ಆಟೋ ಪ್ರಯಾಣಿಕರೇ ಗಮನಿಸಿ; ಬೆಂಗಳೂರಿನಲ್ಲಿ ಇವತ್ತಿನಿಂದ ಆಟೋ ಪ್ರಯಾಣ ದರ ಏರಿಕೆ

ಈ ಹಿಂದೆ ಆಟೋದಲ್ಲಿ ಮಿನಿಮಮ್ ಚಾರ್ಚ್ 25 ರೂಪಾಯಿ ಇತ್ತು. ಸದ್ಯ ಈ ದರಕ್ಕೆ ಈಗ ಹೆಚ್ಚುವರಿಯಾಗಿ 5 ರೂಪಾಯಿ ಸೇರ್ಪಡೆಯಾಗಿದ್ದು, ಇಂದಿನಿಂದ ಮಿನಿಮಮ್ ಚಾರ್ಜ್ 30ಕ್ಕೆ ಏರಿಕೆಯಾಗಿದೆ.

ಆಟೋ ಪ್ರಯಾಣಿಕರೇ ಗಮನಿಸಿ; ಬೆಂಗಳೂರಿನಲ್ಲಿ ಇವತ್ತಿನಿಂದ ಆಟೋ ಪ್ರಯಾಣ ದರ ಏರಿಕೆ
ಬೆಂಗಳೂರು ನಗರದ ಆಟೋಗಳು
Follow us
TV9 Web
| Updated By: ಆಯೇಷಾ ಬಾನು

Updated on:Dec 01, 2021 | 7:24 AM

ಬೆಂಗಳೂರು: ಸಂಕಷ್ಟದ ಸಮಯದಲ್ಲೇ ದುನಿಯಾ ಮತ್ತಷ್ಟು ದುಬಾರಿ ಆಗುತ್ತಿದೆ. ಪೆಟ್ರೋಲ್, ಡೀಸೆಲ್ನಿಂದ ಹಿಡಿದು ತರಕಾರಿ ಮತ್ತು ಸಾಂಬರ್ ತನಕ ಬೆಲೆ ಏರಿಕೆ ಆಗಿದೆ. ಅಡುಗೆ ಮನೆಯಲ್ಲಿ ಒಂದು ಟೊಮ್ಯಾಟೊ ಜಾಸ್ತಿ ಕಟ್ ಮಾಡೋಕು ಆಲೋಚನೆ ಮಾಡ್ಬೇಕಾದ ಪರಿಸ್ಥಿತಿ ಎದುರಾಗಿದೆ. ಇಂತಹ ಕ್ಲಿಷ್ಟ ಸಂದರ್ಭದಲ್ಲೇ ಆಟೋ ಚಾಲಕರು ಶಾಕ್ ನೀಡಿದ್ದಾರೆ. ಇಂದಿನಿಂದ ಬೆಂಗಳೂರಿನಾದ್ಯಂತ ಆಟೋ ಪ್ರಯಾಣ ದರ ಏರಿಕೆ ಆಗಿದೆ. ಇದು ಆಟೋವನ್ನೇ ನಂಬಿ ಓಡಾಡುತ್ತಿದ್ದವರಿಗೆ ಹೊರೆಯಾಗಿದೆ.

ದರ ಏರಿಕೆ ಶಾಕ್ ಈ ಹಿಂದೆ ಆಟೋದಲ್ಲಿ ಮಿನಿಮಮ್ ಚಾರ್ಚ್ 25 ರೂಪಾಯಿ ಇತ್ತು. ಸದ್ಯ ಈ ದರಕ್ಕೆ ಈಗ ಹೆಚ್ಚುವರಿಯಾಗಿ 5 ರೂಪಾಯಿ ಸೇರ್ಪಡೆಯಾಗಿದ್ದು, ಇಂದಿನಿಂದ ಮಿನಿಮಮ್ ಚಾರ್ಜ್ 30ಕ್ಕೆ ಏರಿಕೆಯಾಗಿದೆ. ಜೊತೆಗೆ ಪ್ರತಿ ಕಿಲೋ ಮೀಟರ್ಗೆ ಈ ಹಿಂದೆ 13 ರೂಪಾಯಿ ದರ ಇತ್ತು, ಈಗ ಅದನ್ನು 15 ರೂಪಾಯಿಗೆ ಏರಿಕೆ ಮಾಡಲಾಗಿದೆ. ಅದೇ ರೀತಿ ಮೊದಲು ಐದು ನಿಮಿಷ ಕಾಯುವಿಕೆ ಫ್ರೀ ಇದ್ದು, ಐದು ನಿಮಿಷದ ಬಳಿಕ ಪ್ರತಿ ನಿಮಿಷಕ್ಕೆ 5 ರೂಪಾಯಿ ಚಾರ್ಜ್ ಮಾಡಲು ಅವಕಾಶ ಕೊಡಲಾಗಿದೆ. ಅಲ್ದೆ, ಉಚಿತವಾಗಿ 20 ಕೆಜಿ ವರೆಗೆ ಲಗೇಜ್ ಸಾಗಣೆ ಮಾಡಬಹುದು. ಆದ್ರೆ, 21ರಿಂದ 50ಕೆಜಿ ತೂಕದ ಲಗೇಜ್ ಇದ್ರೆ 5 ರೂಪಾಯಿ ಕೊಡಬೇಕಾಗಿದೆ. ಹಾಗೆ ರಾತ್ರಿ ಈ ಹಿಂದಿನಂತೆ ಮೀಟರ್ ಮೇಲೆ ಅರ್ಧದಷ್ಟು ಹೆಚ್ಚುವರಿ ದರ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

8 ವರ್ಷಗಳ ಬಳಿಕ ಆಟೋ ಪ್ರಯಾಣ ದರ ಏರಿಕೆ 2013 ರಲ್ಲಿ ಈ ಹಿಂದೆ ಆಟೋ ದರ ಏರಿಕೆ ಮಾಡಲಾಗಿತ್ತು. ಆದಾದ ಬಳಿಕ ಸಾಕಷ್ಟು ಬಾರಿ ಜಿಲ್ಲಾಡಳಿತಕ್ಕೆ ಈ ಬಗ್ಗೆ ಮನವಿ ಮಾಡಿದ್ರು ಆಟೋ‌ದರ ಏರಿಕೆಗೆ ಮನಸ್ಸು ಮಾಡಿರಲಿಲ್ಲ. ಆದ್ರೀಗ, 8 ವರ್ಷಗಳ ಬಳಿಕ ಆಟೋ ಚಾಲಕರು ಮತ್ತು ಮಾಲೀಕರ ಮನವಿಗೆ ಜಿಲ್ಲಾಡಳಿತ ಸ್ಪಂದಿಸಿ, ಆಟೋ ಪ್ರಯಾಣ ದರ ಏರಿಕೆಗೆ ಅಸ್ತು ಎಂದಿದೆ. ಇದ್ರಿಂದ ಆಟೋ ಚಾಲಕರು ಖುಷಿಯಾಗಿದ್ದು, ಇವತ್ತಿನಿಂದ ಫುಲ್ ಜೋಷ್ನಲ್ಲಿ ರೋಡಿಗಿಳೀತಿದ್ದಾರೆ.

ಇದನ್ನೂ ಓದಿ: ಕಟೀಲ್​ರನ್ನು ಭಯೋತ್ಪಾದಕ ಎನ್ನುವ ಮೋಸಗಾರ ಸಿದ್ದರಾಮಯ್ಯ ಜಮೀರ್ ಅಹ್ಮದ್​​ನಂಥವರನ್ನು ಬೆಳೆಸುತ್ತಾರೆ: ಕೆ ಎಸ್ ಈಶ್ವರಪ್ಪ

Published On - 7:20 am, Wed, 1 December 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ