AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​​.ಕೆ.ಪಾಟೀಲ್​​ ರಾಜೀನಾಮೆ ಎಚ್ಚರಿಕೆ ಬೆನ್ನಲ್ಲೇ ಗದಗದ 3 ತಾಲೂಕುಗಳು ಬರ ಪಟ್ಟಿಗೆ ಸೇರ್ಪಡೆ: ಸಂಖ್ಯೆ 188ಕ್ಕೆ ಏರಿಕೆ

ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ಕೆ. ಪಾಟೀಲ್ ಅವರ ರಾಜೀನಾಮೆ ಎಚ್ಚರಿಕೆಗೆ ಮಣಿದ ರಾಜ್ಯ ಸರ್ಕಾರ, ಗದಗ, ಮುಂಡರಗಿ ಹಾಗೂ ರೋಣ ಸೇರಿದಂತೆ ಮೂರು ತಾಲೂಕುಗಳನ್ನು ಬರ ಪಟ್ಟಿಗೆ ಸೇರ್ಪಡೆ ಮಾಡಿದೆ. 4ನೇ ಹಂತದಲ್ಲಿ ಒಟ್ಟು 11 ತಾಲೂಕುಗಳನ್ನು ಬರ ಪೀಡಿತವೆಂದು ಘೋಷಿಸಲಾಗಿದ್ದು, ಆ ಮೂಲಕ ಒಟ್ಟು ಸಂಖ್ಯೆ 188ಕ್ಕೆ ಏರಿಕೆಯಾಗಿದೆ. ಇದಕ್ಕೂ ಮೊದಲು ಮೂರು ಹಂತಗಳಲ್ಲಿ 177 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿತ್ತು.

ಹೆಚ್​​.ಕೆ.ಪಾಟೀಲ್​​ ರಾಜೀನಾಮೆ ಎಚ್ಚರಿಕೆ ಬೆನ್ನಲ್ಲೇ ಗದಗದ 3 ತಾಲೂಕುಗಳು ಬರ ಪಟ್ಟಿಗೆ ಸೇರ್ಪಡೆ: ಸಂಖ್ಯೆ 188ಕ್ಕೆ ಏರಿಕೆ
ಹೆಚ್​​.ಕೆ.ಪಾಟೀಲ್​​ ರಾಜೀನಾಮೆ ಎಚ್ಚರಿಕೆ ಬೆನ್ನಲ್ಲೇ ಗದಗದ 3 ತಾಲೂಕುಗಳು ಬರ ಪಟ್ಟಿಗೆ ಸೇರ್ಪಡೆImage Credit source: Tv9 Kannada
ಪ್ರಸನ್ನ ಗಾಂವ್ಕರ್​
| Edited By: |

Updated on:Sep 22, 2026 | 9:19 PM

Share

ಬೆಂಗಳೂರು/ಗದಗ, ಸೆಪ್ಟೆಂಬರ್​​ 22: ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​​.ಕೆ. ಪಾಟೀಲ್​​ ಅವರ ರಾಜೀನಾಮೆ ಎಚ್ಚರಿಕೆಗೆ ಮಣಿದ ಕರ್ನಾಟಕ ರಾಜ್ಯ ಸರ್ಕಾರ ಕೊನೆಗೂ ಗದಗ ಜಿಲ್ಲೆಯ ಮೂರು ತಾಲೂಕು ಬರ ಪಟ್ಟಿಗೆ ಸೇರ್ಪಡೆ ಮಾಡಿದೆ. ಗದಗ, ಮುಂಡರಗಿ, ರೋಣ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಗ್ರೌಂಡ್ ಟ್ರುತನಿಂಗ್ ಆಧರಿಸಿ ಬರ ಪೀಡಿತ ತಾಲೂಕು ಎಂದು ಘೋಷಣೆಗೆ ಅರ್ಹ ತಾಲೂಕುಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ಪೈಕಿ ಕನಕಪುರ ತಾಲೂಕು ‘ತೀವ್ರ ಸ್ವರೂಪದ’ ಬರದ ಪಟ್ಟಿಗೆ ಸೇರ್ಪಡೆಯಾಗಿದೆ.  ಗದಗ ಜಿಲ್ಲೆಯ ಮೂರು ತಾಲೂಕುಗಳನ್ನು ಸಾಮಾನ್ಯ ಬರದ ಪಟ್ಟಿಗೆ ಸೇರಿಸಲಾಗಿದೆ.

ಸೆಪ್ಟಂಬರ್ 20ರಂದು ದಗ ತಾಲೂಕಿನ ಮುಳಗುಂದ ಪಟ್ಟಣದಲ್ಲಿ ನಡೆದ ರೈತರ ಹೋರಾಟದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್​​ ಶಾಸಕ ಹೆಚ್​​.ಕೆ. ಪಾಟೀಲ್​​, ಬರ ಘೋಷಣೆ ಸಂಬಂಧ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಅಕ್ಟೋಬರ್ 10ರವರೆಗೆ ರಾಜ್ಯ ಸರ್ಕಾರಕ್ಕೆ ಗಡುವು ಕೊಡುತ್ತೇನೆ. ಅಷ್ಟರೊಳಗೆ ಬರಪೀಡಿತ ತಾಲೂಕು ಎಂದು ಗದಗವನ್ನು ಘೋಷಣೆ ಮಾಡದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಅವರು ಹೇಳಿದ್ದರು. ಆ ಬೆನ್ನಲ್ಲೇ ಸರ್ಕಾರವೀಗ ಗದಗದ ಮೂರು ತಾಲುಕೂಗಳನ್ನು ಬರ ಪಟ್ಟಿಗೆ ಸೇರಿಸಿರುವ ಕಾರಣ ಅನ್ನದಾತರು ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ: ಸರ್ಕಾರದ ವಿರುದ್ಧ ಸಿಡಿದ ಕಾಂಗ್ರೆಸ್​​ ಹಿರಿಯ ಶಾಸಕ: ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಿಸದಿದ್ರೆ ರಾಜೀನಾಮೆ ಎಂದ ಹೆಚ್​​.ಕೆ. ಪಾಟೀಲ್​​

ಒಟ್ಟು 188 ತಾಲೂಕುಗಳು ಬರಪೀಡಿತವೆಂದು ಘೋಷಣೆ

ಕೇಂದ್ರ ಸರ್ಕಾರವು 2020ರಲ್ಲಿ ರೂಪಿಸಿರುವ ಬರ ಘೋಷಣೆಯ ಮಾರ್ಗಸೂಚಿಗಳ ಪ್ರಕಾರವೇ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕಾಗುತ್ತದೆ. ಆ ಮಾನದಂಡಗಳನ್ನು ಅನುಸರಿಸಿ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ನಿರಂತರ ಪರಿಶೀಲನೆಯ ಬಳಿಕ ಮತ್ತೂ 23 ತಾಲೂಕುಗಳನ್ನು ಸೇರ್ಪಡೆ ಮಾಡಲಾಗಿದ್ದು, ಇದೀಗ ಮತ್ತೆ 53 ತಾಲೂಕುಗಳನ್ನು ಪಟ್ಟಿಗೆ ಸೇರಿಸಲಾಗುತ್ತಿದೆ. ಇದರೊಂದಿಗೆ ಒಟ್ಟು 177 ತಾಲೂಕುಗಳು ಬರಪೀಡಿತ ಪ್ರದೇಶಗಳಾಗಿ ಘೋಷಣೆಯಾಗಲಿವೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್​​ ತಿಳಿಸಿದ್ದಾರೆ. ಇಷ್ಟಕ್ಕೇ ಪ್ರಕ್ರಿಯೆ ಮುಗಿಯುವುದಿಲ್ಲ. ನೆಲಮಟ್ಟದ ಪರಿಸ್ಥಿತಿ, ಮಳೆ ಕೊರತೆ, ಬೆಳೆ ಹಾನಿ ಸೇರಿದಂತೆ ನಿಗದಿತ ಮಾನದಂಡಗಳ ಆಧಾರದಲ್ಲಿ ನಿರಂತರ ಮೌಲ್ಯಮಾಪನ ನಡೆಸಲಾಗುವುದು. ಮುಂದಿನ ಹಂತದಲ್ಲಿ ಮತ್ತಷ್ಟು ತಾಲೂಕುಗಳು ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯಿದ್ದು, ಬರಪೀಡಿತ ತಾಲೂಕುಗಳ ಸಂಖ್ಯೆ ಸುಮಾರು 200ರ ವರೆಗೆ ತಲುಪಬಹುದು ಎಂದವರು ತಿಳಿಸಿದ್ದರು.

ಆ ಬೆನ್ನಲ್ಲೇ ಮತ್ತೆ 11 ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸಲಾಗಿದ್ದು, ಒಟ್ಟು ಸಂಖ್ಯೆ 188ಕ್ಕೆ ಏರಿಕೆಯಾಗಿದೆ. ಚನ್ನಪಟ್ಟಣ, ಕನಕಪುರ, ಹಾರೋಹಳ್ಳಿ,  ಜಗಳೂರು,  ಪಿರಿಯಾಪಟ್ಟಣ, ಕುಷ್ಟಗಿ, ತಾಳಿಕೋಟೆ, ಗದಗ, ಮುಂಡರಗಿ, ರೋಣ, ಹಿರೇಕೆರೂರು ತಾಲೂಕುಗಳನ್ನು ಹೊಸದಾಗಿ ಬರ ಪಟ್ಟಿಗೆ ಸೇರಿಸಿ ಘೋಷಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:36 pm, Tue, 22 September 26

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ