ಉಡುಪಿ ಕಾಲೇಜು ವಿಡಿಯೋ ಪ್ರಕರಣ ಬೆನ್ನಲ್ಲೇ ಬೆಂಗಳೂರಿನ ಶಾಲೆಯೊಂದರಲ್ಲೂ ವಿದ್ಯಾರ್ಥಿಗಳಿಂದ ಅಶ್ಲೀಲ ವರ್ತನೆ

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಇದೀಗ ಬೆಂಗಳೂರಿನ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ಅಶ್ಲೀಲ ವರ್ತನೆ ಆರೋಪ ಕೇಳಿಬಂದಿದೆ.

ಉಡುಪಿ ಕಾಲೇಜು ವಿಡಿಯೋ ಪ್ರಕರಣ ಬೆನ್ನಲ್ಲೇ ಬೆಂಗಳೂರಿನ ಶಾಲೆಯೊಂದರಲ್ಲೂ ವಿದ್ಯಾರ್ಥಿಗಳಿಂದ ಅಶ್ಲೀಲ ವರ್ತನೆ
ಸಾಂದರ್ಭಿಕ ಚಿತ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Aug 02, 2023 | 3:31 PM

ಬೆಂಗಳೂರು, (ಆಗಸ್ಟ್ 02): ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರಾಜ್ಯ ಮಾತ್ರ ಅಲ್ಲ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದೇ ವಿವಾದ ರಾಜಕೀಯ ನಾಯಕರ ನಡುವೆಯೂ ಆರೋಪ-ಪ್ರತ್ಯಾರೋಪಕ್ಕೆ ಕಾರಣಗಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಕಾರ್ಮೆಲ್ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಅಶ್ಲೀಲ ವರ್ತನೆ ತೋರಿದ ಪ್ರಕರಣ ಬೆಳಕಿಗೆ ಬಂದಿದೆ. ಬಸವವೇಶ್ವರನಗರದ ಕಾರ್ಮೆಲ್ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಿಂದ ಸಹ ವಿದ್ಯಾರ್ಥಿನಿಯರಿಗೆ ಅಶ್ಲೀಲ ಕಿರುಕುಳ ನೀಡುತ್ತಿರುವ ಆರೋಪ ಬಯಲಿಗೆ ಬಂದಿದ್ದು, ಇದೀಗ ಈ ಪ್ರಕರಣ ಪೊಲೀಸ್​ ಠಾಣೆ ಮೆಟ್ಟಿಲೇರಿದೆ.

ಇದನ್ನೂ ಓದಿ: ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಕೇಸ್​: ತನಿಖಾಧಿಕಾರಿ ಬದಲಾಗುತ್ತಿದ್ದಂತೆಯೇ ತನಿಖೆ ಚುರುಕು, ಆರೋಪಿಗಳ ಫ್ರೆಂಡ್ಸ್​ ಫೋನ್ ವಶಕ್ಕೆ

ನಿನ್ನೆ(ಆಗಸ್ಟ್ 02) ಎಂಟನೇ ತರಗತಿಯಲ್ಲಿ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರಿಗೆ ಖಾಸಗಿ ಅಂಗ ಪ್ರದರ್ಶನ ಮಾಡಿದ್ದು, ಶಾಲೆಯಲ್ಲಿ ವಿದ್ಯಾರ್ಥಿಗಳ ಈ ಅಶ್ಲೀಲ ವರ್ತನೆ ಬಗ್ಗ ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ಅಳಲು ತೋಡಿಕೊಂಡಿದ್ದಾರೆ. ಬಳಿಕ ವಿದ್ಯಾರ್ಥಿನಿಯೋರ್ವಳ ತಾಯಿ ಮೀರಾ ಎನ್ನುವವರು ಕೂಡಲೇ ಶಾಲಾ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದಾರೆ. ಆದ್ರೆ, ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ಮೀರಾ ಅವರು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಾರ್ಮೆಲ್ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳ ಅಸಭ್ಯ ವರ್ತನೆ ಬಗ್ಗೆ ದುರಿನಲ್ಲಿ ಉಲ್ಲೇಖಿಸಿದ್ದು, ಈ ಬಗ್ಗೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ತರಗತಿಯಲ್ಲಿರುವ ಸಿಸಿ ಕ್ಯಾಮರಾ ಪರಿಶೀಲಿಸಿ ಮಕ್ಕಳ ವರ್ತನೆ ಕಂಟ್ರೋಲ್ ಮಾಡಲು ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ