ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮತ್ತೆ ಮುನ್ನೆಲೆಗೆ ಬಂದ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ!
Chamrajpet Idgah Maidan Dispute: ಚಾಮರಾಜಪೇಟೆ ನಾಗರಿಕ ಒಕ್ಕೂಟವು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಪಟ್ಟು ಹಿಡಿದಿದೆ. ಕನ್ನಡ ಪರ ಹಾಗೂ ಹಿಂದೂಪರ ಸಂಘಟನೆಗಳಲ್ಲದೆ ಇದೇ ಮೈದಾನದಿಂದ ಕೂಗಳತೆಯ ದೂರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಕೂಡ ಮೈದಾನದಲ್ಲಿ ನಾಡಧ್ವಜ ಹಾರಿಸುವಂತೆ ಒತ್ತಡ ಹೇರಿದೆ.
ಬೆಂಗಳೂರು, ಅಕ್ಟೋಬರ್ 25: ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ (Chamrajpet Idgah Maidan Dispute) ಸದ್ಯಕ್ಕೆ ಮುಕ್ತಿ ಸಿಗುವ ಲಕ್ಷಣಗಳಿಲ್ಲ. ಯಾವುದಾದರೊಂದು ವಿಚಾರವಾಗಿ ಅಲ್ಲಿ ಧುತ್ತನೆ ವಿವಾದ ಉದ್ಭವವಾಗುತ್ತಿದೆ. ರಾಜ್ಯದಲ್ಲಿ ರಾಜಕೀಯ ಸ್ಥಿತ್ಯಂತರಗಳ ಬಳಿಕ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣೇಶ ಚತುರ್ಥಿ ಆಚರಣೆಗೆ ಪರ-ವಿರೋಧ ಜೋರಾಗಿ ಮೊಳಗಿದ ಬಳಿಕ ಶಾಂತವಾಯಿತು ಎಂದು (Bengaluru police) ನಿಟ್ಟುಸಿರು ಬಿಡುವ ವೇಳೆಗೆ ಇದೀಗ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ (Controversy) ಮತ್ತೆ ಮುನ್ನೆಲೆಗೆ ಬಂದಿದೆ. ಇದೀಗ ಕನ್ನಡ ರಾಜ್ಯೋತ್ಸವ (Kannada Rajyotsava 2023) ಆಚರಿಸಲು ಪರ್ಮಿಷನ್ ಕೊಡುವಂತೆ ಫೈಟ್ ಎಡತಾಕಿದೆ.
ಚಾಮರಾಜಪೇಟೆ ನಾಗರಿಕ ಒಕ್ಕೂಟವು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಪಟ್ಟು ಹಿಡಿದಿದೆ. ಕನ್ನಡ ಪರ ಹಾಗೂ ಹಿಂದೂಪರ ಸಂಘಟನೆಗಳಲ್ಲದೆ ಇದೇ ಮೈದಾನದಿಂದ ಕೂಗಳತೆಯ ದೂರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಕೂಡ ಮೈದಾನದಲ್ಲಿ ನಾಡಧ್ವಜ ಹಾರಿಸುವಂತೆ ಒತ್ತಡ ಹೇರಿದೆ.
ಮೂಮದಿನ ಬುಧವಾರ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ಕೊಡಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಈಗಾಗಲೇ ಮಾನವಿ ಮಾಡಲಾಗಿತ್ತು. ಆದ್ರೆ ಜಿಲ್ಲಾಧಿಕಾರಿಗಳು ಈಗ ಮನವಿ ತಿರಸ್ಕರಿಸಿದ್ದಾರೆ. ಇದರಿಂದ ಕೆರಳಿದ ಚಾಮರಾಜಪೇಟೆ ನಾಗರಿಕ ಒಕ್ಕೂಟವು ನ್ಯಾಯಾಲಯದ ಮೊರೆ ಹೋಗಲು ಸಿದ್ಧತೆ ನಡೆಸಿದೆ.
ರಾಜ್ಯ ಸರ್ಕಾರ ಕನ್ನಡ ನಾಡಿನಲ್ಲಿ ರಾಜ್ಯೋತ್ಸವ ಅಚರಣೆಗೆ ಅಡ್ಡಪಡಿಸ್ತಿದೆ. ಕೂಡಲೇ ಮೈದಾನದಲ್ಲಿ ನಾಡಧ್ವಜ ಹಾರಾಟಕ್ಕೆ ಅನುಮತಿ ನೀಡಬೇಕು. ಇಲ್ಲವಾದ್ರೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಚಾಮರಾಜಪೇಟೆ ಒಕ್ಕೂಟವು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ