AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಮ್ಮೆ ಏರ್‌ಶೋ ಧಮಾಕಾ: ‘ಏರೋ ಇಂಡಿಯಾ-2027’ ದಿನಾಂಕ ಘೋಷಣೆ

ಬೆಂಗಳೂರಿನಲ್ಲಿ ಏರೋ ಇಂಡಿಯಾ ೨೦೨೭ ರ ೧೬ನೇ ಆವೃತ್ತಿಯು ಫೆಬ್ರವರಿ ೮ ರಿಂದ ೧೨ ರವರೆಗೆ ಯಲಹಂಕ ವಾಯುನೆಲೆಯಲ್ಲಿ ನಡೆಯಲಿದೆ. HAL ಆಯೋಜಿಸುವ ಈ ಜಾಗತಿಕ ಏರೋಸ್ಪೇಸ್ ಪ್ರದರ್ಶನವು ರಕ್ಷಣಾ ಕಂಪನಿಗಳು, ತಜ್ಞರು ಮತ್ತು ನವೋದ್ಯಮಿಗಳನ್ನು ಒಂದೇ ಸೂರಿನಡಿ ತರಲಿದೆ. ಯುದ್ಧ ವಿಮಾನಗಳ ಪ್ರದರ್ಶನ ಹಾಗೂ ವೈಮಾನಿಕ ಸಾಹಸಗಳು ಕಣ್ಣಿನ ಹಬ್ಬವಾಗಲಿವೆ.

ಬೆಂಗಳೂರಿನಲ್ಲಿ ಮತ್ತೊಮ್ಮೆ ಏರ್‌ಶೋ ಧಮಾಕಾ: 'ಏರೋ ಇಂಡಿಯಾ-2027' ದಿನಾಂಕ ಘೋಷಣೆ
ಸಾಂದರ್ಭಿಕ ಚಿತ್ರ Image Credit source: Google
ಕಿರಣ್​ ಸೂರ್ಯ
| Edited By: |

Updated on: Sep 02, 2026 | 10:38 PM

Share

ಬೆಂಗಳೂರು, ಸೆ.2: ದೇಶದ ಸಾಫ್ಟ್‌ವೇರ್ ಹಾಗೂ ಏರೋಸ್ಪೇಸ್ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಮ್ಮೆ ಜಾಗತಿಕ ಮಟ್ಟದ ಏರ್‌ಶೋ (Air Show) ಸದ್ದು ಮಾಡಲಿದೆ. ಏರೋ ಇಂಡಿಯಾ ೨೦೨೭ರ (Aero India 2027) ೧೬ನೇ ಆವೃತ್ತಿಯು ರಾಜಧಾನಿ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಆಯೋಜನೆಯಾಗಲಿದ್ದು, ದಿನಾಂಕಗಳನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.

2027 ರ ಫೆಬ್ರವರಿ 8 ರಿಂದ 12 ರವರೆಗೆ ಒಟ್ಟು 5 ದಿನಗಳ ಕಾಲ ಈ ಬೃಹತ್ ಏರೋಸ್ಪೇಸ್ ಪ್ರದರ್ಶನ ನಡೆಯಲಿದೆ. ಭಾರತ ಸರ್ಕಾರದ ರಕ್ಷಣಾ ಉತ್ಪಾದನಾ ಇಲಾಖೆಯ ಪರವಾಗಿ ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಪ್ರಮುಖ ನೋಡಲ್ ಏಜೆನ್ಸಿಯಾಗಿ (Nodal Agency) ಕಾರ್ಯನಿರ್ವಹಿಸಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಿದ್ಧತೆಗಳನ್ನು ಆರಂಭಿಸಿದೆ.

ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಈ ಪ್ರದರ್ಶನವು ಪ್ರಪಂಚದ ಮುಂಚೂಣಿಯ ಏರೋಸ್ಪೇಸ್ ಹಾಗೂ ರಕ್ಷಣಾ ವಲಯದ ಬೃಹತ್ ಕಂಪನಿಗಳನ್ನು ಒಂದೇ ಸೂರಿನಡಿ ತರಲಿದೆ. ಜಾಗತಿಕ ತಂತ್ರಜ್ಞಾನ ತಜ್ಞರು, ನವೋದ್ಯಮಿಗಳು (Startups), ವಿವಿಧ ದೇಶಗಳ ರಕ್ಷಣಾ ಪಡೆಗಳ ಹಿರಿಯ ಅಧಿಕಾರಿಗಳು ಹಾಗೂ ಜಾಗತಿಕ ನೀತಿ ನಿರೂಪಕರು ಈ ಬೃಹತ್ ಆವೃತ್ತಿಯಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಶಾಲೆಯಲ್ಲಿ ಬಿಸಿಯೂಟ ಸೇವಿಸುವಾಗಲೇ ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು

ವೈಮಾನಿಕ ಸಾಹಸಗಳು ಹಾಗೂ ಅತ್ಯಾಧುನಿಕ ಯುದ್ಧ ವಿಮಾನಗಳ ಪ್ರದರ್ಶನಕ್ಕೆ ಯಲಹಂಕ ವಾಯುನೆಲೆ ಮತ್ತೊಮ್ಮೆ ಸಾಕ್ಷಿಯಾಗಲಿದ್ದು, ಬೆಂಗಳೂರಿಗರಿಗೆ ಭರಪೂರ ಕಣ್ಣಿನ ಹಬ್ಬ ಕಾಯುತ್ತಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ