AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aero India 2025: ಏರ್ ಶೋಗೆ ಬರುವವರಿಗೆ ಬಿಎಂಟಿಸಿ ಉಚಿತ ಬಸ್ ವ್ಯವಸ್ಥೆ, ಈ ಜಾಗದಲ್ಲಿ ಪಾರ್ಕಿಂಗ್

ಬಾನಂಗಳದಲ್ಲಿ ಲೋಹದ ಹಕ್ಕಿಗಳು ಕಲವರ ಮಾಡಲು ಸಜ್ಜಾಗುತ್ತಿವೆ. ಇದೇ ಫೆಬ್ರವರಿ 10 ರಿಂದ 14 ರವರಗೆ ಏರೋ ಇಂಡಿಯಾ 2025 ನಡೆಯಲಿದೆ. ಯಲಹಂಕದ ವಾಯನೆಲೆಯಲ್ಲಿ ನಡೆಯುವ ಏಷ್ಯಾದ ಅತಿ ದೊಡ್ಡ ಏರ್ ಶೋಗೆ ಬರುವವರಿಗೆ ಉಚಿತ ಬಸ್ ಸೇವೆ ಒದಗಿಸಲು ವಾಯುಸೇನೆ ಮುಂದಾಗಿದೆ.

Aero India 2025: ಏರ್ ಶೋಗೆ ಬರುವವರಿಗೆ ಬಿಎಂಟಿಸಿ ಉಚಿತ ಬಸ್ ವ್ಯವಸ್ಥೆ, ಈ ಜಾಗದಲ್ಲಿ ಪಾರ್ಕಿಂಗ್
ಏರ್ ಶೋಗೆ ಬರುವವರಿಗೆ ಬಿಎಂಟಿಸಿ ಉಚಿತ ಬಸ್ ವ್ಯವಸ್ಥೆ (ಸಾಂದರ್ಭಿಕ ಚಿತ್ರ)
Kiran Surya
| Updated By: Digi Tech Desk|

Updated on:Feb 10, 2025 | 9:25 AM

Share

ಬೆಂಗಳೂರು, ಜನವರಿ 28: ಬೆಂಗಳೂರಿನ ಹೆಮ್ಮೆಯ ‘ಏರೋ ಇಂಡಿಯಾ 2025’ ಏರ್ ಶೋಗೆ ದಿನಗಣನೆ ಆರಂಭವಾಗಿದ್ದು, ಈಗಾಗಲೇ ಯಲಹಂಕ ವಾಯುನೆಲೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.‌ ಬೆಂಗಳೂರು ಏರ್ ಶೋ ಏಷ್ಯಾದಲ್ಲೇ ಅತ್ಯಂತ ದೊಡ್ಡ ಏರ್ ಶೋ ಎಂಬ ಹೆಗ್ಗಳಿಕೆ ಹೊಂದಿದೆ. 15ನೇ ಆವೃತ್ತಿಯ ಏರ್ ಶೋಗೆ ದೇಶ ವಿದೇಶಗಳಿಂದ ಲಕ್ಷಾಂತರ ಜನ ಬರಲಿದ್ದಾರೆ.

ಸ್ವಂತ ವಾಹನದಲ್ಲಿ ಬರುವವರಿಗೆ ಪಾರ್ಕಿಂಗ್ ಎಲ್ಲಿ?

ಕರ್ನಾಟಕದ ಜನರು ಕೂಡ ಏರ್ ಶೋ ನೋಡಲು ಸಾವಿರಾರು ಸಂಖ್ಯೆಯಲ್ಲಿ ಬರುವುದರಿಂದ ಟ್ರಾಫಿಕ್ ಜಾಮ್ ಆಗುವುದು ಮಾಮೂಲಿ. ಈಗ ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡುವ ಉದ್ದೇಶದಿಂದ ಯಲಹಂಕ ವಾಯುನೆಲೆಗೆ ಸ್ವಂತ ವಾಹನದಲ್ಲಿ ಬರುವವರಿಗೆ ಜಿಕೆವಿಕೆಯಲ್ಲೇ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಿಸಿ, ಅಲ್ಲಿಂದ ಬಿಎಂಟಿಸಿ ಬಸ್ ಮೂಲಕ, ಹುಣಸೆ ಮಾರನಹಳ್ಳಿ ಬಳಿ‌ ಇರುವ ಯಲಹಂಕ ವಾಯನೆಲೆಗೆ ಉಚಿತವಾಗಿ ಕರೆದೊಯ್ಯಲು ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಏರ್ ಶೋಗೆ ಹೋಗಲು ಉದ್ದೇಶಿಸಿರುವ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.

Gkvk

ಜಿಕೆವಿಕೆಯಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ

180 ಬಿಎಂಟಿಸಿ ಬಸ್ ಕಾಯ್ದಿರಿಸಿದ ವಾಯುಸೇನೆ

ಈಗಾಗಲೇ ಬಿಎಂಟಿಸಿಯಿಂದ 180 ಬಸ್​ಗಳನ್ನು ವಾಯಸೇನೆ ಬುಕ್ ಮಾಡಿದೆ. ಜಿಕೆವಿಕೆಯಿಂದ ಮಾತ್ರವಲ್ಲದೇ, ಯಾರೆಲ್ಲ ಏರ್ ಶೋಗೆ ಟಿಕೆಟ್ ಬುಕ್ ಮಾಡಿಕೊಂಡಿರುತ್ತಾರೋ ಅವರಿಗೆ ಬೆಂಗಳೂರಿನ 10 ಪ್ರಮುಖ ಸ್ಥಳಗಳಿಂದಲೂ ಬಸ್ ವ್ಯವಸ್ಥೆ ಮಾಡಿಸಲು ಮುಂದಾಗಿದ್ದಾರೆ. ಇದರಿಂದ ಏರ್ ಶೋಗೆ ಬರುವವರಿಗೆ ತುಂಬಾ ಸಹಾಯ ಆಗಲಿದೆ ಮತ್ತು ಏರ್ಪೋರ್ಟ್ ರೋಡ್​​ನಲ್ಲಿ ಟ್ರಾಫಿಕ್ ಜಾಮ್ ಆಗುವುದು ತಪ್ಪಲಿದೆ ಎಂಬ ಅಭಿಪ್ರಾಯ ಸಾರ್ವಜನಿಕರಿಂದಲೂ ವ್ಯಕ್ತವಾಗಿದೆ.

ಇದನ್ನೂ ಓದಿ: ಏರ್ ಶೋಗೆ ಮಾಂಸ ಮಾರಾಟ ನಿಷೇಧವೇಕೆ? ವ್ಯಾಪಾರಿಗಳ ವಿರೋಧವೇಕೆ?

ಒಟ್ಟಿನಲ್ಲಿ ಭಾರಿ ಸಂಚಾರ ದಟ್ಟಣೆ ಇರುವ ಏರಿಯಾ ಆಗಿರುವ ಹೆಬ್ಬಾಳ ಮಾರ್ಗದ ವಾಹನ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಈ ರೀತಿ ಸಾರ್ವಜನಿಕ ಬಸ್ ವ್ಯವಸ್ಥೆ ಮಾಡಲಾಗುತ್ತಿದೆ. ಈ ಬಗ್ಗೆ ಹೆಬ್ಬಾಳ ಟ್ರಾಫಿಕ್ ಪೊಲೀಸರು, ಮತ್ತು ಎಸಿಪಿ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳುವ ಮೂಲಕವೂ ಸಾರ್ವಜನಿಕ ಬಸ್ ಸೇವೆಯ ಬಳಕೆ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಉಚಿತ ಬಸ್ ವ್ಯವಸ್ಥೆಯ ಸದ್ಭಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:26 am, Tue, 28 January 25