ತುಮಕೂರು ಬಳಿಕ ರಾಮನಗರಕ್ಕೂ ನಮ್ಮ ಮೆಟ್ರೋ ಸಂಚಾರ; ಟೆಂಡರ್ ಕರೆದ ಬಿಎಂಆರ್​ಸಿಎಲ್

ನಮ್ಮ ಮೆಟ್ರೋ ಬೆಂಗಳೂರು ಮಾತ್ರ ಅಲ್ಲದೆ ನೆರೆಯ ಜಿಲ್ಲೆಯ ಪ್ರಯಾಣಿಕರಿಗೂ ಗುಡ್ ನ್ಯೂಸ್ ನೀಡಿದೆ. ತನ್ನ ವಿಸ್ತರಣೆಯನ್ನ ಮತ್ತೊಂದು ಪಕ್ಕದ ಜಿಲ್ಲೆಗೆ ವಿಸ್ತರಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ. ರಾಮನಗರ ಜಿಲ್ಲೆಯ ಬಿಡದಿಗೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸಲು ಬಿಎಂಆರ್‌ಸಿಎಲ್ ಮುಂದಾಗಿದೆ.

ತುಮಕೂರು ಬಳಿಕ ರಾಮನಗರಕ್ಕೂ ನಮ್ಮ ಮೆಟ್ರೋ ಸಂಚಾರ; ಟೆಂಡರ್ ಕರೆದ ಬಿಎಂಆರ್​ಸಿಎಲ್
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on: Jul 24, 2024 | 9:08 AM

ಬೆಂಗಳೂರು, ಜುಲೈ.24: ಬೆಂಗಳೂರಿನಿಂದ ತುಮಕೂರಿಗೆ ಮಾರ್ಗ ವಿಸ್ತರಣೆ ಮಾಡಲು ಈಗಾಗಲೇ ಬಿಎಂಆರ್​ಸಿಎಲ್ (BMRCL) ಸಿದ್ಧತೆ ನಡೆಸಿದೆ. ಇದರ ಜೊತೆಗೆ ಇದೀಗ ಮತ್ತೊಂದು ಸಿಹಿ ಸುದ್ದಿ ಹೊರಬಿದ್ದಿದೆ. ರಾಮನಗರಕ್ಕೆ ನಮ್ಮ ಮೆಟ್ರೋ (Namma Metro) ರೈಲು ಸಂಚಾರ ನಡೆಸಲಿದೆ ಎಂಬ ಮಾತು ಹಲವು ದಿನಗಳಿಂದ ಕೇಳಿ ಬರುತ್ತಿದೆ. ಈ ನಡುವೆ ರಾಮನಗರ ಜಿಲ್ಲೆಯ ಬಿಡದಿಗೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸುವ ಕುರಿತು ಬಿಎಂಆರ್‌ಸಿಎಲ್ ಮೊದಲ ಹೆಜ್ಜೆ ಇಟ್ಟಿದೆ. ಇದಕ್ಕಾಗಿ ವರದಿ ತಯಾರು ಮಾಡಲು ಟೆಂಡರ್ ಸಹ ಕರೆದಿದೆ.

ಬಿಎಂಆರ್‌ಸಿಎಲ್ ಜುಲೈ 9ರಂದು 1.59 ಕೋಟಿ ರೂ.ಗಳ ಟೆಂಡರ್ ಕರೆದಿತ್ತು. ಒಟ್ಟು ಮೂರು ಮಾರ್ಗದಲ್ಲಿ ನಮ್ಮ ಮೆಟ್ರೋ ಯೋಜನೆಯನ್ನು ವಿಸ್ತರಣೆ ಮಾಡಲು ಕಾರ್ಯಸಾಧ್ಯತೆಯ ಅಧ್ಯಯನ ವರದಿಯನ್ನು ತಯಾರು ಮಾಡಲು ಹೈದರಾಬಾದ್ ಮೂಲದ ಕಂಪನಿಗೆ ಟೆಂಡರ್ ನೀಡಿದೆ. ಈ ವರ್ಷದ ಫೆಬ್ರವರಿಯಲ್ಲಿ ಬಿಎಂಆರ್‌ಸಿಎಲ್ 50 ಕಿ. ಮೀ. ಮಾರ್ಗದಲ್ಲಿ ನಮ್ಮ ಮೆಟ್ರೋ ಯೋಜನೆ ವಿಸ್ತರಣೆ ಮತ್ತು 68 ಕಿ. ಮೀ. ನೂತನ ಮಾರ್ಗ ನಿರ್ಮಾಣದ ಕುರಿತು ಕಾರ್ಯಸಾಧ್ಯತೆಯ ಅಧ್ಯಯನ ವರದಿಯನ್ನು ತಯಾರು ಮಾಡಲು ಟೆಂಡರ್ ಆಹ್ವಾನಿಸಿತ್ತು. ಈಗ ಟೆಂಡರ್ ಅಂತಿಮಗೊಳಿಸಲಾಗಿದೆ. ಬಿಎಂಆರ್‌ಸಿಎಲ್ ವರದಿ ಪ್ರಕಾರ ವಿಸ್ತರಿತ ಮಾರ್ಗದಲ್ಲಿ ಚಲ್ಲಘಟ್ಟ-ಬಿಡದಿ 15 ಕಿ. ಮೀ. ಸಿಲ್ಕ್ ಇನ್ಸಿಟಿಟ್ಯೂಟ್-ಹಾರೋಹಳ್ಳಿ 24 ಕಿ. ಮೀ. ಬೊಮ್ಮಸಂದ್ರ-ಅತ್ತಿಬೆಲೆ 11 ಕಿ. ಮೀ ಮಾರ್ಗವಿದೆ.

ಕಾಳೇನ ಅಗ್ರಹಾರ-ಕಾಡುಗೋಡಿ ಟ್ರೀ ಪಾರ್ಕ್ ವಯಾ ಜಿಗಣಿ, ಅನೇಕಲ್, ಅತ್ತಿಬೆಲೆ, ಸರ್ಜಾಪುರ ಮತ್ತು ವರ್ತೂರು (52.41 ಕಿ. ಮೀ.) ಹೊಸ ಮಾರ್ಗ ಕೂಡ ಸೇರಿದೆ. ಯಾವುದೇ ಯೋಜನೆಯ ಮೇಲೆ ಹೂಡಿಕೆ ಮಾಡುವ ಮೊದಲು ಕಾರ್ಯಸಾಧ್ಯತೆಯ ಅಧ್ಯಯನ ವರದಿಯನ್ನು ತಯಾರು ಮಾಡಲಾಗುತ್ತದೆ. ಯೋಜನೆಯ ಪ್ರಾಥಮಿಕ ಅಧ್ಯಯನ, ತಾಂತ್ರಿಕ, ಸಾಮಾಜಿಕ, ಆರ್ಥಿಕ ಮುಂತಾದ ಅಂಶಗಳು ಈ ವರದಿಯಲ್ಲಿ ಸೇರಿರುತ್ತವೆ. ಈ ವರದಿ ಅಂತಿಮಗೊಂಡರೆ ಯೋಜನೆಯ ಡಿಪಿಆರ್ ತಯಾರು ಮಾಡಲಾಗುತ್ತದೆ ಅದರಂತೆ ಸದ್ಯ ಈಗ ಬಿಡದಿಗೆ ಈ ಅಧ್ಯಯನಕ್ಕಾಗಿ ಬಿಎಂಆರ್ಸಿಎಲ್ ಟೆಂಡರ್ ಪ್ರಕ್ರಿಯೆ ನಡೆಸಿದೆ.

ಇದನ್ನೂ ಓದಿ: ಬೆಂಗಳೂರು: ಮಾನ್ಸೂನ್​ನಲ್ಲಿ ಮಕ್ಕಳನ್ನು ಕಾಡುತ್ತಿದೆ ಗುಲಾಬಿ ಕಣ್ಣಿನ ಸೋಂಕು, ವೈದ್ಯರ ಸಲಹೆ ಇಲ್ಲಿದೆ

ಕರ್ನಾಟಕ ಸರ್ಕಾರ ಕಾರ್ಯಸಾಧ್ಯತೆಯ ಅಧ್ಯಯನ ವರದಿಯ ಅನ್ವಯ ಬಿಡದಿಗೆ ನಮ್ಮ ಮೆಟ್ರೋ ಯೋಜನೆ ವಿಸ್ತರಣೆ ಮಾಡಲು ಒಪ್ಪಿಗೆ ನೀಡುವ ಸಾಧ್ಯತೆ ಇದೆ. ಈ ವರದಿಗೆ ಒಪ್ಪಿಗೆ ಸಿಕ್ಕಿದರೆ ಬಿಎಂಆರ್‌ಸಿಎಲ್ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರು ಮಾಡಲು ಪ್ರತ್ಯೇಕ ಟೆಂಡರ್ ಕರೆಯಲಿದೆ. ಇನ್ನೂ ಬೆಂಗಳೂರು ನಗರದ ಹೊರವಲಯಕ್ಕೂ ಕೈಗಾರಿಕೆ, ಹೂಡಿಕೆಗಳನ್ನು ಆಕರ್ಷಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ. ಬಿಡದಿಯನ್ನು ಕೈಗಾರಿಕಾ ಹಬ್ ಆಗಿ ಪರಿವರ್ತನೆ ಮಾಡಿ ಬೆಂಗಳೂರು ನಗರದ ಮೇಲಿರುವ ಒತ್ತಡ ಕಡಿಮೆ ಮಾಡಲು ಮುಂದಾಗಿದೆ. ಇದೇ ಮಾದರಿಯಲ್ಲಿ ಬಿಎಂಆರ್‌ಸಿಎಲ್ ಸಹ ಹೊರ ವಲಯಕ್ಕೆ ಮೆಟ್ರೋ ಸಂಪರ್ಕ ವಿಸ್ತರಣೆ ಮಾಡುವ ಚಿಂತನೆ ನಡೆಸುತ್ತಿದೆ.

ಬೆಂಗಳೂರು ನಗರದಿಂದ ಪ್ರತಿನಿತ್ಯ ಸಾವಿರಾರು ಜನರು ಬಿಡದಿಗೆ ಪ್ರಯಾಣಿಸುತ್ತಾರೆ. ಬಿಡದಿಯಲ್ಲಿ ಬೃಹತ್ ಕೈಗಾರಿಕಾ ಪ್ರದೇಶವಿದೆ. ಸುಮಾರು ಸಾವಿರಾರು ಸಂಖ್ಯೆಯ ನೌಕರರು ಇಲ್ಲಿ ಕೆಲಸ ಮಾಡುತ್ತಿದ್ದು, ಈ ಮಾರ್ಗ ಸಿದ್ದವಾದರೆ ಬೆಂಗಳೂರಿನಿಂದ ಪ್ರತಿದಿನ ಸಂಚಾರ ನಡೆಸುವ ಜನರ ಅನುಕೂಲವಾಗಲಿದೆ. ಈ ಬಗ್ಗೆ ವಾಹನ ಸವಾರರು ಮತ್ತು ಸ್ಥಳೀಯ ನಿವಾಸಿಗಳು ಸಂತಸ ವ್ಯಕ್ತಪಡಿಸುತ್ತಾರೆ

ಒಟ್ನಲ್ಲಿ ಸದ್ಯ ಮೊದಲ ಹೆಜ್ಜೆಯಾಗಿ ಕಾರ್ಯ ಸಾಧ್ಯತೆ ಅಧ್ಯಯನ ಆರಂಭವಾಗಲಿದ್ದು ಆ ಬಳಿಕದ ಬೆಳವಣಿಗೆ ಬಿಡದಿ ಕನೆಕ್ಟಿವಿಟಿ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ