AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್‌ಗಳ ಬೆನ್ನಲ್ಲೇ ನಕಲಿ ಕಾಸ್ಮೆಟಿಕ್ಸ್ ಮೇಲೆ ಸರ್ಕಾರದ ಹದ್ದಿನ ಕಣ್ಣು!

ಬೆಂಗಳೂರಿನ ಹೋಟೆಲ್‌ಗಳ ಮೇಲಿನ ದಾಳಿಯ ಬೆನ್ನಲ್ಲೇ, ನಗರದಲ್ಲಿ ಮಾರಾಟವಾಗುತ್ತಿರುವ ನಕಲಿ ಹಾಗೂ ಕಳಪೆ ಕಾಸ್ಮೆಟಿಕ್ಸ್ ಉತ್ಪನ್ನಗಳ ಮೇಲೆ ಹದ್ದಿನ ಕಣ್ಣಿಡಲು ಡ್ರಗ್ಸ್ ಕಂಟ್ರೋಲ್ ಬೋರ್ಡ್ ಮುಂದಾಗಿದೆ. ಲಿಪ್‌ಸ್ಟಿಕ್, ಸೆರಮ್, ಫೇಶಿಯಲ್ ಕ್ರೀಮ್‌ಗಳ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್ ಟೆಸ್ಟ್‌ಗೆ ಕಳುಹಿಸಲು ಪಟ್ಟಿ ಸಿದ್ಧಪಡಿಸಲಾಗಿದೆ. ಈ ಕುರಿತು ಎಚ್ಚರಿಕೆ ನೀಡಿರುವ ಆರೋಗ್ಯ ಸಚಿವ ಯು.ಟಿ.ಖಾದರ್, ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡುವವರನ್ನು ಕ್ಷಮಿಸುವುದಿಲ್ಲ ಎಂದಿದ್ದಾರೆ.

ಹೋಟೆಲ್‌ಗಳ ಬೆನ್ನಲ್ಲೇ ನಕಲಿ ಕಾಸ್ಮೆಟಿಕ್ಸ್ ಮೇಲೆ ಸರ್ಕಾರದ ಹದ್ದಿನ ಕಣ್ಣು!
ಸಾಂದರ್ಭಿಕ ಚಿತ್ರImage Credit source: gettyimages.com
Vinay Kashappanavar
| Edited By: |

Updated on: Aug 09, 2026 | 1:12 PM

Share

ಮುಖ್ಯಾಂಶಗಳು

  • ಹೋಟೆಲ್‌ಗಳ ಬೆನ್ನಲ್ಲೇ ಬೆಂಗಳೂರಿನ ನಕಲಿ ಕಾಸ್ಮೆಟಿಕ್ಸ್ ಜಾಲದ ಮೇಲೆ ದಾಳಿಗೆ ಇಲಾಖೆ ಸಜ್ಜಾಗಿದೆ.
  • ಲಿಪ್‌ಸ್ಟಿಕ್, ಕ್ರೀಮ್‌ಗಳ ಸ್ಯಾಂಪಲ್ ಪಡೆದು ಲ್ಯಾಬ್ ತಪಾಸಣೆಗೆ ಕಳುಹಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
  • ತಪ್ಪು ಮಾಡಿದರೆ ಪಂಚತಾರಾ ಹೋಟೆಲ್‌ಗಳನ್ನೂ ಕ್ಷಮಿಸುವುದಿಲ್ಲ ಎಂದು ಸಚಿವ ಖಾದರ್ ಎಚ್ಚರಿಸಿದ್ದಾರೆ.

ಬೆಂಗಳೂರು, ಆಗಸ್ಟ್ 09: ನಗರದ ಹೋಟೆಲ್‌ಗಳು ಹಾಗೂ ಪಂಚತಾರಾ ಹೋಟೆಲ್‌ಗಳ ಕಿಚನ್ ಮೇಲೆ ಸರಣಿ ದಾಳಿ ನಡೆಸಿ ಶಾಕ್ ನೀಡಿದ್ದ ಆರೋಗ್ಯ ಇಲಾಖೆ, ಈಗ ಸಾರ್ವಜನಿಕರ ಆರೋಗ್ಯಕ್ಕೆ ಹಾನಿ ಉಂಟುಮಾಡುತ್ತಿರುವ ಮತ್ತೊಂದು ದಂಧೆಯ ಮೇಲೆ ಮುಗಿಬೀಳಲು ಸಜ್ಜಾಗಿದೆ.  ಬೆಂಗಳೂರಿನಲ್ಲಿ ವ್ಯಾಪಕವಾಗಿ ಮಾರಾಟವಾಗುತ್ತಿರುವ ಕಳಪೆ ಹಾಗೂ ನಕಲಿ ಸೌಂದರ್ಯವರ್ಧಕಗಳ (Fake Cosmetics) ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಲು ಡ್ರಗ್ಸ್ ಕಂಟ್ರೋಲ್ ಬೋರ್ಡ್ ಸಂಪೂರ್ಣ ರೂಪುರೇಷೆ ಸಿದ್ಧಪಡಿಸಿದೆ.

ಬ್ರಾಂಡೆಡ್ ವಸ್ತುಗಳ ನಕಲಿ ಜಾಲ; ಲ್ಯಾಬ್ ಟೆಸ್ಟ್‌ಗೆ ಸ್ಯಾಂಪಲ್ಸ್

ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಪ್ರಮುಖ ಅಂತರರಾಷ್ಟ್ರೀಯ ಹಾಗೂ ದೇಶಿ ಬ್ರಾಂಡ್‌ಗಳ ಹೆಸರಿನಲ್ಲಿ ನಕಲಿ ಲಿಪ್‌ಸ್ಟಿಕ್, ಪೌಡರ್, ಫೇಶಿಯಲ್ ಕ್ರೀಮ್, ಸ್ಕಿನ್ ಸೆರಮ್ ಸೇರಿದಂತೆ ವಿವಿಧ ಸೌಂದರ್ಯವರ್ಧಕಗಳನ್ನು ರಾಜಾರೋಷವಾಗಿ ಮಾರಾಟ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯು ನಗರದಾದ್ಯಂತ ವಿಶೇಷ ಜಾಗೃತಿ ಮತ್ತು ತಪಾಸಣಾ ಡ್ರೈವ್ ಕೈಗೊಳ್ಳಲಿದೆ. ದಾಳಿಯ ವೇಳೆ ವಶಪಡಿಸಿಕೊಳ್ಳುವ ಕಾಸ್ಮೆಟಿಕ್ಸ್ ಸ್ಯಾಂಪಲ್‌ಗಳನ್ನು ತಕ್ಷಣವೇ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗುತ್ತದೆ. ಲ್ಯಾಬ್ ವರದಿಯಲ್ಲಿ ಇವುಗಳು ಸುರಕ್ಷಿತವಲ್ಲ ಎಂದು ಸಾಬೀತಾದರೆ, ಅಂತಹ ಉತ್ಪನ್ನಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

ದುಡ್ಡು ಕೊಟ್ಟರೂ ಜನರಿಗೆ ಮೋಸ ಯಾಕೆ? ಆರೋಗ್ಯ ಸಚಿವ ಆಕ್ರೋಶ

ಬೆಂಗಳೂರಿನಲ್ಲಿ ಹೋಟೆಲ್ ದಾಳಿಗಳು ಹಾಗೂ ಕಾಸ್ಮೆಟಿಕ್ಸ್ ದಂಧೆ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಯು.ಟಿ. ಖಾದರ್, “ಆಹಾರ ಮತ್ತು ಕಾಸ್ಮೆಟಿಕ್ಸ್ ಎರಡೂ ಅತ್ಯಂತ ದೊಡ್ಡ ವ್ಯವಹಾರ ಕ್ಷೇತ್ರಗಳು. ಕೋವಿಡ್‌ನಂತಹ ಯಾವುದೇ ಸಂಕಷ್ಟ ಬಂದರೂ ಇವುಗಳ ಬ್ಯುಸಿನೆಸ್ ಎಂದಿಗೂ ಕುಗ್ಗುವುದಿಲ್ಲ. ಆದರೆ, ಜನರು ಕಷ್ಟಪಟ್ಟು ದುಡಿದ ಹಣ ನೀಡಿದರೂ ಅವರಿಗೆ ಕಳಪೆ ವಸ್ತುಗಳನ್ನು ನೀಡಿ ಮೋಸ ಮಾಡುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದ್ದಾರೆ.

ಮುಂದುವರಿದು ಮಾತನಾಡಿದ ಅವರು, “ಕಿಡ್ನಿ ವೈಫಲ್ಯ, ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳು ಹೆಚ್ಚಾಗಲು ಇಂತಹ ಕಲಬೆರಕೆ ಹಾಗೂ ಕಳಪೆ ವಸ್ತುಗಳೇ ಕಾರಣವಾಗುತ್ತಿವೆ. ಸಾರ್ವಜನಿಕರು ಈ ಬಗ್ಗೆ ಜಾಗೃತರಾಗಬೇಕು. ಕೇವಲ ಸಣ್ಣ ಪುಟ್ಟ ವ್ಯಾಪಾರಿಗಳಷ್ಟೇ ಅಲ್ಲ, ಪಂಚತಾರಾ ಹೋಟೆಲ್‌ಗಳೂ ಸಹ ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳಬೇಕು. ತಪ್ಪು ಮಾಡಿದವರು ಎಷ್ಟೇ ಪ್ರಭಾವಿಯಾಗಿದ್ದರೂ ಸರ್ಕಾರ ಯಾರನ್ನೂ ಕ್ಷಮಿಸುವುದಿಲ್ಲ. ತಪಾಸಣೆ ನಮ್ಮ ಜವಾಬ್ದಾರಿಯಾಗಿದ್ದು, ಈ ದಾಳಿಗಳು ನಿರಂತರವಾಗಿ ಮುಂದುವರಿಯಲಿವೆ” ಎಂದು ಸಚಿವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ