ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆ, ಕನಕಲಕ್ಷ್ಮೀ ಬಂಧನ ಆಗಬೇಕು: ವಕೀಲರ ಸಂಘದ ಅಧ್ಯಕ್ಷ ವಿವೇಕ್ ಆಗ್ರಹ

Advocate Jeeva suicide case: ಭೋವಿ ನಿಗಮ ಅವ್ಯವಹಾರದ ಆರೋಪಿ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ವಕೀಲರ ಸಂಘದ ಅಧ್ಯಕ್ಷರು ಒತ್ತಾಯಿಸಿದ್ದಾರೆ. ಜೀವಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆನ್ನಲಾದ ಡಿವೈಎಸ್​ಪಿ ಕನಕಲಕ್ಷ್ಮೀಯನ್ನು ಕೂಡಲೇ ಬಂಧಿಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ. ಜೀವಾಳಿಗೆ ಚಿತ್ರ ಹಿಂಸೆ ನೀಡಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಲಾಗಿದೆ ಎನ್ನುವ ಆರೋಪ ಇದೆ.

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆ, ಕನಕಲಕ್ಷ್ಮೀ ಬಂಧನ ಆಗಬೇಕು: ವಕೀಲರ ಸಂಘದ ಅಧ್ಯಕ್ಷ ವಿವೇಕ್ ಆಗ್ರಹ
ಕ್ರೈಂನ ಸಾಂದರ್ಭಿಕ ಚಿತ್ರ
Follow us
Jagadisha B
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Nov 27, 2024 | 8:22 PM

ಬೆಂಗಳೂರು, ನವೆಂಬರ್ 27: ಬೋವಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿದ್ದ ಜೀವಾ ಎನ್ನುವ ವಕೀಲೆಯ ಆತ್ಮಹತ್ಯೆ ಘಟನೆ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡತೊಡಗಿದೆ. ಎಸ್ ಜೀವಾ ಆತ್ಮಹತ್ಯಾ ಪ್ರಕರಣದ ತನಿಖೆಯ ಯಾವ ಹಂತದಲ್ಲಿದೆ ಎನ್ನುವ ವಿವರವನ್ನು ಒದಗಿಸುವಂತೆ ಪ್ರಾಸಿಕ್ಯೂಶನ್​ಗೆ ಹೈಕೋರ್ಟ್ ಆದೇಶಿಸಿದೆ. ಇದೇ ವೇಳೆ, ಜೀವಾ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮತ್ತು ಜೀವಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದರೆನ್ನಲಾದ ಡಿವೈಎಸ್​ಪಿ ಕನಕಲಕ್ಷ್ಮೀ ಅವರನ್ನು ಬಂಧಿಸಬೇಕು ಎಂದು ರಾಜ್ಯ ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಆಗ್ರಹಿಸಿದ್ದಾರೆ.

ಜೀವಾ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಹೈಕೋರ್ಟ್​ನಲ್ಲಿ ಶನಿವಾರ ಅರ್ಜಿ ಹಾಕಿದ್ದೇವೆ. ಅದಾದ ಕೂಡಲೇ ಆಯುಕ್ತರು ಈ ಪ್ರಕರಣದ ತನಿಖೆ ನಡೆಸಲು ಸಿಸಿಬಿಗೆ ವಹಿಸಿದ್ದಾರೆ. ಸಿಸಿಬಿಯವರು ಯಾವುದೇ ತನಿಖೆ ಮಾಡದೇ ಸುಮ್ಮನಿದ್ದಾರೆ. ಉನ್ನತ ಮಟ್ಟದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಹೆದರುತ್ತಿದ್ದಾರೆ. ಇಲ್ಲಿ ನ್ಯಾಯ ಸಿಗುತ್ತದಾ ಎನ್ನುವುದೇ ಪ್ರಶ್ನೆ ಎಂದು ವಿವೇಕ್ ಸುಬ್ಬಾರೆಡ್ಡಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭೋವಿ ನಿಗಮ ಅವ್ಯವಹಾರ: ನಕಲಿ ಕಂಪನಿಗಳ ಖಾತೆಗೆ ಜಮೆ ಆಯ್ತು ಕೋಟಿ ಕೋಟಿ ಹಣ

ಭೋವಿ ನಿಗಮದ ಹಗರಣ ತನಿಖೆ ಅಲ್ಲ, ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಮಾತ್ರ ಸಿಬಿಐಗೆ ಕೊಡಿ ಎಂಬುದು ತಮ್ಮ ಆಗ್ರಹ ಎಂದು ಹೇಳಿದ ವಕೀಲರ ಸಂಘದ ಅಧ್ಯಕ್ಷರು, ಡಿವೈಎಸ್​ಪಿ ಕನಕಲಕ್ಷ್ಮೀ ಬಂಧನವಾಗಬೇಕೆಂದೂ ಒತ್ತಾಯಿಸಿದ್ದಾರೆ.

ಜೀವಾ ಆತ್ಮಹತ್ಯೆಗೆ ಕನಕಲಕ್ಷ್ಮೀ ಕಾರಣ ಎಂದು ಆರೋಪ

ಭೋವಿ ನಿಗಮ ಅವ್ಯವಹಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ವಕೀಲೆ ಜೀವಾ ಹಾಗು ಇತರರನ್ನು ವಿಚಾರಣೆ ಮಾಡಲಾಗಿತ್ತು. ಈ ವೇಳೆ ಜೀವಾಳಿಗೆ ಡಿವೈಎಸ್​ಪಿ ಕನಕಲಕ್ಷ್ಮೀ ಸಾಕಷ್ಟು ಟಾರ್ಚರ್ ನೀಡಿರುವ ಆರೋಪ ಇದೆ. ಜೀವಾಳ ಬಟ್ಟೆ ಬಿಚ್ಚಿ ಹಲ್ಲೆ ಮಾಡಲಾಗಿದೆ. ಜೀವಾ ಬರೆದಿರುವ 13 ಪುಟಗಳ ಡೆತ್​ನೋಟ್​ನಲ್ಲಿ ಕನಕಲಕ್ಷ್ಮೀ ಹೆಸರನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಕನಕಲಕ್ಷ್ಮೀ ಈ ಹಿಂದೆ ತುಮಕೂರಿನಲ್ಲಿ ಇದ್ದಾಗಲೂ ಹಲ್ಲೆಯ ಆರೋಪ ಹೊಂದಿದ್ದರು. ಅವರನ್ನು ಕೂಡಲೇ ಬಂಧಿಸಬೇಕು ಎಂದು ವಿವೇಕ್ ಸುಬ್ಬಾರೆಡ್ಡಿ ಆಗ್ರಹಿಸಿದ್ದಾರೆ.

ಕನಕಲಕ್ಷ್ಮೀ ಮೇಡಂ ಅವರು ಪ್ರತೀ ದಿನ ನಮ್ಮನ್ನು ಕರೆಸಿ ಸಂಜೆವರೆಗೂ ಟಾರ್ಚರ್ ಕೊಡುತ್ತಿದ್ದರು. ಪ್ರಕರಣ ಸಂಬಂಧ ಏನನ್ನೂ ವಿಚಾರಿಸುತ್ತಿರಲಿಲ್ಲ. ವೈಯಕ್ತಿಕ ವಿಚಾರವನ್ನು ಕೆದಕುತ್ತದ್ದರು. ತಂದೆ ತಾಯಿ ಇಲ್ಲದಿದ್ದರೆ ಹೇಗೆ ಬದುಕುತ್ತೀರಾ ಎನ್ನುತ್ತಿದ್ದರು. 25 ಲಕ್ಷ ರೂ ಲಂಚದ ಹಣ ಕೇಳಿದ್ದರು ಎಂದು ಜೀವಾ ಸಹೋದರೆ ಸಂಗೀತಾ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಶಬರಿಮಲೆ ಭಕ್ತರಿಗಾಗಿ ಹುಬ್ಬಳ್ಳಿ-ಬೆಳಗಾವಿಯಿಂದ ಕೊಲ್ಲಂಗೆ ವಿಶೇಷ ರೈಲು ಸಂಚಾರ

ಇನ್ನು ಜೀವಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ರಾಜ್ಯ ಹೈಕೋರ್ಟ್ ನಿನ್ನೆ ಮಂಗಳವಾರ ಕೈಗೆತ್ತಿಕೊಂಡಿತು. ತನಿಖೆಯಲ್ಲಿನ ಲೋಪಗಳ ಬಗ್ಗೆ ಕೋರ್ಟ್ ಬೇಸರ ವ್ಯಕ್ತಪಡಿಸಿದ್ದು, ಸಿಬಿಐಗೆ ತನಿಖೆ ವಹಿಸಬೇಕೋ ಬೇಡವೋ ಎನ್ನುವ ನಿರ್ಧಾರವನ್ನು ಶುಕ್ರವಾರ ತಿಳಿಸುವುದಾಗಿ ತೀರ್ಪನ್ನು ಕಾಯ್ದಿರಿಸಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ