AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟೆಕ್ಕಿ ಪೂಜಾ ಅನುಮಾನಾಸ್ಪದ ಸಾವಿಗೆ ರೋಚಕ ಟ್ವಿಸ್ಟ್: 6 ತಿಂಗಳ ಬಳಿಕ ಸತ್ಯಾಂಶ ಬಯಲು

ಟೆಕ್ಕಿ ಆಕೆ ಆ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಟೆಕ್ಕಿ, ಮನೆಯಲ್ಲೇ ಬೆತ್ತಲೆಯಾಗಿ ಶವವಾಗಿ ಪತ್ತೆಯಾಗಿದ್ದಳು. ಹೀಗಾಗಿ ಆಕೆಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿತ್ತು. ಕೊಲೆ ಆರೋಪವು ಕೇಳಿ ಬಂದಿತ್ತು. ಆದರೆ 6 ತಿಂಗಳ ಬಳಿಕ ಟೆಕ್ಕಿ ಸಾವಿಗೆ ಅಸಲಿ ಕಾರಣ ಗೊತ್ತಾಗಿದೆ. ಹಾಗಾದ್ರೆ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದ ಅಂಶವೇನು ಎನ್ನುವ ಡಿಟೇಲ್ಸ್ ಇಲ್ಲಿದೆ.

ಬೆಂಗಳೂರಿನಲ್ಲಿ ಟೆಕ್ಕಿ ಪೂಜಾ ಅನುಮಾನಾಸ್ಪದ ಸಾವಿಗೆ ರೋಚಕ ಟ್ವಿಸ್ಟ್: 6 ತಿಂಗಳ ಬಳಿಕ ಸತ್ಯಾಂಶ ಬಯಲು
Pooja Dutt
ಶಿವಪ್ರಸಾದ್​ ಬಿ.
| Edited By: |

Updated on: Oct 16, 2026 | 9:14 PM

Share

ಬೆಂಗಳೂರು, (ಅಕ್ಟೋಬರ್ 16): ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಜಾರ್ಖಂಡ್ ಮೂಲದ 34 ವರ್ಷದ ಟೆಕ್ಕಿ ಪೂಜಾ ದತ್ತಾ ಸಾವಿನ ಪ್ರಕರಣಕ್ಕೆ ಕೊನೆಗೂ ತೆರೆ ಬಿದ್ದಿದೆ. ಏಪ್ರಿಲ್ 27, 2026ರಂದು ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಪೂಜಾ ದತ್ತಾ ಮೃತದೇಹ ಪತ್ತೆಯಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿದ್ದ ಆಡುಗೋಡಿ ಪೊಲೀಸರು ಎಫ್‌ಎಸ್‌ಎಲ್ ವರದಿಯ ಆಧಾರದಲ್ಲಿ ಅಂತಿಮ ತನಿಖಾ ವರದಿ ಸಲ್ಲಿಸಿದ್ದಾರೆ. ವರದಿಯ ಪ್ರಕಾರ, ಪೂಜಾ ದತ್ತಾ ಸಾವಿಗೆ ಶ್ವಾಸಕೋಶದ ವೈಫಲ್ಯ ಕಾರಣ ಎಂದು ಉಲ್ಲೇಖಿಸಲಾಗಿದೆ.

ಪೂಜಾ ದತ್ತಾ ವಾಸವಿದ್ದ ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು.ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ತೆರೆದು ಪರಿಶೀಲಿಸಿದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತದೇಹದ ಸ್ಥಿತಿ ಮತ್ತು ಮನೆಯೊಳಗಿನ ಪರಿಸ್ಥಿತಿ ಅಂದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಮನೆಯ ಗೋಡೆಗಳು ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಕಾಗದಗಳ ಮೇಲೆ ಬರೆದ ಬರಹಗಳನ್ನು ಅಂಟಿಸಲಾಗಿತ್ತು. ಮನೆಗೆ ಯುವಕನೊಬ್ಬ ಬಂದು ಹೋಗುತ್ತಿದ್ದ ಎಂಬ ಮಾಹಿತಿ ಸಹ ಇತ್ತು. ಈ ಹಿನ್ನೆಲೆ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದರು.

ಇದನ್ನೂ ಓದಿ: ರಾಜ್ಯಾದ್ಯಂತ ಗಮನ ಸೆಳೆದಿದ್ದ ರಿಂಗ್ ರೋಡ್ ಶುಭಾ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಸಂಪುಟ, ಇಲ್ಲಿದೆ ಕೇಸಿನ ವಿವರ

ಸದ್ಯ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಎಫ್‌ಎಸ್‌ಎಲ್ ವರದಿಯಲ್ಲಿ ಸಾವಿಗೆ ಶ್ವಾಸಕೋಶದ ವೈಫಲ್ಯ ಕಾರಣ ಎಂದು ಉಲ್ಲೇಖಿಸಲಾಗಿದೆ. ದೇಹದ ನರಗಳಲ್ಲಿ ರಕ್ತ ಹೆಪ್ಪುಗಟ್ಟಿದ್ದ ಅಂಶವನ್ನೂ ವರದಿಗೆ ಸಂಬಂಧಿಸಿದ ಮಾಹಿತಿಯಲ್ಲಿ ಉಲ್ಲೇಖಿಸಲಾಗಿದೆ. ಪೂಜಾ ದತ್ತಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನುವ ಮಾಹಿತಿಯೂ ಹೊರಬಂದಿದೆ. ಅಂತಿಮವಾಗಿ, ಅನಾರೋಗ್ಯದಿಂದ ಸಾವು ಸಂಭವಿಸಿದೆ ಎಂಬ ಅಭಿಪ್ರಾಯದೊಂದಿಗೆ ಆಡುಗೋಡಿ ಪೊಲೀಸರು ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ. ಕುಟುಂಬದಿಂದ ದೂರವಿದ್ದ ಟೆಕ್ಕಿ ಜೀವನ ಈ ರೀತಿ ಅಂತ್ಯವಾಗಿದ್ದು, ನಿಜವಾಗಿಯೂ ದುರಂತವೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More