ಆಫ್ರಿಕನ್ ಪ್ರಜೆ ಸಾವು, ಪ್ರತಿಭಟನೆ ಮಾಡುತ್ತಿದ್ದ ಆಫ್ರಿಕನ್ ಪ್ರಜೆಗಳಿಂದ ಬೆಂಗಳೂರು ಪೊಲೀಸರ ಮೇಲೆ ಹಲ್ಲೆ

ಆಫ್ರಿಕನ್ ಪ್ರಜೆ ಸಾವು, ಪ್ರತಿಭಟನೆ ಮಾಡುತ್ತಿದ್ದ ಆಫ್ರಿಕನ್ ಪ್ರಜೆಗಳಿಂದ ಬೆಂಗಳೂರು ಪೊಲೀಸರ ಮೇಲೆ ಹಲ್ಲೆ
ಮೃತ ವ್ಯಕ್ತಿ

ಘಟನೆಯ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಆಫ್ರಿಕನ್ ಪ್ರಜೆಗಳಯ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮೃತ ಆಫ್ರಿಕನ್ ಪ್ರಭೆಯನ್ನು ಬಂಧಿಸಿದ್ದ ಪೊಲೀಸರು ಸ್ಥಳಕ್ಕೆ ಬರುವಂತೆ ಪ್ರತಿಭಟನೆ ನಡೆಸಿದ್ದಾರೆ.

TV9kannada Web Team

| Edited By: guruganesh bhat

Aug 02, 2021 | 4:34 PM

ಬೆಂಗಳೂರು: ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿ ಜೆ.ಸಿ.ನಗರ ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆಯೋರ್ವ ಸಾವನ್ನಪ್ಪಿದ್ದಾನೆ. ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ವಿದೇಶಿ ಪ್ರಜೆ ಸಾವನ್ನಪ್ಪಿದ್ದಾನೆ.

ಆಫ್ರಿಕಾ ಪ್ರಜೆ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ 5 ಗ್ರಾಂ ಎಂಡಿಎಂಎ ಪತ್ತೆಯಾಗಿತ್ತು. ಹೀಗಾಗಿ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ವೇಳೆ ಎದೆನೋವು ಮತ್ತು ಶೀತ ಇದೆ ಎಂದು ಆಫ್ರಿಕಾ ಪ್ರಜೆ ಪೊಲೀಸರಿಗೆ ತಿಳಿಸಿದ್ದ. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ಪೊಲೀಸರು ಚಿಕಿತ್ಸೆ ಕೊಡಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಶಕ್ಕೆ ಪಡೆದುಕೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಆತನ ಗುರುತು ಈವರೆಗೂ ಪತ್ತೆಯಾಗಿಲ್ಲ. ಸಾವಿಗೆ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ತಿಳಿಸದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಆಫ್ರಿಕನ್ ಪ್ರಜೆಗಳಯ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮೃತ ಆಫ್ರಿಕನ್ ಪ್ರಭೆಯನ್ನು ಬಂಧಿಸಿದ್ದ ಪೊಲೀಸರು ಸ್ಥಳಕ್ಕೆ ಬರುವಂತೆ ಪ್ರತಿಭಟನೆ ನಡೆಸಿದ್ದಾರೆ.

Follow us on

Related Stories

Most Read Stories

Click on your DTH Provider to Add TV9 Kannada