AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾವನ್ನೂ ಮೀರಿಸುವ ವಂಚನೆ: ಸತ್ತವರ ಹೆಸರು ಬಳಸಿ ಆದಿಚುಂಚನಗಿರಿ ಮಠದ 120 ಕೋಟಿ ರೂ. ಆಸ್ತಿ ಎಗರಿಸಿದ ಖದೀಮರು!

ಬೆಂಗಳೂರಿನ ಕೆಂಗೇರಿ ಹೋಬಳಿಯಲ್ಲಿ ಆದಿಚುಂಚನಗಿರಿ ಮಠಕ್ಕೆ ಸೇರಿದ 120 ಕೋಟಿ ರೂ. ಮೌಲ್ಯದ 6 ಎಕರೆ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಿದ್ದ ಭೀಕರ ಜಾಲವನ್ನು ಕೆಂಗೇರಿ ಪೊಲೀಸರು ಭೇದಿಸಿದ್ದಾರೆ. ಸ್ಮಶಾನದಲ್ಲಿ ಸಮಾಧಿ ಹುಡುಕಿ, ನಕಲಿ ವಂಶವೃಕ್ಷ ತಯಾರಿಸಿ ವಂಚಿಸಿದ್ದ ಪ್ರಕರಣದಲ್ಲಿ 6 ಸರ್ಕಾರಿ ಅಧಿಕಾರಿಗಳು ಹಾಗೂ ರೌಡಿ ಶೀಟರ್ ಸೇರಿ 11 ಮಂದಿಯನ್ನು ಬಂಧಿಸಲಾಗಿದೆ.

ಸಿನಿಮಾವನ್ನೂ ಮೀರಿಸುವ ವಂಚನೆ: ಸತ್ತವರ ಹೆಸರು ಬಳಸಿ ಆದಿಚುಂಚನಗಿರಿ ಮಠದ 120 ಕೋಟಿ ರೂ. ಆಸ್ತಿ ಎಗರಿಸಿದ ಖದೀಮರು!
ಆದಿಚುಂಚನಗಿರಿ ಮಠದ 120 ಕೋಟಿ ರೂ. ಆಸ್ತಿ ಎಗರಿಸಿದ ಖದೀಮರು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jul 14, 2026 | 2:24 PM

Share

ಮುಖ್ಯಾಂಶಗಳು

  • ಆದಿಚುಂಚನಗಿರಿ ಮಠದ 120 ಕೋಟಿ ಮೌಲ್ಯದ 6 ಎಕರೆ ಜಮೀನು ಕಬಳಿಸಿದ್ದ ಜಾಲ ಪತ್ತೆಯಾಗಿದೆ.
  • ಸತ್ತವರ ಸಮಾಧಿ ಹುಡುಕಿ, ಹೆಸರನ್ನು ಮ್ಯಾಚ್ ಮಾಡಿ ನಕಲಿ ವಂಶವೃಕ್ಷ ಸೃಷ್ಟಿಸಿ ವಂಚಿಸಲಾಗಿದೆ.
  • ಪ್ರಕರಣದಲ್ಲಿ ಭಾಗಿಯಾಗಿದ್ದ 6 ಸರ್ಕಾರಿ ಅಧಿಕಾರಿಗಳು ಸೇರಿದಂತೆ 11 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು, ಜುಲೈ 14: ನಗರದ ಆದಿಚುಂಚನಗಿರಿ ಮಠಕ್ಕೆ ಸೇರಿದ ಬರೋಬ್ಬರಿ 120 ಕೋಟಿ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ (Fake Documents) ಸೃಷ್ಟಿಸಿ ವಂಚಿಸಿದ್ದ ಜಾಲವನ್ನು ಕೆಂಗೇರಿ ಪೊಲೀಸರು ಭೇದಿಸಿದ್ದಾರೆ. ಈ ಹೈಟೆಕ್ ಮತ್ತು ರೋಚಕ ವಂಚನೆ ಪ್ರಕರಣದಲ್ಲಿ ತೊಡಗಿದ್ದ 6 ಜನ ಸರ್ಕಾರಿ ಅಧಿಕಾರಿಗಳು ಹಾಗೂ ರೌಡಿ ಶೀಟರ್ ಸೇರಿದಂತೆ ಒಟ್ಟು 11 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

30 ವರ್ಷದ ಹಿಂದಿನ ಮಠದ ಜಾಗಕ್ಕೆ ಸ್ಕೆಚ್

ಸುಮಾರು 30 ವರ್ಷಗಳ ಹಿಂದೆ ಭಕ್ತರು ಆದಿಚುಂಚನಗಿರಿ ಮಠಕ್ಕೆ ಕೆಂಗೇರಿ ಹೋಬಳಿಯ ಕಂಬಳಿಪುರ ಗ್ರಾಮದ ಸರ್ವೇ ನಂಬರ್ 43 ರಲ್ಲಿ ಒಟ್ಟು 45 ಎಕರೆ ಜಮೀನನ್ನು ಕಾಣಿಕೆಯಾಗಿ ನೀಡಿದ್ದರು. ಈ ಪೈಕಿ 6 ಎಕರೆ ಬೆಲೆಬಾಳುವ ಜಮೀನನ್ನು ಕಬಳಿಸಲು ನೆಲಮಂಗಲ ಮೂಲದ ಮಾಸ್ಟರ್ ಮೈಂಡ್ ನರೇಶ್ ಗೌಡ ಮತ್ತು ಬ್ರೋಕರ್ ಆರೋಗ್ಯಸ್ವಾಮಿ ಸ್ಕೆಚ್ ಹಾಕಿದ್ದ.

ಸತ್ತವರ ಸಮಾಧಿ ಹುಡುಕಿ ನಕಲಿ ವಂಶವೃಕ್ಷ ಸೃಷ್ಟಿ

ಆರೋಪಿಗಳು ವಂಚನೆಗೆ ಬಳಸಿದ ದಾರಿ ಯಾವುದೇ ಸಿನಿಮಾಕ್ಕೂ ಕಡಿಮೆ ಇಲ್ಲ.ಮಠದ ಜಮೀನಿನ ಮೂಲ ಮಾಲೀಕರ ಹೆಸರೇ ಇರುವ ಸತ್ತ ವ್ಯಕ್ತಿಯೊಬ್ಬ ಇವರಿಗೆ ಬೇಕಾಗಿತ್ತು. ಇದಕ್ಕಾಗಿ ಸ್ಮಶಾನಗಳಿಗೆ ಅಲೆದಾಡಿದ ಖದೀಮರು, ಕೊನೆಗೆ ಮೂಲ ಮಾಲೀಕನ ಹೆಸರೇ ಇದ್ದ ವ್ಯಕ್ತಿಯ ಸಮಾಧಿಯೊಂದನ್ನು ಪತ್ತೆ ಮಾಡಿದ್ದರು. ಆ ಸಮಾಧಿಯ ಮೇಲಿದ್ದ ಹೆಸರಿನ ಆಧಾರದ ಮೇಲೆ ಅವರ ಕುಟುಂಬವನ್ನು ಸಂಪರ್ಕಿಸಿದ್ದರು.

ಅಲ್ಲೇ ಇವರಿಗೆ ಬೇಗೂರು ಪೊಲೀಸ್ ಠಾಣೆಯ ರೌಡಿ ಶೀಟರ್ ಫ್ರಾನ್ಸಿಸ್ ಸಿಕ್ಕಿದ್ದ. ಫ್ರಾನ್ಸಿಸ್ ತಂದೆಯ ಹೆಸರು ಹಾಗೂ ಮಠದ ಜಮೀನಿನ ಮೂಲ ಮಾಲೀಕನ ಹೆಸರು, ವಯಸ್ಸು ಮ್ಯಾಚ್ ಆಗಿದ್ದನ್ನೇ ಬಂಡವಾಳ ಮಾಡಿಕೊಂಡ ನರೇಶ್ ಗೌಡನ ಟೀಮ್, ಫ್ರಾನ್ಸಿಸ್ ಹಾಗೂ ಜೋಸ್ವಾನ್ ಇಬ್ಬರೂ ಅಣ್ಣ-ತಂಗಿ ಎಂದು ಸುಳ್ಳು ವಂಶವೃಕ್ಷ ಸೃಷ್ಟಿಸಿದ್ದರು.

ಲಂಚ ಪಡೆದು ಸಾಥ್ ನೀಡಿದ ಸರ್ಕಾರಿ ಅಧಿಕಾರಿಗಳು

ಈ ನಕಲಿ ದಾಖಲೆಗಳಿಗೆ ಲಕ್ಷಾಂತರ ರೂಪಾಯಿ ಹಣ ಪಡೆದು ಬೇಗೂರು ವಿಲೇಜ್ ಅಕೌಂಟೆಂಟ್ ಶಿವಪ್ರಸಾದ್, ರೆವಿನ್ಯೂ ಇನ್ಸ್ಪೆಕ್ಟರ್ ಕಿರಣ್ ಮತ್ತು ಡೆಪ್ಯೂಟಿ ತಹಶೀಲ್ದಾರ್ ದೀಪಕ್ ನಕಲಿ ದಾಖಲೆ ಪತ್ರ ಮಾಡಿಕೊಟ್ಟಿದ್ದರು. ಇದನ್ನು ಪಡೆದ ಕೆಂಗೇರಿಯ ವಿಲೇಜ್ ಅಕೌಂಟೆಂಟ್ ಸತೀಶ್ ಕುಮಾರ್, ರೆವಿನ್ಯೂ ಇನ್ಸ್ಪೆಕ್ಟರ್ ಅರುಣ್ ಕುಮಾರ್ ಹಾಗೂ ಡೆಪ್ಯೂಟಿ ತಹಶೀಲ್ದಾರ್, ಅದು ನಕಲಿ ಎಂದು ಗೊತ್ತಿದ್ದರೂ ಖಾತೆ ಮಾಡಿಕೊಟ್ಟಿದ್ದರು. ಆಸ್ತಿ ಕೈ ಸೇರಿದ ತಕ್ಷಣ ಆರೋಪಿಗಳು ಅದನ್ನು ಬೇರೆಯವರಿಗೆ ಮಾರಾಟ ಮಾಡಿ ಹಣ ಮಾಡಿಕೊಂಡಿದ್ದರು.

ಮಠದಿಂದ ದೂರು: ಬಯಲಾಯ್ತು ವಂಚನೆ

ಕೊನೆಗೆ ಜಮೀನು ಹಸ್ತಾಂತರವಾಗಿರುವ ವಿಚಾರ ತಿಳಿದು ಆದಿಚುಂಚನಗಿರಿ ಮಠದ ವತಿಯಿಂದ ಕೆಂಗೇರಿ ಠಾಣೆಗೆ ದೂರು ನೀಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಈ ವಂಚನೆ ಬಯಲಾಗಿದೆ. ಸದ್ಯ 6 ಅಧಿಕಾರಿಗಳು ಸೇರಿದಂತೆ 11 ಜನರನ್ನು ಜೈಲಿಗಟ್ಟಲಾಗಿದ್ದು, ತಲೆಮರೆಸಿಕೊಂಡಿರುವ ಮಾಸ್ಟರ್ ಮೈಂಡ್ ನರೇಶ್ ಗೌಡನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:31 pm, Tue, 14 July 26

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ