ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಕೊಲೆ ಕೇಸ್; ಜಿ-ನೆಟ್​​ ಕಂಪನಿ ಮಾಲೀಕ, ಎಎಪಿ ಮುಖಂಡ ಅರುಣ್ ಅರೆಸ್ಟ್

ಅಮೃತಹಳ್ಳಿ ಪಂಪಾನಗರದಲ್ಲಿ ನಡೆದ ಜೋಡಿ ಕೊಲೆಗೆ ಅರುಣ್ ಕುಮಾರ್ ಸುಪಾರಿ ನೀಡಿದ್ದ ಎಂಬ ಸತ್ಯ ಬಯಲಾಗಿದೆ. ಅಮೃತಹಳ್ಳಿ ಪೊಲೀಸರು ಆರೋಪಿ ಅರುಣ್​ನನ್ನು ಬಂಧಿಸಿ ವಿಚಾರಣೆ ನಡೆಸಿದ್ದು ಜೋಕರ್​​ ಫಿಲೆಕ್ಸ್​ಗೆ ಸುಪಾರಿ ನೀಡಿದ್ದಾಗಿ ಅರುಣ್ ಒಪ್ಪಿಕೊಂಡಿದ್ದಾನೆ.

ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಕೊಲೆ ಕೇಸ್; ಜಿ-ನೆಟ್​​ ಕಂಪನಿ ಮಾಲೀಕ, ಎಎಪಿ ಮುಖಂಡ ಅರುಣ್ ಅರೆಸ್ಟ್
ಅರುಣ್ ಕುಮಾರ್
Follow us
ರಾಚಪ್ಪಾಜಿ ನಾಯ್ಕ್
| Updated By: ಆಯೇಷಾ ಬಾನು

Updated on:Jul 13, 2023 | 12:17 PM

ಬೆಂಗಳೂರು: ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಕೊಲೆ ಪ್ರಕರಣಕ್ಕೆ( Double Murder Case) ಸಂಬಂಧಿಸಿ ಜಿ-ನೆಟ್​​ ಕಂಪನಿ ಮಾಲೀಕ, ಎಎಪಿ ಮುಖಂಡ ಅರುಣ್ ಕುಮಾರ್​ನನ್ನು(Arun Kumar) ಅಮೃತಹಳ್ಳಿ ಪೊಲೀಸರು(Amruthahalli Police) ಜು.12ರ ರಾತ್ರಿ ಬಂಧಿಸಿದ್ದಾರೆ. ಆರೋಪಿ ಅರುಣ್ ಕುಮಾರ್ ಎಂಡಿ ಫಣೀಂದ್ರ, ಸಿಇಒ ವಿನುಕುಮಾರ್ ಕೊಲೆಗೆ ಸುಪಾರಿ ನೀಡಿದ್ದಾಗಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ.

ಅಮೃತಹಳ್ಳಿ ಪಂಪಾನಗರದಲ್ಲಿ ನಡೆದ ಜೋಡಿ ಕೊಲೆಗೆ ಅರುಣ್ ಕುಮಾರ್ ಸುಪಾರಿ ನೀಡಿದ್ದ ಎಂಬ ಸತ್ಯ ಬಯಲಾಗಿದೆ. ಅಮೃತಹಳ್ಳಿ ಪೊಲೀಸರು ಆರೋಪಿ ಅರುಣ್​ನನ್ನು ಬಂಧಿಸಿ ವಿಚಾರಣೆ ನಡೆಸಿದ್ದು ಜೋಕರ್​​ ಫಿಲೆಕ್ಸ್​ಗೆ ಸುಪಾರಿ ನೀಡಿದ್ದಾಗಿ ಅರುಣ್ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ ಪೊಲೀಸರ ಬಳಿ ಸತ್ಯ ಬಾಯ್ಬಿಟ್ಟಿದ್ದಾನೆ. ಕೊಲೆಯಾದ ಫಣೀಂದ್ರ, ವಿನುಕುಮಾರ್ ಇಬ್ಬರೂ ಜಿ-ನೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ಫಿಲೆಕ್ಸ್​ ಕೂಡಾ ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ ಫಣೀಂದ್ರ, ವಿನುಕುಮಾರ್ ಜಿ-ನೆಟ್ ಕಂಪನಿ ಬಿಟ್ಟು ಹೊಸ ಕಂಪನಿ ಆರಂಭಿಸಿದ್ದರು. ಜಿ-ನೆಟ್​​ ಕಂಪನಿಯ ಹಲವು ನೌಕರರು ಫಣೀಂದ್ರ ಕಂಪನಿಗೆ ಸೇರಿದ್ದರು. ಇದರಿಂದ ಜಿ-ನೆಟ್​​ ಕಂಪನಿ ನಷ್ಟಕ್ಕೆ ಸಿಲುಕಿತ್ತು. ಇದರಿಂದ ಅರುಣ್ ಆಕ್ರೋಶಗೊಂಡಿದ್ದ. ಹೀಗಾಗಿ ಅರುಣ್, ಫಣೀಂದ್ರ ನಡುವೆ ವೈಮನಸ್ಸು ಉಂಟಾಗಿತ್ತು. ಇದರಿಂದ ಫಣೀಂದ್ರ ಕೊಲೆಗೆ ಫಿಲೆಕ್ಸ್​​ಗೆ ಸುಪಾರಿ ನೀಡಿದ್ದ ಎಂದು ವಿಷಯ ತಿಳಿದು ಬಂದಿದೆ.

ಇದನ್ನೂ ಓದಿ: ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಕೊಲೆ ಕೇಸ್​: ಹತ್ಯೆ ಹಿಂದಿದೆಯಾ ಜಿ-ನೆಟ್​​ ಕಂಪನಿ ಮಾಲೀಕನ ಕೈವಾಡ?

ಕೊಲೆ ಮಾಡಿ ಯಾವ ರೀತಿ ಎಸ್ಕೇಪ್ ಆಗಬೇಕೆಂಬ ಬಗ್ಗೆಯೂ  ಪ್ಲಾನ್ ಮಾಡಿದ್ದ ಹಂತಕರು

ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಕೊಲೆ ಮಾಡಿ ಯಾವ ರೀತಿ ಎಸ್ಕೇಪ್ ಆಗ ಬೇಕು ಎಂಬ ಬಗ್ಗೆಯೂ ಹಂತಕರು ಪ್ಲಾನ್ ಮಾಡಿಕೊಂಡಿದ್ದರು. ಬೈಕ್ ನಲ್ಲಿ ಬಂದಿದ್ದ ಹಂತಕರು ಎಸ್ಕೇಪ್ ಆಗಿದ್ದು ಬರಿಗಾಲಲ್ಲಿ. ಕೊಲೆ ನಂತರ ಎಸ್ಕೇಪ್ ಆಗೋದು ಹೇಗೆ ಅನ್ನೊದನ್ನ ಫಿಲೆಕ್ಸ್ ಮೊದಲೆ ಪ್ಲಾನ್ ಮಾಡಿದ್ದ. ಒಂದು ತಿಂಗಳ ಹಿಂದೆಯೇ ಸ್ಥಳಕ್ಕೆ ಬಂದಿದ್ದ ಫಿಲೆಕ್ಸ್, ಎಸ್ಕೇಪ್ ಆಗೋ ರೂಟ್ ಗಳನ್ನ ಪ್ಲಾನ್ ಮಾಡಿದ್ದ.

ಆರೋಪಿಗಳು ಹಿಂಬದಿ ಡೋರ್ ತೆಗೆದು ಕಾಂಪೌಂಡ್ ಹಾರಿ ಎಸ್ಕೇಪ್ ಆಗಿ ನಂತರ ಮುಖ್ಯ ರಸ್ತೆಗೆ ಬಂದು ಓಲಾ ಬುಕ್ ಮಾಡಿದ್ದರು. ಕೊಲೆ ನಂತರ ಫಿಲೆಕ್ಸ್ಅಂಡ್ ಟೀಂ ಎಸ್ಕೇಪ್ ಆಗೋ ಎಕ್ಸ್ ಕ್ಲೂಸಿವ್ ಸಿಸಿಟಿವಿ ದೃಶ್ಯ ಟಿವಿ9ಗೆ ಲಭ್ಯವಾಗಿದೆ. ವಿನಯ್ ಕುಮಾರ್ ರೆಡ್ಡಿ ತನ್ನ ಪ್ಯಾಂಟ್ ನಲ್ಲಿ ಡ್ರ್ಯಾಗರ್ ಇಟ್ಟುಕೊಂಡು ಎಸ್ಕೇಪ್ ಆಗಿದ್ದು ಡ್ರ್ಯಾಗರ್ ಇಟ್ಟುಕೊಳ್ಳಲು ಸಂತೋಷ್ ಸಹಾಯ ಮಾಡಿದ್ದಾನೆ. ಸಾಚಾ ಎಂಬಂತೆ ಆರೋಪಿ ಫಿಲೆಕ್ಸ್ ಜುಬ್ಬ ಧರಿಸಿ ಕೊಲೆ ಮಾಡಲು ಬಂದಿದ್ದ. ಯಾರ ಭಯವೂ ಇಲ್ಲದೇ ರಾಜಾ ರೋಷವಾಗಿ ಆರೋಪಿಗಳು ಎಸ್ಕೇಪ್ ಆದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 11:06 am, Thu, 13 July 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್