ಹೈಕೋರ್ಟ್ ಬಳಿಕ ಮತ್ತೊಂದು ಕೋರ್ಟ್ ಕಲಾಪದ ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ, ದೂರು ದಾಖಲು
ಹೈಕೋರ್ಟ್ ಬಳಿಕ ಮತ್ತೊಂದು ಕೋರ್ಟ್ ಕಲಾಪದ ವೇಳೆ ಅಶ್ಲೀಲ ವಿಡಿಯೋ ಪ್ರದರ್ಶನ ಮಾಡಲಾಗಿದೆ. ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಾಧಿಕರಣದ (ಕೆಎಸ್‌ಎಟಿ) ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ವಿಡಿಯೋ ಪ್ರದರ್ಶನ ಮಾಡಲಾಗಿದೆ. ಈ ಬಗ್ಗೆ ಐಟಿ ಕಾಯ್ದೆ ಸೆಕ್ಷನ್ 67, 67a ಅಡಿ ಪ್ರಕರಣ ದಾಖಲಾಗಿದೆ. ಅಶ್ಲೀಲ ವಿಡಿಯೋ ಪ್ರದರ್ಶಿಸಿದ ಕಿಡಿಗೇಡಿಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು, ಡಿ.13: ವಾರದ ಹಿಂದೆ ಕರ್ನಾಟಕ ಹೈಕೋರ್ಟ್ (Karnataka High Court) ವಿಡಿಯೋ ಕಾನ್ಫರೆನ್ಸ್ ಕಲಾಪದ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ ಮಾಡಿದ ಘಟನೆ ನಡೆದಿತ್ತು. ಇದೀಗ ಮತ್ತೊಮ್ಮೆ ಇದೇ ರೀತಿಯ ಘಟನೆ ಮರುಕಳಿಸಿದೆ. ಹೈಕೋರ್ಟ್ ಬಳಿಕ ಮತ್ತೊಂದು ಕೋರ್ಟ್ ಕಲಾಪದ ವೇಳೆ ಅಶ್ಲೀಲ ವಿಡಿಯೋ ಪ್ರದರ್ಶನ ಮಾಡಲಾಗಿದೆ. ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಾಧಿಕರಣದ (ಕೆಎಸ್‌ಎಟಿ) ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ವಿಡಿಯೋ ಪ್ರದರ್ಶನ ಮಾಡಲಾಗಿದೆ.
ಕೆಎಸ್‌ಎಟಿ ಕಲಾಪ ವೇಳೆ ಅಶ್ಲೀಲ ವಿಡಿಯೋ ಪ್ರದರ್ಶಿಸಿ ದುಷ್ಕೃತ್ಯ ಎಸಗಲಾಗಿದೆ. ಘಟನೆ ಬಗ್ಗೆ ಕೆಎಸ್‌ಎಟಿಯ ಅಧಿಕಾರಿ ಬೆಂಗಳೂರಿನ ಸೆಂಟ್ರಲ್ ಸೆನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ವೇಳೆ ಲಾಗಿನ್ ಆಗಿ ಆಕ್ಷೇಪಾರ್ಹ ವಿಡಿಯೋ ಪ್ರದರ್ಶನ ಮಾಡಿದ ಅನಾಮಧೇಯ ವ್ಯಕ್ಯಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ಅಧಿಕಾರಿಗಳು ಆನ್‌ಲೈನ್ ಕಲಾಪ ಸ್ಥಗಿತಗೊಳಿಸಿದರು. ಈ ಬಗ್ಗೆ ಐಟಿ ಕಾಯ್ದೆ ಸೆಕ್ಷನ್ 67, 67a ಅಡಿ ಪ್ರಕರಣ ದಾಖಲಾಗಿದೆ. ಅಶ್ಲೀಲ ವಿಡಿಯೋ ಪ್ರದರ್ಶಿಸಿದ ಕಿಡಿಗೇಡಿಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ: ಅಪರಿಚಿತ ವ್ಯಕ್ತಿಗಳ ವಿರುದ್ಧ FIR ದಾಖಲು
ಹೈಕೋರ್ಟ್ನಲ್ಲೂ ನಡೆದಿತ್ತು ಇದೇ ರೀತಿಯ ಘಟನೆ
ಇನ್ನು ವಾರದ ಹಿಂದಷ್ಟೇ ಕರ್ನಾಟಕ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ ಮಾಡಲಾಗಿತ್ತು. ಆಗ ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಕಚೇರಿಯ ಎನ್. ಸುರೇಶ್ ಎಂಬುವವರು ದೂರು ನೀಡಿದ್ದರು. ನ್ಯಾಯಾಲಯದ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಐ.ಟಿ. ಕಾಯ್ದೆ ಸೆ. 67, 67(A) ಅಡಿ ಪ್ರಕರಣ ದಾಖಲು ಮಾಡಲಾಗಿತ್ತು.
ವಿಡಿಯೋ ಕಾನ್ಫರೆನ್ಸ್ ನಿರ್ಬಂಧ
ಹೈಕೋರ್ಟ್ ಘಟನೆ ನಡೆಯುತ್ತಿದ್ದಂತೆ ಕರ್ನಾಟಕ ಹೈಕೋರ್ಟ್ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠದಲ್ಲಿನ ಕೋರ್ಟ್‌ಗಳ ವಿಡಿಯೋ ಕಾನ್ಫರೆನ್ಸ್ ಮತ್ತು ಲೈವ್ ಸ್ಟ್ರೀಮಿಂಗ್ ಅನ್ನು ನಿರ್ಬಂಧಿಸಿತ್ತು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ