲ್ಲಿ ರ್‍ಯಾಶ್ ಡ್ರೈವಿಂಗ್ (Rash Driving) ಮಾಡುವವರಿಗೆ ಬಿಸಿ ಮುಟ್ಟಿಸಲು ಬೆಂಗಳೂರು ಸಂಚಾರ ಪೊಲೀಸರು​​ (Bengaluru TRaffic Police) ಮುಂದಾಗಿದ್ದು ಸಿಸಿಟಿವಿ ಪರಿಶೀಲಿಸಿ ಕೇಸ್ ದಾಖಲಿಸಲಿದ್ದಾರೆ. ಇನ್ಮುಂದೆ ಹೆದ್ದಾರಿಗಳಲ್ಲಿ ರ್‍ಯಾಶ್​ ಡ್ರೈವಿಂಗ್ ಮಾಡಿದವರ ವಿರುದ್ಧ FIR ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲು ಸಂಚಾರ ಪೊಲೀಸರು ಮುಂದಾಗಿದ್ದಾರೆ. ಹೈವೇ ಅಂತಾ ಓವರ್ ಸ್ಪೀಡ್​ನಲ್ಲಿ ಹೋದ್ರೆ FIR ದಾಖಲಾಗೋದು ಪಕ್ಕ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರ್‍ಯಾಶ್ ಡ್ರೈವಿಂಗ್ ದಿನೇ ದಿನೇ ಹೆಚ್ಚಾಗುತ್ತಿದೆ. 130 ಕಿ.ಮೀ.ಗೂ ಅಧಿಕ ಸ್ಪೀಡ್ ನಲ್ಲಿ ವಾಹನ ಸವಾರರು ವಾಹನ ಚಲಾಯಿಸುತ್ತಿದ್ದಾರೆ. ಹೀಗಾಗಿ ಅತಿ ವೇಗವಾಗಿ ವಾಹನ ಚಲಾಯಿಸುವವರ ವಿರುದ್ಧ ಕೇಸ್ ದಾಖಲು ಮಾಡಲು ಸಂಚಾರಿ ಪೊಲೀಸರು ಮುಂದಾಗಿದ್ದಾರೆ. ಓವರ್ ಸ್ಪೀಡ್ ಗೆ ಬ್ರೇಕ್ ಹಾಕಲು ಎಡಿಜಿಪಿ ಅಲೋಕ್ ಕುಮಾರ್ ಹೊಸ ಅಸ್ತ್ರ ಪ್ರಯೋಗ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸಂಚಾರಿ ಪೊಲೀಸರ ಕಾರ್ಯಾಚರಣೆ; ಅಪಾಯಕಾರಿ ವೀಲಿಂಗ್ ಮಾಡ್ತಿದ್ದ 20 ಆರೋಪಿಗಳ ಬಂಧನ

ಅತಿ ವೇಗದ ಚಾಲನೆಯಿಂದ 90%ರಷ್ಟು ಅಪಘಾತ ಸಾಧ್ಯತೆ ಇರುತ್ತೆ. ಪರಿಶೀಲನೆ ವೇಳೆ ಒಂದೇ ದಿನ‌ 150ಕ್ಕೂ ಹೆಚ್ಚು ಅತಿ ವೇಗ ಚಾಲನೆ ಕೇಸ್​ಗಳು ದಾಖಲಾಗುತ್ತಿವೆ. ಹೀಗಾಗಿ ನಿನ್ನೆ ಮೈಸೂರು ಬೆಂಗಳೂರು ಹೈವೇ ಸಿಸಿಟಿವಿ ಪರಿಶೀಲನೆ ಮಾಡಿದ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಅವರು ಆಗಸ್ಟ್ 1 ರಿಂದ ಅತಿ ವೇಗವಾಗಿ ವಾಹನ ಚಾಲನೆ ಮಾಡುವವರ ವಿರುದ್ದ ಎಫ್ಐಆರ್ ದಾಖಲಿಸಲು ಸೂಚನೆ ನೀಡಿದ್ದಾರೆ. ಸ್ಪೀಡ್​ನಲ್ಲಿ 130 ಕಿ‌.ಮೀ ವೇಗ ಮಿತಿ ದಾಟಿದ್ರೆ ಎಫ್ಐಆರ್ ದಾಖಲಿಸಲು ಸೂಚನೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆ ಮೂಲಕ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನು ಮತ್ತೊಂದೆಡೆ ರಸ್ತೆ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (ಹೈ ಬೀಮ್ ಲೈಟ್) ಮತ್ತು ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ( ಒನ್​ವೇ), ಫುಟ್​ಬಾತ್​ ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಚರಣೆ ಮಾಡಲು ಇತ್ತೀಚೆಗೆ ಪೊಲೀಸರಿಗೆ ಎಡಿಜಿಪಿ ಸೂಚನೆ ನೀಡಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:24 pm, Sat, 27 July 24

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us