Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೊಮೆಟೊ ಆಯ್ತು, ಈಗ ಬಾಳೆಹಣ್ಣಿಗೂ ತಟ್ಟಿತು ಬೆಲೆ ಏರಿಕೆ ಬಿಸಿ; ಬೆಂಗಳೂರಿನಲ್ಲಿ ಕೆಜಿಗೆ 100 ರೂ. ದಾಟಿದ ದರ

ಹೊರರಾಜ್ಯಗಳಿಂದ ಪೂರೈಕೆ ಕಡಿಮೆಯಿರುವುದರಿಂದ ಏಲಕ್ಕಿ ಬಾಳೆ ಹಣ್ಣಿನ ಸಗಟು ಮಾರಾಟ ಬೆಲೆ ಪ್ರತಿ ಕೆಜಿಗೆ 78 ರೂಪಾಯಿ ಇದ್ದರೆ ಪಚ್ಚಬಾಳೆ 18 ರಿಂದ 20 ರೂ. ಇದೆ. ಆದರೆ ಸಾಗಾಣಿಕೆ ವೆಚ್ಚವನ್ನೂ ಸೇರಿಸಿ ಚಿಲ್ಲರೆ ಮಾರಾಟ ಬೆಲೆಯೇ ಕ್ರಮವಾಗಿ 100 ರೂ. ಹಾಗೂ 40 ರೂ. ತಲುಪಿದೆ.

ಟೊಮೆಟೊ ಆಯ್ತು, ಈಗ ಬಾಳೆಹಣ್ಣಿಗೂ ತಟ್ಟಿತು ಬೆಲೆ ಏರಿಕೆ ಬಿಸಿ; ಬೆಂಗಳೂರಿನಲ್ಲಿ ಕೆಜಿಗೆ 100 ರೂ. ದಾಟಿದ ದರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Aug 15, 2023 | 6:10 PM

ಬೆಂಗಳೂರು, ಆಗಸ್ಟ್ 15: ಟೊಮೆಟೊ ಸೇರಿದಂತೆ ತರಕಾರಿ ಬೆಲೆ ಏರಿಕೆಯ ಬಿಸಿಯಿಂದ ಜನ ಇನ್ನೂ ಹೊರಬಂದಿಲ್ಲ. ಇನ್ನೇನು ಹಬ್ಬಗಳ ಋತು ಕೂಡ ಆರಂಭವಾಗಲಿದೆ. ಇಂಥ ಸಂದರ್ಭದಲ್ಲೇ ಬಾಳೆಹಣ್ಣಿನ (Banana Price) ಬೆಲೆ ಕೂಡ ಏರಿಕೆಯಾಗಿರುವ ಬಗ್ಗೆ ವರದಿಯಾಗಿದೆ. ಹಬ್ಬದ ಸಂದರ್ಭದಲ್ಲಿ ಬಹುಮುಖ್ಯ ಬೇಡಿಕೆಯುಳ್ಳ ಬಾಳೆ ಹಣ್ಣಿನ ಬೆಲೆಯು ಮೂರಂಕಿ ತಲುಪಿರುವುದು ಗ್ರಾಹಕರಿಗೆ ತಲೆಬಿಸಿ ಉಂಟುಮಾಡಿದೆ. ಬೇಡಿಕೆ ಹಾಗೂ ಪೂರೈಕೆ ವ್ಯತ್ಯಾಸದಿಂದ (Demand And Supply) ಈ ವಾರ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಒಂದು ಕೆಜಿ ಬಾಳೆಹಣ್ಣಿನ ದರ 100 ರೂ. ತಲುಪಿದೆ.

ಬೆಂಗಳೂರಿನಲ್ಲಿ ಹೆಚ್ಚಾಗಿ ಏಲಕ್ಕಿ ಬಾಳೆ, ಪಚ್ಚೆ ಬಾಳೆ ಹಣ್ಣಿಗೆ ಬೇಡಿಕೆಯಿದ್ದು, ತಮಿಳುನಾಡಿನಿಂದ ಪೂರೈಕೆಯಾಗುತ್ತಿವೆ. ಆದರೆ ಈ ಬಾರಿ ತಮಿಳುನಾಡಿನಿಂದ ಪೂರೈಕೆಯಾಗುವ ಪ್ರಮಾಣದಲ್ಲಿ ಗಣನೀಯ ಕುಸಿತ ಕಂಡುಬಂದಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ಬೆಂಗಳೂರು ಎಪಿಎಂಸಿ ಕಾರ್ಯದರ್ಶಿ ರಾಜಣ್ಣ ತಿಳಿಸಿದ್ದಾರೆ. ಈ ಮೊದಲು ಬಿನ್ನಿಪೇಟೆ ಮಾರುಕಟ್ಟೆಗೆ ತಮಿಳುನಾಡಿನಿಂದ 1500 ಕ್ವಿಂಟಲ್ ಬಾಳೆಹಣ್ಣುಗಳನ್ನು ಪೂರೈಸಲಾಗುತ್ತಿತ್ತು. ಆದರೆ ಈ ಬಾರಿ ಕೇವಲ 1000 ಕ್ವಿಂಟಲ್ ಮಾತ್ರ ಪೂರೈಕೆಯಾಗಿವೆ ಎಂದು ಅವರು ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಇದಲ್ಲದೆ ಬೆಂಗಳೂರು ಎಪಿಎಂಸಿ ಘಟಕಕ್ಕೆ ತುಮಕೂರು, ರಾಮನಗರ ಚಿಕ್ಕಬಳ್ಳಾಪುರ ಹಾಗು ಬೆಂಗಳೂರು ಗ್ರಾಮಾಂತರದಿಂದ ಬಾಳೆಹಣ್ಣು ಪೂರೈಕೆಯಾಗುತ್ತವೆ. ಹಾಗೆಯೇ ತಮಿಳುನಾಡಿಗೆ ಹೊಸೂರು ಹಾಗೂ ಕೃಷ್ಣಗಿರಿಯಿಂದ ಹಣ್ಣುಗಳು ಪೂರೈಕೆಯಾಗುತ್ತವೆ. ಹೊರರಾಜ್ಯಗಳಿಂದ ಪೂರೈಕೆ ಕಡಿಮೆಯಿರುವುದರಿಂದ ಏಲಕ್ಕಿ ಬಾಳೆ ಹಣ್ಣಿನ ಸಗಟು ಮಾರಾಟ ಬೆಲೆ ಪ್ರತಿ ಕೆಜಿಗೆ 78 ರೂಪಾಯಿ ಇದ್ದರೆ ಪಚ್ಚಬಾಳೆ 18 ರಿಂದ 20 ರೂ. ಇದೆ. ಆದರೆ ಸಾಗಾಣಿಕೆ ವೆಚ್ಚವನ್ನೂ ಸೇರಿಸಿ ಚಿಲ್ಲರೆ ಮಾರಾಟ ಬೆಲೆಯೇ ಕ್ರಮವಾಗಿ 100 ರೂ. ಹಾಗೂ 40 ರೂ. ತಲುಪಿದೆ.

ಇದನ್ನೂ ಓದಿ; ಕೆಂಪುಸುಂದರಿ ಕಾಟದ ಬಳಿಕ, ಗೃಹಿಣಿಯರಿಗೆ ಶ್ರಾವಣ ಮಾಸದಲ್ಲೇ ಈರುಳ್ಳಿ-ಬೆಳ್ಳುಳ್ಳಿ ಟೆನ್ಷನ್!

ಬೆಲೆ ಏರಿಕೆಯ ಹಿಂದೆ ಮಧ್ಯವರ್ತಿಗಳ ಕೈವಾಡ ಇದೆ ಎಂದು ಕೆಲ ರೈತರು ಅಭಿಪ್ರಾಯಪಟ್ಟಿದ್ದಾರೆ. ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ ಪ್ರದೇಶಗಳು ನಗರದಿಂದ ಹತ್ತಿರದಲ್ಲಿಯೇ ಇದ್ದರು ಅವರು ಬೆಳೆದಂತಹ ಉತ್ಪನ್ನಗಳು ನಗರವನ್ನು ತಲುಪುತ್ತಿಲ್ಲ. ಸಣ್ಣ ಹಿಡುವಳಿದಾರರು ಸಾಗಾಣಿಕಾ ವಾಹನ ಭರ್ತಿಯಾಗುವವರೆಗೂ ಕಾಯುತ್ತಿಲ್ಲ. ಬೇರೆ ಮಾರ್ಗವಿಲ್ಲದ ಕಾರಣ, ರೈತರು ಗ್ರಾಹಕರನ್ನು ತಲುಪಲು ಸೋಲುತ್ತಾರೆ ಎನ್ನಲಾಗಿದೆ.

ಓಣಂ, ಗಣೇಶ ಚತುರ್ಥಿ ಸೇರಿದಂತೆ ಹಬ್ಬಗಳು ಸಮೀಪಿಸುತ್ತಿರುವುದರಿಂದ ಬೇಡಿಕೆಯಲ್ಲಿಯೂ ಹೆಚ್ಚಳ ಕಂಡುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ