AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಬಂದು ಹೋದವರಿಗೆ ಮತ್ತೊಂದು ಸಮಸ್ಯೆ; ಕೂದಲು ಉದುರುವಿಕೆಗೆ ದಂಗಾದ ಜನತೆ

ಕೊವಿಡ್ ಬಂದು ಹೋದವರಿಗೆ ಬೋಳು ಮಂಡೆಯಾಗುವ ಆತಂಕ ಹೆಚ್ಚಾಗಿದೆ. ಬೆಂಗಳೂರಿನ ಇಎಸ್ಐ ಆಸ್ಪತ್ರೆಗಳು ಸೇರಿದಂತೆ, ನಗರದ ಚರ್ಮ ರೋಗ ತಜ್ಞರ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ತಲೆ ಕೂದಲು ಉದುರುವ ಸಮಸ್ಯೆ ಹೇಳಿಕೊಂಡು ಜನರು ಆಗಮಿಸುತ್ತಿದ್ದಾರೆ.

ಕೊವಿಡ್ ಬಂದು ಹೋದವರಿಗೆ ಮತ್ತೊಂದು ಸಮಸ್ಯೆ; ಕೂದಲು ಉದುರುವಿಕೆಗೆ ದಂಗಾದ ಜನತೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 29, 2021 | 9:46 AM

Share

ಬೆಂಗಳೂರು: ಕೊವಿಡ್ ಬಂದು ಹೋದವರಿಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ಕೊವಿಡ್​ನಿಂದ ಚೇತರಿಸಿಕೊಂಡ 3 ರಿಂದ 4 ತಿಂಗಳ ಬಳಿಕ ತಲೆ ಕೂದಲು ಉದುರುವ ಸಮಸ್ಯೆ ಹೆಚ್ಚಾಗಿದೆ. ದಿನೇ ದಿನೇ ತಲೆ ಕೂದಲು ಉದುರುವ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಈ ಬಗ್ಗೆ ತಜ್ಞ ವೈದ್ಯರು ಪ್ರತಿಕ್ರಿಯೆ ನೀಡಿದ್ದು, ಪೋಷಕಾಂಶಗಳ ಕೊರತೆ, ಮಾನಸಿಕ ಹಾಗೂ ದೈಹಿಕ ಒತ್ತಡ ಇದಕ್ಕೆ ಕಾರಣವಾಗಿದೆ. ಅಲ್ಲದೆ ಅತಿಯಾದ ಔಷಧಿ ಬಳಕೆಯಿಂದ ಕೂದಲು ಉದುರುವಿಕೆ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಕೊವಿಡ್ ಬಂದು ಹೋದವರಿಗೆ ಬೋಳು ಮಂಡೆಯಾಗುವ ಆತಂಕ ಹೆಚ್ಚಾಗಿದೆ. ಬೆಂಗಳೂರಿನ ಇಎಸ್ಐ ಆಸ್ಪತ್ರೆಗಳು ಸೇರಿದಂತೆ, ನಗರದ ಚರ್ಮ ರೋಗ ತಜ್ಞರ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ತಲೆ ಕೂದಲು ಉದುರುವ ಸಮಸ್ಯೆ ಹೇಳಿಕೊಂಡು ಜನರು ಆಗಮಿಸುತ್ತಿದ್ದಾರೆ. ಕೊವಿಡ್ ಬಂದು ಹೋದ ಶೇ.60 ರಷ್ಟು ಜನರಿಗೆ ಈ ಸಮಸ್ಯೆ ಎದುರಾಗಿದೆ. ಅದರಲ್ಲೂ ಮಹಿಳೆಯರಲ್ಲೇ ಹೆಚ್ಚಾಗಿ ಈ ಸಮಸ್ಯೆ ಕಂಡು ಬರುತ್ತಿದೆ.

ಮಾನಸಿಕ ಒತ್ತಡ ಉಂಟಾದಾಗ ಕೂದಲು ಉದುರುವ ಸಮಸ್ಯೆ ಕಾಡುವುದು ಮಾಮೂಲಿ. ಅನಗತ್ಯ ಚಿಂತೆಯಿಂದ ಮಾನಸಿಕ ಸ್ಥಿತಿ ಹದಗೆಡುತ್ತದೆ. ವಿಪರೀತ ಟೆನ್ಷನ್​ನಿಂದ ದೇಹದ ಸ್ಥಿತಿ ದುರ್ಬಗೊಳ್ಳುತ್ತದೆ. ಅದರಲ್ಲಿಯೂ ಕೊವಿಡ್​-19 ಸಾಂಕ್ರಾಮಿಕ ರೋಗ ಜನರಿಗೆ ಹೆಚ್ಚು ಮಾನಸಿಕ ಒತ್ತಡವನ್ನು ತಂದು ಬಿಟ್ಟಿತು. ಇದರಿಂದ ಜನರು ಹೆಚ್ಚು ಗೊಂದಲಕ್ಕೀಡಾದರು ಹಾಗೂ ದೀರ್ಘಕಾಲಿಕ ಕೊವಿಡ್​ ಬಳಿಕವೂ ಸಹ ಕೂದಲುದುರುವ ಸಮಸ್ಯೆ ಕಾಡತೊಡಗಿತು.

ಇದನ್ನೂ ಓದಿ: ಭಾರತದಲ್ಲಿ ಕೊವಿಡ್‌ಗೆ 50 ಲಕ್ಷ ಜನ ಬಲಿ, ಆದ್ರೆ 100 ಕೋಟಿ ಡೋಸ್ ನೀಡಿದ್ದಕ್ಕೆ ಸಂಭ್ರಮಿಸುತ್ತಿದ್ದಾರೆ: ಸಿದ್ದರಾಮಯ್ಯ ವ್ಯಂಗ್ಯ

National Doctor’s Day 2021: ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊವಿಡ್​ ಸಮಯದಲ್ಲಿ ಕೆಲಸ ನಿರ್ವಹಿಸುತ್ತಿರುವ ವೈದ್ಯರು ಎದುರಿಸಿದ ಕೆಲವು ಸಮಸ್ಯೆಗಳು

Published On - 9:37 am, Fri, 29 October 21

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ