AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮಿ ಬೆನ್ನಲ್ಲೇ ಗೃಹಜ್ಯೋತಿ ಪರಿಷ್ಕರಣೆಗೆ ತಯಾರಿ: ಅನರ್ಹರಿಗೆ ಭರ್ಜರಿ ಶಾಕ್​​ ಕೊಡಲು ಸರ್ಕಾರದ ಸಿದ್ಧತೆ

ಗೃಹಲಕ್ಷ್ಮಿ ಬೆನ್ನಲ್ಲೇ ಗೃಹಜ್ಯೋತಿ ಯೋಜನೆಗೂ ಮೇಜರ್ ಸರ್ಜರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ವಾಣಿಜ್ಯ ಬಳಕೆ ಮತ್ತು ಹೊರರಾಜ್ಯದ ಅನರ್ಹ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಇ-ಕೆವೈಸಿ ಮೂಲಕ ಮರುಪರಿಶೀಲನೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಮತ್ತೊಂದೆಡೆ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಮಾಹಿತಿ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್​​, ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆ ಕೊಡುತ್ತೇವೆ ಎಂದಿದ್ದಾರೆ.

ಗೃಹಲಕ್ಷ್ಮಿ ಬೆನ್ನಲ್ಲೇ ಗೃಹಜ್ಯೋತಿ ಪರಿಷ್ಕರಣೆಗೆ ತಯಾರಿ: ಅನರ್ಹರಿಗೆ ಭರ್ಜರಿ ಶಾಕ್​​ ಕೊಡಲು ಸರ್ಕಾರದ ಸಿದ್ಧತೆ
ಗೃಹಲಕ್ಷ್ಮಿ ಬೆನ್ನಲ್ಲೇ ಗೃಹಜ್ಯೋತಿ ಪರಿಷ್ಕರಣೆಗೆ ತಯಾರಿImage Credit source: DK Shivakumar X Account
ಪ್ರಸನ್ನ ಹೆಗಡೆ
|

Updated on:Jun 15, 2026 | 12:46 PM

Share

ಬೆಂಗಳೂರು, ಜೂನ್​​ 15: ಗ್ಯಾರಂಟಿ ಯೋಜನೆಗಳ ದುರ್ಬಳಕೆ ತಡೆಯಲು ಮೇಜರ್​​ ಸರ್ಜರಿಗೆ ಮುಂದಾಗಿರುವ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಬೆನ್ನಲ್ಲೇ ಮನೆಗೆ 200 ಯೂನಿಟ್​ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಪರಿಷ್ಕರಣೆಗೂ ಮುಂದಾಗಿದೆ. 2 ದಿನಗಳಲ್ಲಿ ಸರ್ಕಾರದಿಂದ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದ್ದು, ಪರಿಷ್ಕರಣೆ ವಿಚಾರವಾಗಿ ಇಲಾಖೆಗೆ ನಿಖರ ಮಾನದಂಡ ಪ್ರಕಟವಾಗಬಹುದೆಂದು ನಿರೀಕ್ಷಿಸಲಾಗಿದೆ.

ಗೃಹಜ್ಯೋತಿ ಯೊಜನೆಯಡಿ ರಾಜ್ಯದ 1.70 ಕೋಟಿ ಕುಟುಂಬಗಳು ಉಚಿತ ವಿದ್ಯುತ್ ಪಡೆಯುತ್ತಿವೆ. ಮಹತ್ವಾಕಾಂಕ್ಷಿ ಈ ಯೋಜನೆಗೆ ಪ್ರತಿ ತಿಂಗಳು 440 ಕೋಟಿ ರೂಪಾಯಿ ಹಣವನ್ನು ಸರ್ಕಾರ ವೆಚ್ಚ ಮಾಡುತ್ತಿದೆ. ಆದರೆ ಹಲವರು ಗೃಹಬಳಕೆ ಹೆಸರಿನಲ್ಲಿ‌ ವಾಣಿಜ್ಯ ಬಳಕೆಗೂ ಫ್ರೀ ವಿದ್ಯುತ್ ಬಳಕೆ ಮಾಡುತ್ತಿರುವ ಮಾಹಿತಿ ಸಿಕ್ಕಿದೆ. ಹೀಗಾಗಿ ಪ್ರಾಪರ್ಟಿ, ಮಳಿಗೆಗಳಿಗೆ ಫ್ರೀ ವಿದ್ಯುತ್ ‌ಪಡೆದವರಿಗೆ ಬಿಸಿ ಮುಟ್ಟಿಸಲು ಸಿದ್ಧತೆ ನಡೆದಿದ್ದು, ಉಚಿತ ವಿದ್ಯುತ್ ಪಡೆಯುತ್ತಿರುವ ಹೊರ ರಾಜ್ಯದ ಜನರಿಗೂ ಶಾಕ್ ಕೊಡಲು ತಯಾರಿ ನಡೆದಿದೆ.ಆಧಾರ್, ಇ-ಕೆವೈಸಿ, ಮೊಬೈಲ್​ ನಂಬರ್ ಮೂಲಕ ಮರುಪರಿಶೀಲನೆ ನಡೆಯಲಿದ್ದು, ಸೇವಾ ಸಿಂಧು ಪೋರ್ಟಲ್​ನಲ್ಲಿ ಇದಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಗೃಹಲಕ್ಷ್ಮಿಯರಿಗೆ ಭರ್ಜರಿ ಶಾಕ್​​ ಕೊಟ್ಟ ಸರ್ಕಾರ; ರಾಜ್ಯಾದ್ಯಂತ ಒಟ್ಟು 3.89 ಲಕ್ಷ ಫಲಾನುಭವಿಗಳಿಗೆ ಕೊಕ್​​

‘ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆ’

ಇನ್ನು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಮಾಹಿತಿ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್​​, ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆ ಕೊಡುತ್ತೇವೆ ಎಂದಿದ್ದಾರೆ. ಈ ಹಿಂದೆ ತರಾತುರಿಯಲ್ಲಿ ಯಾರದ್ದೋ ನಂಬರ್ ಕೊಟ್ಟಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಹಣ ಯಾರದ್ದೋ ಅಕೌಂಟ್​ಗೆ ಹೋಗ್ತಿದೆ. ಅದರ ಬದಲು ಫಲಾನುಭವಿಗಳ ಖಾತೆಗೇ ಹಣ ಸಂದಾಯವಾಗಬೇಕು. ನಾವು ಕರ್ನಾಟಕದವರಿಗೆ ಮಾತ್ರ ಗ್ಯಾರಂಟಿಗಳನ್ನು ಕೋಡೋದು ಎಂದವರು ಸ್ಪಷ್ಟವಾಗಿ ತಿಳಿಸಿದ್ದಾರೆ.

‘ಬಿಜೆಪಿಯವರು ಅಭಿಯಾನ ಮಾಡಲಿ’

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಆಕ್ಷೇಪ ತೆಗೆದಿರುವ ಚಿಪಕ್ಷ ಬಿಜೆಪಿಗರಿಗೆ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ಕೌಂಟರ್​​ ಕೊಟ್ಟಿದ್ದು, ಬಿಜೆಪಿ ತಮ್ಮ ಕಾರ್ಯಕರ್ತರಿಗೆ ಗ್ಯಾರಂಟಿ ಬೇಡ ಅಂತಾ ಅಭಿಯಾನ ಮಾಡಲಿ. ಅವರಿಗೆ ಗ್ಯಾರಂಟಿ ಬೇಡ ಅಂದ್ರೆ ಬೇಡ, ಬೇರೆಯವರು ಪಡೀತಾರೆ. ಆದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಅರ್ಹರಿಗೆ ಗ್ಯಾರಂಟಿ ಸಿಗಬೇಕೆಂದು ಪರಿಷ್ಕರಣೆ ಮಾಡಲಾಗ್ತಿದೆ ಎಂದವರು ಹೇಳಿದ್ದಾರೆ.

ವರದಿ: ಲಕ್ಷ್ಮೀನರಸಿಂಹ, ಟಿವಿ9 ಕನ್ನಡ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:42 pm, Mon, 15 June 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More