AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಿತ್ತನೆ ಕಾರ್ಯ ಮಾಡದಂತೆ ಕಾವೇರಿ ಕಣಿವೆ ಭಾಗದ ರೈತರಿಗೆ ಮನವಿ ಮಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ

ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿಯವರು ‘ಈಗಾಗಲೇ ನೀರಿನ ಅಭಾವದಿಂದ ತಿಂಗಳು, 15 ದಿನಕ್ಕೆ ನೀರು ಬಿಡುತ್ತಿದ್ದೇವೆ. ಹೀಗಾಗಿ ಬಿತ್ತನೆ ಕಾರ್ಯ ಮಾಡದಂತೆ ಕಾವೇರಿ ಕಣಿವೆ ಭಾಗದ ರೈತರಿಗೆ ಮನವಿ ಮಾಡಿದ್ದಾರೆ. ಇನ್ನು ಕೆಆರ್​ಎಸ್​ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡಲಾಗುತ್ತಿದ್ದು, ಇದನ್ನು ವಿರೋಧಿಸಿ ರೈತರು ಹೋರಾಟಕ್ಕೆ ಇಳಿದಿದ್ದಾರೆ.

ಬೆಂಗಳೂರು: ಬಿತ್ತನೆ ಕಾರ್ಯ ಮಾಡದಂತೆ ಕಾವೇರಿ ಕಣಿವೆ ಭಾಗದ ರೈತರಿಗೆ ಮನವಿ ಮಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ
ಕೃಷಿ ಸಚಿವ ಚಲುವರಾಯಸ್ವಾಮಿ
ಪ್ರಸನ್ನ ಗಾಂವ್ಕರ್​
| Updated By: ಕಿರಣ್ ಹನುಮಂತ್​ ಮಾದಾರ್|

Updated on: Aug 22, 2023 | 7:16 PM

Share

ಬೆಂಗಳೂರು, ಆ.22: ‘ಮಳೆ ಹೀಗೆ ಕಡಿಮೆಯಾದ್ರೆ ಆಹಾರ ಉತ್ಪಾದನೆಗೆ ಸಮಸ್ಯೆ ಆಗುತ್ತದೆ ಎಂದು ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ (N Chaluvaraya Swamy) ಹೇಳಿದ್ದಾರೆ. ಬೆಂಗಳೂರಿನಲ್ಲಿ (Bengaluru) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಬಿತ್ತನೆ ಕಾರ್ಯ ಮಾಡದಂತೆ ಕಾವೇರಿ ಕಣಿವೆ ಭಾಗದ ರೈತರಿಗೆ ಮನವಿ ಮಾಡಿದ್ದಾರೆ. ಈಗಾಗಲೇ ನೀರಿನ ಅಭಾವದಿಂದ ತಿಂಗಳು, 15 ದಿನಕ್ಕೆ ನೀರು ಬಿಡುತ್ತಿದ್ದೇವೆ. ಮಳೆ ಸಮಸ್ಯೆಯಾದ್ರೆ ನೀರು ಬಿಡುವುದು ಬಂದ್ ಮಾಡಬೇಕು. ಹಾಗಾಗಿ ರೈತರು ಎಚ್ಚರಿಕೆಯಿಂದ ಬಿತ್ತನೆ ಮಾಡಬೇಕು ಎಂದರು.

ಈಗಿರುವ ಕೆಆರ್​ಎಸ್ ಜಲಾಶಯದ ನೀರಿನ ಮಟ್ಟ ಎಷ್ಟು?

ಈಗಾಗಲೇ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಹೋರಾಟಗಳು ಶುರುಬವಾಗಿದೆ. ನಮ್ಮಲ್ಲಿಯೇ ಸರಿಯಾಗಿ ಮಳೆಯಾಗದ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್​ಎಸ್ ಜಲಾಶಯದ ನೀರಿನ ಮಟ್ಟ 105 ಅಡಿಗೆ ಕುಸಿದಿದೆ. ಜಲಾಶಯದ ಗರಿಷ್ಟಮಟ್ಟ 124.80 ಅಡಿ ಇದ್ದು, ಸದ್ಯ ಜಲಾಶಯದ ನೀರಿನ ಮಟ್ಟ 105.70 ಅಡಿ ಇದೆ. ಒಳ ಹರಿವು 4983 ಕ್ಯೂಸೆಕ್ ಇದ್ದು, ಹೊರ ಹರಿವು 15,247 ಕ್ಯೂಸೆಕ್ ಇದೆ. ಈ ಮಧ್ಯೆ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದು ಎಷ್ಟು ಸರಿಯೆಂದು ಕರ್ನಾಟಕದ ಜನ ಪ್ರಶ್ನಿಸಿ ಹೋರಾಟಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ:ತಮಿಳುನಾಡಿಗೆ ಹೆಚ್ಚು ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ; ಒಂದು ಹನಿಯೂ ಹೆಚ್ಚು ಬಿಡಲ್ಲವೆಂದ ಕರ್ನಾಟಕ

ನೀರಿಗಾಗಿ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ತಮಿಳುನಾಡು

ನೀರಿಗಾಗಿ ಮತ್ತೆ ತಮಿಳುನಾಡು ಸರ್ಕಾರ ಕ್ಯಾತೆ ತೆಗೆದಿದ್ದು, ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ಇತ್ತ ರಾಜ್ಯ ಸರ್ಕಾರವು ಸಹ ಕರ್ನಾಟಕದಲ್ಲಿನ ನೀರಿನ ವಸ್ತುಸ್ಥಿತಿ ವಿವರಿಸಲು ನಿನ್ನೆ(ಆ.21) ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಿದೆ. ಕರ್ನಾಟಕದ ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಮಳೆ ಕೊರತೆಯಾಗಿ, ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಬಗ್ಗೆ ಹಾಗೂ ಡ್ಯಾಂಗಳಲ್ಲಿ ನೀರಿನ ಕೊರತೆ ಬಗ್ಗೆ ಕರ್ನಾಟಕ ಪರ ವಕೀಲ ಶ್ಯಾಮ್ ದಿವಾನ್​​ ವಾದ ಮಂಡಿಸಲಿದ್ದಾರೆ. ಇನ್ನು ಕಳೆದ ಆಗಸ್ಟ್​​​​​ 14 ರಂದು ಸುಪ್ರೀಂಕೋರ್ಟ್​​ ಮೆಟ್ಟಿಲೇರಿದ್ದ ತಮಿಳುನಾಡು, ಹಾಲಿ ಇರುವ ಬೆಳೆಗಳ ರಕ್ಷಣೆಗಾಗಿ ನಿತ್ಯ 24 ಸಾವಿರ ಕ್ಯೂಸೆಕ್​​​​​​​​ ಕಾವೇರಿ ನದಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರ ನಿರ್ದೇಶನ ನೀಡಬೇಕು ಎಂದು ಮನವಿ ಸಲ್ಲಿಸಿತ್ತು. ಸುಪ್ರೀಂ ಸೂಚನೆಯಂತೆ ಕೆಆರ್​​ಎಸ್​​​​ ಡ್ಯಾಂನಿಂದ ನೀರನ್ನ ಹರಿಬಿಡಲಾಗಿತ್ತು. ಆದ್ರೆ, ಇದೀಗ ಕೆಆರ್​ಎಸ್​ನಲ್ಲಿ ನೀರಿನ ಕೊರತೆ ಎದುರಾಗಿದೆ. ಹೀಗಾಗಿ ನೀರಿಗಾಗಿ ಎರಡು ರಾಜ್ಯಗಳು ಸುಪ್ರೀಂಕೋರ್ಟ್​ನಲ್ಲಿ ವಾದ ಮಂಡಿಸಲಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ