ಕರ್ನಾಟಕದಲ್ಲಿ ಕೊರೊನಾ ಆತಂಕ: ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಬೀಳುತ್ತಾ ಬ್ರೇಕ್? ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಶುರು

ವಿದೇಶದಲ್ಲಿ ಕೊರೊನಾ ಒಮಿಕ್ರಾನ್ ಉಪತಳಿಯ ಆರ್ಭಟ ಹಿನ್ನೆಲೆ ಕೆಂಪೇಗೌಡ ಏರ್ಪೋಟ್​ನಲ್ಲಿ ವಿದೇಶಿ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಮಾಡಲಾಗುತ್ತಿದೆ.

ಕರ್ನಾಟಕದಲ್ಲಿ ಕೊರೊನಾ ಆತಂಕ: ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಬೀಳುತ್ತಾ ಬ್ರೇಕ್? ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಶುರು
ಪ್ರಾತಿನಿಧಿಕ ಚಿತ್ರ
Follow us
| Updated By: Digi Tech Desk

Updated on:Dec 22, 2022 | 12:11 PM

ಬೆಂಗಳೂರು: ನೆರೆಯ ಚೀನಾದಲ್ಲಿ ಮಹಾಮಾರಿ ಕೊರೊನಾ ಸೋಂಕಿನ(Coronvirus) ಹವಾಳಿ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಸೋಂಕಿನ ಪ್ರಮಾಣ ಏರುತ್ತಲೇ ಇದೆ. ಹೀಗಾಗಿ ರಾಜ್ಯದಲ್ಲೂ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಮುಂದಾಗಿದ್ದು ಈ ಬಗ್ಗೆ ಇಂದು ಸಭೆ ನಡೆಸಿ ಚರ್ಚಿಸಲಿದ್ದಾರೆ. ಮತ್ತೊಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆತಂಕ ಮನೆ ಮಾಡಿದೆ. ಮುಂಬರುವ ಕ್ರಿಸ್ಮಸ್, ಹೊಸವರ್ಷಾಚರಣೆಗೆ ಕೊರೊನಾ ಅಡ್ಡಿಪಡಿಸಬಹುದಾ ಎಂಬ ಗೊಂದಲ ಉಂಟಾಗಿದೆ.

ಮುನ್ನೆಚ್ಚರಿಕಾ ಕ್ರಮಕ್ಕೆ ಮುಂದಾದ ಬಿಬಿಎಂಪಿ

ಚೀನಾ ಸೇರಿ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಕೊರೊನಾ ನಿಯಂತ್ರಣ ಸಂಬಂಧ ಸಭೆ ನಡೆಸಲು ಬಿಬಿಎಂಪಿ ಮುಂದಾಗಿದೆ. ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. ಈಗಾಗಲೇ ಬಿಬಿಎಂಪಿ ಹಿರಿಯ ಅಧಿಕಾರಿಗಳ ಆಂತರಿಕ ಚರ್ಚೆಯಾಗುತ್ತಿದ್ದು ಪೂರ್ತಿ ಜಿನೋಮಿಕ್ ಸೀಕ್ವೆನ್ಸ್ ಬಗ್ಗೆ ಗಮನ ವಹಿಸುವಂತೆ ಸೂಚಿಸಲಾಗಿದೆ. ವಿಶ್ವದ ಹಲವೆಡೆ ಏನಾಗುತ್ತಿದೆ? ಬೇರೆ ಬೇರೆ ದೇಶದಲ್ಲಿ ಯಾವ ರೀತಿ ಕೋವಿಡ್ ಸ್ಥಿತಿ ಇದೆ ಅನ್ನೋದರ ಬಗ್ಗೆ ಗಮನ ಹರಿಸಿ ಮುಂದಿನ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಈ ಬಗ್ಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ರಾಜ್ಯ ಸರ್ಕಾರ ಇಂದು ತಜ್ಞರ ಜೊತೆ ಸಭೆ ನಡೆಸುತ್ತಿದೆ. ಸಭೆ ನಂತರ ಸರ್ಕಾರ ಒಂದು ಮಾರ್ಗಸೂಚಿ ಬಿಡುಗಡೆ ಮಾಡಲಿದ್ದು ಅದರಂತೆ ಬಿಬಿಎಂಪಿ ಕ್ರಮ ತೆಗೆದುಕೊಳ್ಳಲಿದೆ. ಬೂಸ್ಟ್ ಡೋಸ್ ಪಡೆದುಕೊಳ್ಳಬೇಕು. ಕೆಲವರು ಸೆಕೆಂಡ್ ಡೋಸ್ ತೆಗೆದುಕೊಂಡು, ಬೂಸ್ಟ್ ಡೋಸ್ ತೆಗೆದುಕೊಂಡಿಲ್ಲ. ಕೆಲವರದು ಲ್ಯಾಪ್ಸ್ ಆಗಿದೆ. ಈ ಬಗ್ಗೆ ಸರ್ಕಾರಕ್ಕೆ ಪತ್ರಬರೆದಿದ್ದೇವೆ ಎಂದರು.

ಇದನ್ನೂ ಓದಿ: ಚೀನಾದಲ್ಲಿ ಮತ್ತೆ ಕೊರೊನಾ ಕಾಟ! ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯಕ್ಕೆ ಬಿಬಿಎಂಪಿ ಚಿಂತನೆ

ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ

ಮತ್ತೊಂದೆಡೆ ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಕೊರೊನಾ ಸಂಬಂಧ ಸಭೆ ನಡೆಯಲಿದೆ. ಬಳಿಕ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಕೊರೊನಾದ ಹೊರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಸಭಾ ಕಲಾಪ ಮುಗಿಯುತ್ತಿದ್ದಂತೆ ಸಿಎಂ ಸಭೆ ನಡೆಸಲಿದ್ದಾರೆ. ಕ್ರಿಸ್ ಮಸ್ ಹಬ್ಬ ಹಾಗೂ ಹೊಸ ವರ್ಷ ಆಚರಣೆ ಗಮನದಲ್ಲಿಟ್ಟುಕೊಂಡು ಸಭೆ ನಡೆಸಲಿದ್ದಾರೆ. ಕೋವಿಡ್ ನಿಯಂತ್ರಣವನ್ನ ಆರಂಭದಲ್ಲಿ ಮಾಡಲು ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ. ಮತ್ತೆ ಮಾಸ್ಕ್, ಸ್ಯಾನಿಟೈಸರ್ ಬಳಸುವಂತೆ ಸೂಚನೆ ಕೊಡುವ ಸಾಧ್ಯತೆ ಇದೆ. ತಜ್ಞರ ಸಲಹೆ ಮೇರೆಗೆ ಹೊಸ ಮಾರ್ಗಸೂಚಿಯನ್ನ ಬಿಡುಗಡೆಗೊಳಿಸುವಂತೆ ಸೂಚಿಸಲಾಗುತ್ತೆ.

ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ವಿದೇಶಿ ಪ್ರಯಾಣಿಕರಿಗೆ ಸ್ಕ್ರೀನಿಂಗ್​

ವಿದೇಶದಲ್ಲಿ ಕೊರೊನಾ ಒಮಿಕ್ರಾನ್ ಉಪತಳಿಯ ಆರ್ಭಟ ಹಿನ್ನೆಲೆ ಕೆಂಪೇಗೌಡ ಏರ್ಪೋಟ್​ನಲ್ಲಿ ವಿದೇಶಿ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಬೆಂಗಳೂರು ಗ್ರಾ. ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ವಿದೇಶಿ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಖಡ್ಡಾಯ ಮಾಡಲಾಗಿದೆ.​ ಆರೋಗ್ಯ ಸಿಬ್ಬಂದಿ ನಿನ್ನೆಯಿಂದಲೇ ಪ್ರಯಾಣಿಕರ ತಪಾಸಣೆಗೆ ಮುಂದಾಗಿದ್ದು ಪ್ರಯಾಣಿಕರ ಸ್ಕ್ರೀನಿಂಗ್ ಮಾಡಿ ಜ್ವರ, ಕೊರೊನಾ ಲಕ್ಷಣ ಬಗ್ಗೆ ತಪಾಸಣೆ ಮಾಡುತ್ತಿದ್ದಾರೆ. ಮೂರು ಪಾಳಯದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಕಾರ್ಯ ನಡೆಯುತ್ತಿದೆ. ಅಮೆರಿಕ ಹಾಗೂ ಚೀನಾ ದೇಶದಿಂದ ಬರುವವರ ಮೇಲೆ ಹೆಚ್ಚಿನ ನಿಗಾ ಇಡಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಗೈಡ್​​​ಲೈನ್ಸ್​​​ ಬಂದ ನಂತರ ಮತ್ತಷ್ಟು ಕ್ರಮ ಕೈಗೊಳ್ಳಲಾಗುತ್ತೆ ಎಂದು ಟಿವಿ9ಗೆ ಬೆಂಗಳೂರು ಗ್ರಾಮಾಂತರ ಡಿಹೆಚ್ಒ ವಿಜಯೇಂದ್ರ ಮಾಹಿತಿ ನೀಡಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಧರಿಸಿದ ಉಡುಪು ಹೆಣ್ಣಿನದೂ ಅಲ್ಲ ಗಂಡಿನದೂ ಅಲ್ಲ, TMC ನಾಯಕನ ಹೇಳಿಕೆಗೆ ಬಿಜೆಪಿ ಆಕ್ರೋಶ

ಕೊರೊನಾ ಹೆಚ್ಚಳ ಸಂಬಂಧ ಪ್ರತಿಕ್ರಿಯೆ ನೀಡಿದ ಸಚಿವ ಸುಧಾಕರ್, ಚೀನಾದಲ್ಲಿ ಕೋವಿಡ್ ಹೆಚ್ಚಳ ಆಗ್ತಿದೆ. ನಮ್ಮ ದೇಶದಲ್ಲೂ ಕೆಲವು ಕಡೆ ಹೊಸತಳಿ ಕಾಣಿಸಿಕೊಂಡಿದೆ. ಕ್ಯಾಬಿನೆಟ್ ನಂತರ ಸಿಎಂ ಸಭೆ ನಡೆಸ್ತಾರೆ. ಕೋವಿಡ್ ತಾಂತ್ರಿಕ ತಜ್ಙರು ವರ್ಚುವಲ್ ಮೂಲಕ ಭಾಗಿಯಾಗ್ತಾರೆ. ಅಲ್ಲಿ ನಾವು ಎಚ್ಚರಿಕೆ ಕ್ರಮ ತೆಗೆದುಕೊಳ್ತೇವೆ. ಬಿಎಫ್ 7 ಕೂಡ ಒಮಿಕ್ರಾನ್ ತಳಿ. ಅದರ ತೀರ್ವತೆಯ ಬಗ್ಗೆ ಚರ್ಚೆಯಾಗಲಿದೆ. ಇಂದು ಮಧ್ಯಾಹ್ನ ಇದರ ಬಗ್ಗೆ ನಿರ್ಧಾರ ಮಾಡ್ತೇವೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:08 am, Thu, 22 December 22

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್