Bengaluru: ಪ್ರೇಯಸಿಯ ಹುಟ್ಟುಹಬ್ಬ ಆಚರಿಸಿ ಬಳಿಕ ಚಾಕುವಿನಿಂದ ಕತ್ತು ಕೊಯ್ದು ಬರ್ಬರ ಕೊಲೆ

ಪ್ರೇಯಸಿಯ ಹುಟ್ಟುಹಬ್ಬವನ್ನ ಆಚರಿಸಿ, ಖುಷಿಯಲ್ಲಿ ಕೇಕ್ ಕತ್ತರಿಸಿ ಬಳಿಕ ಆಕೆಯ ಕುತ್ತಿಗೆಯನ್ನ ಕೊಯ್ದು ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ. ನವ್ಯ (24) ಕೊಲೆಯಾದ ಯುವತಿ.

Bengaluru: ಪ್ರೇಯಸಿಯ ಹುಟ್ಟುಹಬ್ಬ ಆಚರಿಸಿ ಬಳಿಕ ಚಾಕುವಿನಿಂದ ಕತ್ತು ಕೊಯ್ದು ಬರ್ಬರ ಕೊಲೆ
ಕೊಲೆ ಮಾಡಿದ ಯುವಕ ಪ್ರಶಾಂತ್
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 15, 2023 | 9:46 AM

ಬೆಂಗಳೂರು: ಪ್ರೇಯಸಿಯ ಹುಟ್ಟುಹಬ್ಬವನ್ನ ಆಚರಿಸಿ, ಖುಷಿಯಲ್ಲಿ ಕೇಕ್ ಕತ್ತರಿಸಿ ಬಳಿಕ ಆಕೆಯ ಕುತ್ತಿಗೆಯನ್ನ ಕೊಯ್ದು ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ. ನವ್ಯ (24) ಕೊಲೆಯಾದ ಯುವತಿ. ಪೊಲೀಸ್ ಇಲಾಖೆಗೆ ಆಂತರಿಕ ಭದ್ರತಾ ವಿಭಾಗದಲ್ಲಿ ಕ್ಲರ್ಕ್ ಆಗಿದ್ದ ನವ್ಯ, ಕಳೆದ ಆರು ವರ್ಷಗಳಿಂದ ಪ್ರಶಾಂತ್ ಎಂಬುವವನನ್ನ ಪ್ರೀತಿಸುತ್ತಿದ್ದಳು. ನವ್ಯ ಹಾಗೂ ಪ್ರಶಾಂತ್ ಇಬ್ಬರು ಕನಕಪುರ ಮೂಲದ ದೂರ ಸಂಬಂಧಿಕರು. ಕಳೆದ ಮಂಗಳವಾರ ನವ್ಯ ಬರ್ತಡೇ ಇತ್ತು. ಅಂದು ಬ್ಯುಸಿ ಇದ್ದೇನೆಂದು ಹೇಳಿದ್ದ ಪ್ರಶಾಂತ್ ನಿನ್ನೆ(ಏ.14) ಬರ್ತಡೇ ಸೆಲೆಬ್ರೇಷನ್​ಗೆ ಪ್ಲಾನ್ ಮಾಡಿ ಅದರಂತೆ ರಾತ್ರಿ ಕೇಕ್ ಕಟ್ಟು ಮಾಡಿ ಕೇಕ್‌ ತಿನ್ನಿಸಿದ್ದ. ಬಳಿಕ ಹರಿತವಾದ ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾನೆ. ಇನ್ನು ಮೃತ ಯುವತಿಯ ಶವವನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸದ್ಯ ಪೊಲೀಸರು ಆರೋಪಿಯನ್ನ ಬಂಧಿಸಿ ತನಿಖೆ ಮುಂದುವರೆಸಿದ್ದಾರೆ. ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಯುವತಿಯ ಮೇಲಿನ ಅನುಮಾನದ ಹುಚ್ಚಿನಿಂದ ಕೊಲೆ ಶಂಕೆ

ಹೌದು ಇತ್ತೀಚೆಗೆ ಮೃತ ಯುವತಿ ಬೇರೆಯವರ ಜೊತೆ ಚಾಟಿಂಗ್ ಮಾಡುತ್ತಾ ಇದ್ದಳು ಎಂದು ಪ್ರಶಾಂತ್ ಅನುಮಾನಿಸಿದ್ದನಂತೆ. ಇದೇ ಕಾರಣಕ್ಕೆ ಇಬ್ಬರ ಮಧ್ಯೆ ಪದೇ ಪದೇ ಜಗಳ ಆಗುತ್ತಿಂತೆ. ಇದೀಗ ಅನುಮಾನದ ಮೇಲೆ ಬರ್ತಡೇ ಆಚರಿಸಿ ಬಳಿಕ ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ:Bengaluru Karaga: ಬೆಂಗಳೂರು ಕರಗ ಹೊತ್ತಿದ್ದ ಜ್ಞಾನೇಂದ್ರ ಕೊಲೆ ಯತ್ನ, ಓರ್ವ ಆರೋಪಿ ಬಂಧನ

ಸಾಲಭಾದೆ ತಾಳಲಾರದೆ ಹೂವಿನ ವ್ಯಾಪಾರಿ ಆತ್ಮಹತ್ಯೆ

ದಾವಣಗೆರೆ: ಜಗಳೂರು ಪಟ್ಟಣದ ಇಂದಿರಾನಗರದಲ್ಲಿ ಸಾಲಭಾದೆ ತಾಳಲಾರದೆ ಹೂವಿನ ವ್ಯಾಪಾರಿ ಶ್ರೀನಿವಾಸ್​ ಆಚಾರ್​(35) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇತ್ತೀಚಿಗೆ ಹೂವಿನ ವ್ಯಾಪಾರದಲ್ಲಿ ನಷ್ಟ ಅನುವಿಸಿದ್ದ ಶ್ರೀನಿವಾಸ ಆಚಾರ್. ಹೂವಿನ ವ್ಯಾಪಾರಕ್ಕಾಗಿ ಮಾಡಿದ ಸಾಲ ಮತ್ತು ಬಡ್ಡಿಗಾಗಿ ಸಾಲಗಾರರ ಕಾಟ ಹೆಚ್ಚಾಗಿತ್ತು. ಇದೇ ಕಾರಣಕ್ಕೆ ಮನೆಯಲ್ಲಿ ಯಾರು ಇಲ್ಲದ ಹಿನ್ನೆಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ