AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​ಶೋಗೆ ಇಂದು ಚಾಲನೆ: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಕ್ಷಣಗಣನೆ

Aero India 2025: ಗಾಳಿಯನ್ನು ಸೀಳಿ ಮುನ್ನುಗ್ಗುವ ಮಿಗ್, ಸುಯ್ ಎಂದು ಸಾಗುವ ಸುಖೋಯ್, ಆಗಸದಲ್ಲಿ ಅಪಾಚಿ ಚಾಪರ್ ಆರ್ಭಟ, ರಫೆಲ್ ಫೈಟರ್ ಜೆಟ್ ಮೋಡಿ! ಬಾನಂಗಳದಲ್ಲಿ ಚಿತ್ತಾರ ಮೂಡಿಸಲು ಲೋಹದ ಹಕ್ಕಿಗಳು ರೆಡಿ ಆಗಿವೆ. ಮೈ ನವಿರೇಳಿಸುವ ಐತಿಹಾಸಿಕ ಬೆಂಗಳೂರು ಏರ್​ಶೋಗೆ ಇಂದು ಅದ್ಧೂರಿ ಚಾಲನೆ ಸಿಗುತ್ತಿದೆ.

ಬೆಂಗಳೂರು ಏರ್​ಶೋಗೆ ಇಂದು ಚಾಲನೆ: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಕ್ಷಣಗಣನೆ
ಬೆಂಗಳೂರು ಏರ್ ಶೋ (ಸಂಗ್ರಹ ಚಿತ್ರ)
ಶಾಂತಮೂರ್ತಿ
| Updated By: Digi Tech Desk|

Updated on:Feb 10, 2025 | 9:24 AM

Share

ಬೆಂಗಳೂರು, ಫೆಬ್ರವರಿ 10: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಬೆಂಗಳೂರು ಏರ್​​ ಶೋಗೆ ಇಂದು ಅದ್ದೂರಿ ಚಾಲನೆ ಸಿಗುತ್ತಿದೆ. ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ 4 ದಿನಗಳ ಕಾಲ ವೈಮಾನಿಕ ಪ್ರದರ್ಶನ ನಡೆಯಲಿದೆ. ‘‘ರನ್​ವೇ ಟು ಬಿಲಿಯನ್ ಅಪಾರ್ಚುನಿಟಿಸಿ’’ ಟ್ಯಾಗ್ ಲೈನ್​ನಲ್ಲಿ‌ ಏರ್​ಶೋ-2025 ಆಯೋಜಿಸಲಾಗಿದೆ. ಇಂದು ಬೆಳಗ್ಗೆ 9.30ಕ್ಕೆ ಏರ್​ಶೋಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ನೀಲಾಕಾಶದಲ್ಲಿ ಯುದ್ಧ ವಿಮಾನಗಳು ಘರ್ಜಿಸಲಿವೆ. ಉಕ್ಕಿನ ಹಕ್ಕಿಗಳ ಮ್ಯಾಜಿಕ್ ಕಣ್ತುಂಬಿಕೊಳ್ಳಲು ಜನ ತುದಿಗಾಲಲ್ಲಿ ನಿಂತಿದ್ದಾರೆ.

ಏರ್​​ಶೋದಲ್ಲಿ ರಷ್ಯಾ ಮತ್ತು ಅಮೆರಿಕನ್​ ಫೈಟ್​ ಏರ್​ಕ್ರಾಫ್ಟ್​ಗಳು ಭಾಗಿ ಆಗಲಿವೆ. 100 ದೇಶಗಳ 900ಕ್ಕೂ ಹೆಚ್ಚು ರಕ್ಷಣಾ ಸಾಮಗ್ರಿ ಉತ್ಪಾದಕರು ಭಾಗವಹಿಸಲಿದ್ದಾರೆ. ವಿವಿಧ ಕಂಪನಿಗಳ 100 ಸಿಇಒಗಳು, 50 ವಿದೇಶಿ ಒಎಂಎಸ್ ಉಪಸ್ಥಿತರಿರಲಿದ್ದಾರೆ. ಎಐ, ಸೈಬರ್ ಸೆಕ್ಯುರಿಟಿ, ಡ್ರೋನ್ ಮತ್ತು ಗ್ಲೋಬಲ್​ ಏರೋಸ್ಪೇಸ್ ಪ್ರದರ್ಶನವಿದೆ. ಆತ್ಮನಿರ್ಭರ ಭಾರತದ ಉತ್ಪನ್ನಗಳು ಇರಲಿದ್ದು 10 ಸೆಮಿನಾರ್​​ಗಳು ಆಯೋಜಿಸಲಾಗಿದೆ. ರಕ್ಷಣಾ ವಲಯದಲ್ಲಿ ಹೂಡಿಕೆ, ಸಂಶೋಧನೆ, ಜಾಯಿಂಟ್ ವೆಂಚರ್, ರಕ್ಷಣಾ ವಲಯ ಬಗ್ಗೆ ಚರ್ಚೆ ಆಗಲಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಏರೋ ಇಂಡಿಯಾ ಬರೀ ವೈಮಾನಿಕ ಪ್ರದರ್ಶನ ಅಷ್ಟೇ ಅಲ್ಲ. ದೇಶದ ಆರ್ಥಿಕತೆ, ರಕ್ಷಣಾ ವ್ಯವಸ್ಥೆಯ ಅಭಿವೃದ್ಧಿಗೆ ಉತ್ತಮ ವೇದಿಕೆ ಎಂದಿದ್ದಾರೆ.

ಸಂಚಾರ ಬದಲಾವಣೆ: ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ

ಏರ್​​ಶೋನಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ, ಯಲಹಂಕ ಸುತ್ತಮುತ್ತಲಿನ ಹಲವು ರಸ್ತೆಗಳಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು ಏರ್​ ಶೋ: ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ, ಪಾರ್ಕಿಂಗ್, ಏರ್​ಪೋರ್ಟ್​ಗೆ ಬದಲಿ ಮಾರ್ಗ ವಿವರ ಇಲ್ಲಿದೆ

ನಿಟ್ಟೆ ಮೀನಾಕ್ಷಿ ಕಾಲೇಜು ರಸ್ತೆಯಲ್ಲಿ ಹಾಗೂ ಬಾಗಲೂರು ಮುಖ್ಯರಸ್ತೆಯಲ್ಲೂ ಏಕಮುಖ ಸಂಚಾರ ಇದೆ. GKVK ಕ್ಯಾಂಪಸ್​​​ನಲ್ಲಿ ಸಾರ್ವಜನಿಕರಿಗೆ ಪಾರ್ಕಿಂಗ್ ವ್ಯವಸ್ಥೆ ಇದ್ದು, ಅಲ್ಲಿಂದ ಉಚಿತ ಬಿಎಂಟಿಸಿ ಎಸಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಫೆಬ್ರವರಿ 14ರವರೆಗೆ ಲೋಹದ ಹಕ್ಕಿಗಳು ಚಿತ್ತಾರ ಮೂಡಿಸಲಿವೆ. ಈ ಬಾರಿ 7 ಲಕ್ಷಕ್ಕೂ ಹೆಚ್ಚು ಜನ ಏರ್​ಶೋದಲ್ಲಿ ಭಾಗಿ ಆಗೋ ನಿರೀಕ್ಷೆ ಇದೆ. ವಾಹನ ದಟ್ಟಣೆ ನಿಯಂತ್ರಿಸಲು ಪೊಲೀಸರು ಕೂಡ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:30 am, Mon, 10 February 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ