Rapido ಬೈಕ್​ನಲ್ಲಿ ಕಿಡ್ನಾಪ್, ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ, ಸುಲಿಗೆ

ರ್ಯಾಪಿಡೋ ಬೈಕ್​ನಲ್ಲಿ ವ್ಯಕ್ತಿಯೊಬ್ಬರನ್ನು ಕಿಡ್ನಾಪ್ ಮಾಡಿ ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ ಸುಲಿಗೆ ಮಾಡಿದ ಘಟನೆ ಬೆಂಗಳೂರು ನಗರದ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Rapido ಬೈಕ್​ನಲ್ಲಿ ಕಿಡ್ನಾಪ್, ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ, ಸುಲಿಗೆ
Rapido ಬೈಕ್​ನಲ್ಲಿ ಕಿಡ್ನಾಪ್ ಮಾಡಿ ಸುಲಿಗೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ (ಸಾಂದರ್ಭಿಕ ಚಿತ್ರ)
Follow us
Prajwal Kumar NY
| Updated By: Rakesh Nayak Manchi

Updated on: Sep 09, 2023 | 9:51 AM

ಬೆಂಗಳೂರು, ಸೆ.9: ಯುವಕನೊಬ್ಬನನ್ನು ರ್ಯಾಪಿಡೋ ಬೈಕ್​ನಲ್ಲಿ (Rapido Bike) ಕಿಡ್ನಾಪ್ ಮಾಡಿ ರೂಮ್​ನಲ್ಲಿ ಕೂಡಿಹಾಕಿ ಸುಲಿಗೆ ನಡೆಸಿದ ಘಟನೆ ನಗರದ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮನು ಎಂಬವರು ರ್ಯಾಪಿಡೋ ಬೈಕ್ ಬುಕ್ ಮಾಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಬೈಕ್​ ಅನ್ನು ಏರುತ್ತಿದ್ದಂತೆ ಚಾಲಕ ಚಾಕು ತೋರಿಸಿ ಮನುನನ್ನು ಕಿಡ್ನಾಪ್ ಮಾಡಿದ್ದಾನೆ. ನಂತರ ರೂಮ್​ಗೆ ಕರೆದೊಯ್ದು ಹಲ್ಲೆ ನಡೆಸಿ ಫೋನ್ ಪೇ ಮೂಲಕ ಮೂರು ಸಾವಿರ ರೂ. ವರ್ಗಾಯಿಸಿ ಪರಾರಿಯಾಗಿದ್ದಾನೆ.

ಪವನ್ ಎಂಬಾತ ಕಿಡ್ನಾಪ್ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆ ನಂತರ ಮನು ಗಿರಿನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಕಷ್ಟಕ್ಕೆ ಮರುಗಿದ ರ್ಯಾಪಿಡೋ ಚಾಲಕನಿಗೇ ವಂಚಿಸಿದ ಗ್ರಾಹಕ

ಇತ್ತೀಚೆಗೆ ಬೆಂಗಳೂರು ನಗರದಲ್ಲಿ ರ್ಯಾಪಿಡೋ ಬೈಕ್​ನಿಂದ ಆಗುವ ಅನಾಹುತಗಳು ಹೆಚ್ಚುತ್ತಿವೆ. ಇತ್ತೀಚೆಗೆ, ಮಣಿಪುರದಲ್ಲಿ ನಡೆದ ಮಹಿಳೆಯ ಬೆತ್ತಲೆ ಮೆರವಣಿಗೆ ಖಂಡಿಸಿ ನಗರದ ಟೌನ್​ಹಾಲ್​ನಲ್ಲಿ ನಡೆದ ಪ್ರತಿಘಟನೆಯಲ್ಲಿ ಭಾಗಿಯಾದ ಯುವತಿಯೊಬ್ಬಳಿಗೆ ರ್ಯಾಪಿಡೋ ಬೈಕ್ ಚಾಲಕ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ನಡೆದಿತ್ತು.

ಪ್ರತಿಭಟನೆ ನಂತರ ಮನೆಗೆ ವಾಪಸ್ ಆಗಲು ಯುವತಿಯೊಬ್ಬಳು ರ್ಯಾಪಿಡೊ ಆಟೋ ಬುಕ್ ಮಾಡಿದ್ದಳು. ಇದು ಕ್ಯಾನ್ಸಲ್ ಆದ ಹಿನ್ನೆಲೆ ರ್ಯಾಪಿಡೊ ಬೈಕ್ ಬುಕ್ ಮಾಡಿದ್ದಳು. ಅದರಂತೆ ಸ್ಥಳಕ್ಕೆ ಆಗಮಿಸಿದ ಬೈಕ್ ಹತ್ತಿದ ಯುವತಿಗೆ ಚಾಲಕ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಗ ಮಧ್ಯ ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ನೀಡಿದ್ದನು. ಡ್ರಾಪ್ ಮಾಡಿದ ನಂತರ ಬೈಕ್ ಚಾಲಕ ಯುವತಿಯ ಮೊಬೈಲ್​ಗೆ ಕರೆ ಮಾಡಿ ಕಿರುಕುಳ ನೀಡಿದ್ದನು. ಈ ಬಗ್ಗೆ ನೊಂದ ಯುವತಿ ಟ್ವೀಟ್ ಮಾಡಿದ್ದಳು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ