AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚೆ ಪ್ರಕರಣದ ಬೆನ್ನಲ್ಲೇ ಮಾಲ್, ಪಬ್, ಶಾಪಿಂಗ್ ಕಾಂಪ್ಲೆಕ್ಸ್​​ಗಳಿಗೆ ಕಠಿಣ ನಿಯಮ ರೂಪಿಸಲು ಸಿದ್ಧತೆ

ಬೆಂಗಳೂರಿನ ಜಿಟಿ ಮಾಲ್​​​ನಲ್ಲಿ ಕಳೆದ ಸೋಮವಾರ ರೈತರೊಬ್ಬರಿಗೆ ಪಂಚೆ ಧರಿಸಿದರು ಎಂಬ ಏಕೈಕ ಕಾರಣಕ್ಕೆ ಅವಮಾನಿಸಿ ಪ್ರವೇಶ ನಿರಾಕರಿಸಲಾಗಿತ್ತು. ಸದನದಲ್ಲೂ ಈ ವಿಚಾರ ದೊಡ್ಡಮಟ್ಟದಲ್ಲಿ ಸುದ್ದಿಯಾಗಿತ್ತು ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ನಗರಾಭಿವೃದ್ದಿ ಇಲಾಖೆ ಕಠಿಣ ನಿಯಮ ಜಾರಿಗೊಳಿಸಲು ಸಿದ್ಧತೆ ನಡೆಸುತ್ತಿದೆ.

ಪಂಚೆ ಪ್ರಕರಣದ ಬೆನ್ನಲ್ಲೇ ಮಾಲ್, ಪಬ್, ಶಾಪಿಂಗ್ ಕಾಂಪ್ಲೆಕ್ಸ್​​ಗಳಿಗೆ ಕಠಿಣ ನಿಯಮ ರೂಪಿಸಲು ಸಿದ್ಧತೆ
ಪಂಚೆ, ಸೀರೆ ಧರಿಸಿದವರಿಗೆ ಪ್ರವೇಶ ನಿರಾಕರಿಸಿದ ಮಾಲ್​ಗೆ ಬೀಗ, ದಂಡದ ‘ಗ್ಯಾರಂಟಿ’!
ಕಿರಣ್​ ಸೂರ್ಯ
| Edited By: |

Updated on: Jul 22, 2024 | 7:30 AM

Share

ಬೆಂಗಳೂರು, ಜುಲೈ 22: ಬೆಂಗಳೂರಿನ ಜಿಟಿ ಮಾಲ್​​ನಲ್ಲಿ ಪಂಚೆ ಹಾಕಿದ್ದ ರೈತನಿಗೆ ಕಳೆದ ಸೋಮವಾರ ಸೆಕ್ಯೂರಿಟಿ ಗಾರ್ಡ್ ಪ್ರವೇಶ ನಿರಾಕರಿಸಿದ್ದು ದೊಡ್ಡ ಸುದ್ದಿಯಾಯಿತು. ನಂತರ ಆ ವಿಚಾರ ಸದನದಲ್ಲೂ ಚರ್ಚೆ ಆಗಿತ್ತು. ಸ್ಪೀಕರ್, ಸಚಿವರು, ಶಾಸಕರು ಸೇರಿದಂತೆ ಎಲ್ಲರೂ ವಿರೋಧ ವ್ಯಕ್ತಪಡಿಸಿದ್ದರು. ನಂತರ ಟ್ಯಾಕ್ಸ್ ಕಟ್ಟಿಲ್ಲ ಎಂಬ ಕಾರಣಕ್ಕಾಗಿ ಬಿಬಿಎಂಪಿ ಸದ್ಯ ಏಳು ದಿನಗಳ ಕಾಲ ಮಾಲ್ ಕ್ಲೋಸ್ ಮಾಡಿಸಿದೆ.

ಈ ಹಿನ್ನೆಲೆಯಲ್ಲಿ, ಇನ್ನುಮುಂದೆ ಯಾವುದೇ ಮಾಲ್, ಕ್ಲಬ್ ಸೇರಿದಂತೆ ಶಾಪಿಂಗ್ ಕಾಂಪ್ಲೆಕ್ಸ್​​​ಗಳಲ್ಲಿ ಡ್ರೆಸ್ ಕೋಡ್ ಕಡ್ಡಾಯ ಮಾಡುವಂತಿಲ್ಲ. ಡ್ರೆಸ್ ಕೋಡ್ ಕಡ್ಡಾಯ ಮಾಡಬಾರದು ಎಂದು ಪ್ರತ್ಯೇಕ ಕಾನೂನು ರಚನೆ ಮಾಡಲು ನಗರಾಭಿವೃದ್ದಿ ಇಲಾಖೆ ಮುಂದಾಗಿದೆ. ಈ ಬಗ್ಗೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಯಾವುದೇ ಮಾಲ್, ಕ್ಲಬ್ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್​ಗಳಲ್ಲೂ ಸೀರೆ ಪಂಚೆ ಹಾಕಿಕೊಂಡು ಬರುವ ಜನರಿಗೆ ಪ್ರವೇಶ ನಿರಾಕರಿಸುವಂತಿಲ್ಲ. ಒಂದು ವೇಳೆ ಪ್ರವೇಶ ನಿರಾಕರಿಸಿದರೆ ಆ ಮಾಲ್, ಕ್ಲಬ್ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್ ಬಂದ್ ಮಾಡುವುದು ಅಥವಾ ಭಾರಿ ಮೊತ್ತದ ದಂಡ ವಿಧಿಸಲು ಚಿಂತನೆ ನಡೆಸಲಾಗುತ್ತಿದೆ. ಈಗಾಗಲೇ ಈ ಬಗ್ಗೆ ಅಧಿಕಾರಿಗಳ ಜೊತೆಯಲ್ಲಿ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಒಂದು ಸುತ್ತಿನ ಸಭೆ ನಡೆಸಿದ್ದಾರೆ. ಸಚಿವರ ನಡೆಗೆ ಸಾರ್ವಜನಿಕರಿಂದ ಅಭಿನಂದನೆ ವ್ಯಕ್ತವಾಗಿದೆ.

ಇದನ್ನೂ ಓದಿ: ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳಿಂದ ಹೊಸ ಪ್ಲಾನ್!

ಒಟ್ಟಿನಲ್ಲಿ ಕೆಲ ಮಾಲ್, ರೆಸ್ಟೋರೆಂಟ್, ಪಬ್, ಕ್ಲಬ್ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್​​​ಗಳಲ್ಲಿ ಡ್ರೆಸ್ ಕೋಡ್ ರೂಲ್ಸ್ ಫಾಲೋ ಮಾಡಿ ರೈತರು, ಬಡವರಿಗೆ ಅವಮಾನಿಸಲಾಗುತ್ತದೆ. ನಗರಾಭಿವೃದ್ಧಿ ಇಲಾಖೆಯ ನಡೆಯಿಂದ ಎಲ್ಲರನ್ನೂ ಒಂದೇ ರೀತಿಯಲ್ಲಿ ಕಾಣುವ ನಿಯಮ ಜಾರಿ ಆದರೆ ಉತ್ತಮ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು