AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aero India 2023: ಬೆಂಗಳೂರಿನ ಸ್ಟಾರ್ಟ್ ಅಪ್ ಕಂಪನಿಗಳ ಪ್ರಾಡಕ್ಟ್​ಗಳಿಗೆ ಭಾರೀ ಬೇಡಿಕೆ: ಗಮನ ಸೆಳೆದ ಮಾನವ ರಹಿತ ಡ್ರೋನ್

2023ರ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಅದ್ಭತವಾದ ಪ್ರತಿಕ್ರಿಯೆ ದೊರೆಯುತ್ತಿದೆ. ವೈಮಾನಿಕ ಪ್ರದರ್ಶನದಲ್ಲಿ ಬೆಂಗಳೂರಿನ ಸ್ಟಾರ್ಟ್ ಅಪ್ ​ಕಂಪನಿಗಳು ಮೇಲುಗೈ ಸಾಧಿಸಿವೆ. ಬೆಂಗಳೂರು ಮೂಲದ ಗೋಪಾಲನ್ ಏರೋ ಸ್ಪೇಸ್ ಸಂಸ್ಥೆ ತಯಾರಿಸಿದ ಮಾನವ ರಹಿತ ಡ್ರೋನ್​ಗೆ ಭಾರೀ ಬೇಡಿಕೆ ಇದೆ.

Aero India 2023: ಬೆಂಗಳೂರಿನ ಸ್ಟಾರ್ಟ್ ಅಪ್ ಕಂಪನಿಗಳ ಪ್ರಾಡಕ್ಟ್​ಗಳಿಗೆ ಭಾರೀ ಬೇಡಿಕೆ: ಗಮನ ಸೆಳೆದ ಮಾನವ ರಹಿತ ಡ್ರೋನ್
ಮಾನವ ರಹಿತ ಡ್ರೋನ್ (ಸಾಂಧರ್ಬಿಕ ಚಿತ್ರ)
TV9 Web
| Edited By: |

Updated on: Feb 15, 2023 | 12:10 PM

Share

ಬೆಂಗಳೂರು: 2023ರ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಅದ್ಭತವಾದ ಪ್ರತಿಕ್ರಿಯೆ ದೊರೆಯುತ್ತಿದೆ. ಈ ವೈಮಾನಿಕ ಪ್ರದರ್ಶನದಲ್ಲಿ ಬೆಂಗಳೂರಿನ ಸ್ಟಾರ್ಟ್ ಅಪ್ ​ಕಂಪನಿಗಳು ಮೇಲುಗೈ ಸಾಧಿಸಿವೆ. ಬೆಂಗಳೂರು ಮೂಲದ ಗೋಪಾಲನ್ ಏರೋ ಸ್ಪೇಸ್ ಸಂಸ್ಥೆ (Gopalan aerospace Company) ತಯಾರಿಸಿದ ಮಾನವ ರಹಿತ ಡ್ರೋನ್​ಗೆ ಭಾರೀ ಬೇಡಿಕೆ ಇದೆ. ಈ ಡ್ರೋನ್​ಗೆ 80 ಕಿ.ಮೀ. ದೂರದ ಟಾರ್ಗೆಟ್ ಫಿಕ್ಸ್ ಮಾಡುವ ಸಾಮರ್ಥ್ಯ ಹೊಂದಿದೆ. ಈ ಸಂಸ್ಥೆ ಈಗಾಗಲೆ ರಕ್ಷಣಾ ಕ್ಷೇತ್ರಕ್ಕೆ ಯುದ್ಧೋಪಕರಣ ಹಾಗೂ ಮಾನವ ರಹಿತ ಡ್ರೋನ್​ಗಳನ್ನು ತಯಾರು ಮಾಡಿ ನೀಡುತ್ತಿದೆ. ಸದ್ಯ ಈ ಡ್ರೋನ್​ 6 ಕಿ.ಮೀ. ಸುತ್ತಲಿನ ಮಾಹಿತಿ ಸಂಗ್ರಹಿಸುವ ರಾಡಾರ್ ಹೊಂದಿದೆ ಎಂದು ಗೋಪಾಲನ್ ಏರೋಸ್ಪೇಸ್​ ನಿರ್ದೇಶಕ ಪ್ರಭಾಕರ್​ ಮಾಹಿತಿ ನೀಡಿದ್ದಾರೆ.

ಗೋಪಾಲನ್ ಏರೋ ಸ್ಪೇಸ್ ಸಂಸ್ಥೆ 2020ರಲ್ಲಿ ರಾಜ್ಯದ ಉದ್ಯಮ ಕ್ಷೇತ್ರದಲ್ಲಿ 438 ಕೋಟಿ ರೂ. ಅನ್ನು ಹೂಡಿಕೆ ಮಾಡಲು ರಾಜ್ಯ ಸರ್ಕಾರಕ್ಕೆ ಮನವಿ ನೀಡಿತ್ತು. ಈ ಮನವಿಯನ್ನು ಸರ್ಕಾರ ಒಪ್ಪಿಕೊಂಡಿತ್ತು. ಅದರಂತೆ ಈ ಇಂಜಿನಿಯರಿಂಗ್​ ಕಂಪನಿ 2021 ರ ಅಂತ್ಯದಲ್ಲಿ ತನ್ನ ಕಾರ್ಯಾಂಭ ಮಾಡಿತು. ಸಂಸ್ಥೆ ಪ್ರಸ್ತುತ 1000 ಜನರಿಗೆ ಉದ್ಯೋಗವನ್ನು ನೀಡಿದೆ. ಈ ಸಂಸ್ಥೆಯಲ್ಲಿ ವಾಯುಯಾನಕ್ಕೆ ಬೇಕಾಗದ ಸಾಮಗ್ರಿಗಳನ್ನು ತಯಾಗುತ್ತವೆ.

ಇನ್ನು ಈ ಕಂಪನಿ ಬೆಂಗಳೂರಿಂದ 60 ಕಿಮೀ ದೂರದಲ್ಲಿರುವ ಚಿಕ್ಕಬಳ್ಳಾಪುರದಲ್ಲಿದೆ. ಮಾಸ್ತೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಂಪನಿಗೆ 40 ಎಕರೆ ಜಮೀನು ಮಂಜೂರು ಮಾಡಲು ರಾಜ್ಯ ಸರ್ಕಾರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ (ಕೆಐಎಡಿಬಿ) ಸೂಚನೆ ನೀಡಿತ್ತು.

ರಾಜ್ಯ ಸರ್ಕಾರ ಹೊಸ ಕೈಗಾರಿಕಾ ನೀತಿಯ ಅಡಿಯಲ್ಲಿ, ರಾಜ್ಯದಲ್ಲಿ ಉತ್ಪಾದನೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಮಾಹಿತಿ ಮತ್ತು ತಂತ್ರಜ್ಞಾನ, ಏರೋಸ್ಪೇಸ್, ಜೈವಿಕ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್ ಮುಂತಾದ ಕ್ಷೇತ್ರಗಳಲ್ಲಿ ನಿರ್ದಿಷ್ಟ ಹೂಡಿಕೆಗಳನ್ನು ಗುರಿಯಾಗಿಸಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್