AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 13, 14 ರಂದು ಬೆಂಗಳೂರಿನ ಈ ಭಾಗದ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರಿನ ಯಲಹಂಕ ಭಾಗದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 2025ರ ಫೆಬ್ರವರಿ ತಿಂಗಳ 13 ಮತ್ತು 14ನೇ ತಾರೀಖಿನಂದು ಸರ್ಕಾರಿ ಪ್ರಥಮ ದರ್ಜೆ, ಖಾಸಗಿ ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳ ತರಗತಿಗಳನ್ನು ರದ್ದುಪಡಿಸಬೇಕು ಎಂದು ಕರ್ನಾಟಕ ಶಿಕ್ಷಣ ಇಲಾಖೆ ಆದೇಶ ಹೊರಪಡಿಸಿದೆ.

ಫೆಬ್ರವರಿ 13, 14 ರಂದು ಬೆಂಗಳೂರಿನ ಈ ಭಾಗದ ಕಾಲೇಜುಗಳಿಗೆ ರಜೆ ಘೋಷಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 28, 2025 | 10:56 PM

Share

ಬೆಂಗಳೂರು, (ಜನವರಿ 28): ಇದೇ ಫೆಬ್ರವರಿ 13, 14ರಂದು ಏರ್ ಶೋ ಹಿನ್ನೆಲೆಯಲ್ಲಿ ಬೆಂಗಳೂರಿನ ಯಲಹಂಕ ವಾಯುನೆಲೆ ಸುತ್ತಮುತ್ತಲಿನ ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪದವಿ ಕಾಲೇಜುಗಳ ತರಗತಿ ರದ್ದುಗೊಳಿಸಿ ಕಾಲೇಜು ಶಿಕ್ಷಣ ಇಲಾಖೆ ಇಂದು (ಜನವರಿ 28) ಆದೇಶ ಹೊರಡಿಸಿದೆ.  ಏರ್ ಫೋರ್ಸ್ ಸ್ಟೇಷನ್ ಮತ್ತು ಯಲಹಂಕದ ಸುತ್ತಮುತ್ತಲಿನ ಕಾಲೇಜುಗಳಿಗೆ ಈ ಆದೇಶ ಅನ್ವಯವಾಗಲಿದೆ. ಪ್ರಕಟಣೆಯಲ್ಲಿ ಪ್ರತ್ಯೇಕವಾಗಿ ಕಾಲೇಜುಗಳ ಹೆಸರನ್ನು ಸೂಚಿಸಿಲ್ಲ.

ಫೆಬ್ರವರಿ 13 ಮತ್ತು 14ರಂದು ಬೆಂಗಳೂರಿನ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ಏಷ್ಯಾದ ಅತಿದೊಡ್ಡ ಏರ್ ಶೋ ನಡೆಯಲಿದೆ. ಈ ಏರ್ ಶೋ ವೀಕ್ಷಿಸಲು ದೇಶ-ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಗಣ್ಯರು ಆಗಮಿಸುತ್ತಾರೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಸರ್ಕಾರಿ ಪ್ರಥಮ ದರ್ಜೆ, ಖಾಸಗಿ ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳ ತರಗತಿಗಳನ್ನು ರದ್ದುಪಡಿಸಲು ಶಿಕ್ಷಣ ಇಲಾಖೆ ಸೂಚಿಸಿದೆ.

ಇದನ್ನೂ ಓದಿ: ಬೆಂಗಳೂರು ಏರ್ ಶೋ ವೇಳೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಬಂದ್: ಇಲ್ಲಿದೆ ವಿವರ

ಬೆಂಗಳೂರು ಏರ್ ಶೋ ‘ಏರೋ ಇಂಡಿಯಾ 2025’ಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಮತ್ತೊಂದೆಡೆ, ಏರ್ ಶೋ ವೇಳೆ ಅತ್ತ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಪ್ರಯಾಣಿಕ ವಿಮಾನಗಳ ಹಾರಾಟದಲ್ಲಿ ತುಸು ವ್ಯತ್ಯಯಕ್ಕೂ ಕಾರಣವಾಗಲಿದೆ. ಏರ್ ಶೋ ನಡೆಯುವ ಸಂದರ್ಭಗಳಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತಗೊಳ್ಳಲಿದೆ.

ಇನ್ನು ಅಂತರರಾಷ್ಟ್ರೀಯ ಏರ್‌ ಶೋ ನಡೆಯುವ ಯಲಹಂಕ ವಾಯುನೆಲೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾಂಸ ಮಾರಾಟವನ್ನ ನಿಷೇಧ ಮಾಡಲಾಗುತ್ತೆ. ಅದರಂತೆ, ಈ ಬಾರಿಯೂ ಸಹ ಬೃಹತ್​ ಬೆಂಗಳೂರು ಮಹಾನಗರ ಪಾಲೀಕೆ (BBMP) ಯಲಹಂಕ ವಲಯದ ಏರ್‌ಪೋರ್ಸ್‌ ಸ್ಟೇಷನ್‌ನಿಂದ 13 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಾಂಸ ಮಾರಾಟದ ಉದ್ಯಮಗಳನ್ನು 26 ದಿನ ಮುಚ್ಚುವಂತೆ ಆದೇಶ ಹೊರಡಿಸಿದೆ. ಪಾಲಿಕೆ ನಿಮಯ ಉಲ್ಲಂಘನೆ ಮಾಡಿದರೇ ಬಿಬಿಎಂಪಿ ಕಾಯ್ದೆ 2020 ಮತ್ತು ಏರ್ ಕ್ರಾಫ್ಟ್ ರೂಲ್ಸ್ 1937 ಪ್ರಕಾರ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ಎಚ್ಚರಿಕೆ ನೀಡಿದೆ.

ಎರಡು ವರ್ಷಕ್ಕೊಮ್ಮೆ ನಡೆಯುವ ಲೋಹದ ಹಕ್ಕಿಗಳ ಮೈನವಿರೇಳಿಸುವ ಪ್ರದರ್ಶನಕ್ಕೆ ಈಗಾಗಲೇ ಸ್ಥಳೀಯ ವಿಮಾನಗಳು, ಚಾಪರ್ಗಳು ಯಲಹಂಕ ಏರ್ ಬೇಸ್​ನಲ್ಲಿ ಬೀಡುಬಿಟ್ಟಿದ್ದರೇ, ವಿದೇಶಗಳಿಂದ ಆಗಮಿಸುವ ಫೈಟರ್ ಜೆಟ್​ಗಳು, ಬಣ್ಣ ಬಣ್ಣದ ಚಿತ್ತಾರ ಮೂಡಿಸಿ ಎಲ್ಲರ ಗಮನ ಸೆಳೆಯುವ ಸೂರ್ಯಕಿರಣ್ ವಿಮಾನಗಳ ತಂಡ ಸೇರಿದಂತೆ ವಿಭಿನ್ನ ಯುದ್ಧ ವಿಮಾನಗಳ ಬರುವಿಕೆಗಾಗಿ ಕೌಂಟ್ ಡೌನ್ ಶುರುವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ