ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗೋಕೆ ಕರೆಯುತ್ತಿದ್ದಾರಾ? ಮತ್ತೆ ಬೊಮ್ಮಯಿ ಸರ್ಕಾರ ಬರುತ್ತೆ -ಸಿದ್ದುಗೆ ರಮೇಶ್ ಜಾರಕಿಹೊಳಿ ಸವಾಲ್

ಇನ್ನು ಇದೇ ವೇಳೆ ರಮೇಶ್ ಜಾರಕಿಹೊಳಿ, ನನ್ನ ಜತೆ 36 ಜನ ಇದ್ರು, 17 ಜನ ನನ್ನ ಜತೆ ಬಂದ್ರು ತಾಂತ್ರಿಕ ಕಾರಣದಿಂದ ಅಲ್ಲಿಯೇ ಇದ್ದಾರೆ. ಆ ಸಂದರ್ಭದಲ್ಲಿ ನಮ್ಮ ಜತೆ ಬರಲಿಲ್ಲ. ಕಾಂಗ್ರೆಸ್ನ 16 ಶಾಸಕರು ನನ್ನ ಸಂಪರ್ಕದಲ್ಲಿರುವುದು ನಿಜ.

ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗೋಕೆ ಕರೆಯುತ್ತಿದ್ದಾರಾ? ಮತ್ತೆ ಬೊಮ್ಮಯಿ ಸರ್ಕಾರ ಬರುತ್ತೆ -ಸಿದ್ದುಗೆ ರಮೇಶ್ ಜಾರಕಿಹೊಳಿ ಸವಾಲ್
ರಮೇಶ್​ ಜಾರಕಿಹೊಳಿ
Follow us
TV9 Web
| Updated By: ಆಯೇಷಾ ಬಾನು

Updated on:Jan 25, 2022 | 4:50 PM

ಬೆಂಗಳೂರು: ವಿಧಾನ ಸಭೆ ಒಳಗೆ ಏನು ಹೇಳಿದ್ರು ಒಮ್ಮೆ ಸಿದ್ದರಾಮಯ್ಯ ಜ್ಞಾಪಿಸಿಕೊಳ್ಳಲಿ. ಟೇಬಲ್ ಕುಟ್ಟಿ ಹೇಳಿದ್ರು. ಯಾವುದೇ ಕಾರಣಕ್ಕೂ ಈ ದ್ರೋಹಿಗಳನ್ನ ಸೇರ್ಪಡೆ ಮಾಡಿಕೊಳ್ಳಲ್ಲ ಎಂದಿದ್ರು. ಈಗ ಯಾಕೆ ಬೇಕು ಇವರಿಗೆ. ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗೋಕೆ ಮತ್ತೆ ಕರೆಯುತ್ತಿದ್ದಾರಾ. ಯಾವುದೇ ಕಾರಣಕ್ಕೂ ಇದು ಸಾಧ್ಯವಿಲ್ಲ. ಮತ್ತೆ ಬೊಮ್ಮಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಬರುತ್ತೆ ಎಂದು ಸಿದ್ದರಾಮಯ್ಯಗೆ ರಮೇಶ್ ಜಾರಕಿಹೊಳಿ ಸವಾಲು ಹಾಕಿದ್ದಾರೆ.

ನನ್ನ ಜತೆ 36 ಜನ ಇದ್ರು, 17 ಜನ ನನ್ನ ಜತೆ ಬಂದ್ರು ಇನ್ನು ಇದೇ ವೇಳೆ ರಮೇಶ್ ಜಾರಕಿಹೊಳಿ, ನನ್ನ ಜತೆ 36 ಜನ ಇದ್ರು, 17 ಜನ ನನ್ನ ಜತೆ ಬಂದ್ರು ತಾಂತ್ರಿಕ ಕಾರಣದಿಂದ ಅಲ್ಲಿಯೇ ಇದ್ದಾರೆ. ಆ ಸಂದರ್ಭದಲ್ಲಿ ನಮ್ಮ ಜತೆ ಬರಲಿಲ್ಲ. ಕಾಂಗ್ರೆಸ್ನ 16 ಶಾಸಕರು ನನ್ನ ಸಂಪರ್ಕದಲ್ಲಿರುವುದು ನಿಜ. ಬಿಜೆಪಿ ಹೈಕಮಾಂಡ್ ಒಪ್ಪಿದರೆ ಅವರನ್ನು ಪಕ್ಷಕ್ಕೆ ಕರೆತರುವೆ. ಜೆಡಿಎಸ್ನ ಮೂವರು ಶಾಸಕರು ಕೂಡ ಸಂಪರ್ಕದಲ್ಲಿದ್ದಾರೆ. ಕುಮಾರಸ್ವಾಮಿ ಒಳ್ಳೆಯವರು, ಜೆಡಿಎಸ್ನವರನ್ನು ಸೆಳೆಯಲ್ಲ. ಬೆಳಗಾವಿ ಜಿಲ್ಲೆಯ ಮೂವರು ಶಾಸಕರು ಸಂಪರ್ಕದಲ್ಲಿದ್ದಾರೆ. ಮೂವರ ಪೈಕಿ ಇಬ್ಬರು ಬಿಜೆಪಿಗೆ ಬಂದರೆ ಅಭ್ಯಂತರವಿಲ್ಲ. ಅವನೊಬ್ಬ ಬಿಜೆಪಿಗೆ ಬಂದರೆ ನಾನೇ ಬೇರೆ ಕಡೆ ಹೋಗುತ್ತೇನೆ ಎಂದು ಬೆಂಗಳೂರಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ರು.

ನಮ್ಮ ಜತೆ ಬಿಜೆಪಿಗೆ ಬಂದವರು ಯಾರೂ ಪಕ್ಷ ಬಿಡುವುದಿಲ್ಲ. ವಿಧಾನಸಭಾ ಚುನಾವಣೆ ಹತ್ತಿರ ಬಂದಾಗ ಎಲ್ಲಾ ಗೊತ್ತಾಗುತ್ತೆ. ನಾನು ಸಚಿವಸ್ಥಾನದ ಆಕಾಂಕ್ಷಿಯಲ್ಲ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ. ನಮ್ಮ ಹೈಕಮಾಂಡ್ ಅಮಿತ್ ಶಾ, ನಮ್ಮ ಜತೆ ಚೆನ್ನಾಗಿದ್ದಾರೆ. ನಾನು ಇಲ್ಲೇ ಇದ್ದು ಪಕ್ಷ ಸಂಘಟನೆ ಮಾಡುತ್ತೇನೆ. ಹೆಚ್.ಡಿ.ಕುಮಾರಸ್ವಾಮಿ, ನಮ್ಮ ನಡುವೆ ಸಂಬಂಧ ಚೆನ್ನಾಗಿದೆ. ಹಾಗಾಗಿ ಜೆಡಿಎಸ್ ಶಾಸಕರನ್ನು ನಾವು ಟಚ್ ಮಾಡುವುದಿಲ್ಲ. ನನ್ನ ಸಂಪರ್ಕದಲ್ಲಿರುವ ಜೆಡಿಎಸ್ ಶಾಸಕರನ್ನು ಮುಟ್ಟುವುದಿಲ್ಲ ಎಂದು ಕುಮಾರಸ್ವಾಮಿ ಬಗ್ಗೆ ರಮೇಶ್ ಜಾರಕಿಹೊಳಿ ಸಾಫ್ಟ್ಕಾರ್ನರ್ ತೋರಿಸಿದ್ದಾರೆ.

ರಮೇಶ್ ಜಾರಕಿಹೊಳಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ಇನ್ನು ಕಾಂಗ್ರೆಸ್​ನ 16 ಶಾಸಕರು ಬಿಜೆಪಿಗೆ ಬರುತ್ತಾರೆಂಬ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ರಮೇಶ್ ಜಾರಕಿಹೊಳಿ ಬಹಳ ವರ್ಷದಿಂದ ಹೇಳುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಹೇಳಿಕೆಗೆ ಯಾವುದೇ ಕಿಮ್ಮತ್ತಿಲ್ಲ. ನನಗೆ ಗೊತ್ತಿರುವಂತೆ ನಮ್ಮ ಶಾಸಕರು ಬಿಜೆಪಿಗೆ ಹೋಗಲ್ಲ. ರಾತ್ರಿ ಕಂಡ ಬಾವಿಗೆ ಹಗಲಿನಲ್ಲಿ ಯಾರು ಹೋಗಿ ಬೀಳ್ತಾರೆ? ಭಾರತೀಯ ಜನತಾ ಪಕ್ಷ ಈಗ ಮುಳುಗುವ ಹಡಗು ಎಂದು ಕೆಲವಡಿ ಗ್ರಾಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನನ್ನ ಕರೆ ಸ್ವೀಕರಿಸುವುದಿಲ್ಲ: ರಾಜ್ಯಪಾಲರಿಂದ ಗಂಭೀರ ಆರೋಪ

Published On - 3:06 pm, Tue, 25 January 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ