AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರ ನಾಸಿರ್​ನನ್ನು ಪೊಲೀಸ್​ ಬಟ್ಟೆಯಲ್ಲಿ ಬಾಂಗ್ಲಾಕ್ಕೆ ಕಳುಹಿಸಲು ಪ್ಲಾನ್​ ಮಾಡಿದ್ದ ASI ಪಾಷಾ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಲಷ್ಕರ್-ಎ-ತೊಯ್ಬಾ ಉಗ್ರ ನಾಸಿರ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ಮೂವರನ್ನು ಎನ್‌ಐಎ ಬಂಧಿಸಿದೆ. ಆರೋಪಿಗಳು ನಾಸಿರ್ ಅವರನ್ನು ಜೈಲಿನಿಂದ ಪರಾರಿ ಮಾಡಲು ಯೋಜನೆ ರೂಪಿಸಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಅವರು ಪೊಲೀಸ್ ಯೂನಿಫಾರ್ಮ್‌ ಖರೀದಿಸಿ, ಪರಾರಿ ಯೋಜನೆ ರೂಪಿಸಿದ್ದರು. ನ್ಯಾಯಾಲಯವು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಉಗ್ರ ನಾಸಿರ್​ನನ್ನು ಪೊಲೀಸ್​ ಬಟ್ಟೆಯಲ್ಲಿ ಬಾಂಗ್ಲಾಕ್ಕೆ ಕಳುಹಿಸಲು ಪ್ಲಾನ್​ ಮಾಡಿದ್ದ ASI ಪಾಷಾ
ಎಎಸ್​ಐ ಚಾಂದ್ ಪಾಷಾ ಹಾಗೂ ಫಾತಿಮಾ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jul 14, 2025 | 6:03 PM

Share

ಬೆಂಗಳೂರು, ಜುಲೈ 14: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಲಷ್ಕರೆ ತೊಯ್ಬಾ (ಎಲ್‌ಇಟಿ) ಉಗ್ರ ನಾಸಿರ್​ಗೆ (Nasir) ಸಹಾಯ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (NIA) ವಿಶೇಷ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ. ಆರು ದಿನ ಕಸ್ಟಡಿ ವಿಚಾರಣೆ ಸೋಮವಾರ (ಜು.14) ಮುಗಿದ ಹಿನ್ನೆಲೆಯಲ್ಲಿ ಎನ್​ಐಎ ಆರೋಪಿಗಳಾದ ಅನೀಸ್ ಫಾತಿಮಾ, ಎಎಸ್​ಐ ಚಾನ್ ಪಾಷಾ ಮತ್ತು ವೈದ್ಯ ನಾಗರಾಜ್​​ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ನ್ಯಾಯಲಯ ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಆರೋಪಿಗಳ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಉಗ್ರ ಟಿ ನಾಸಿರ್​ನನ್ನು ನ್ಯಾಯಾಲಯಕ್ಕೆ ಕರೆತರುವಾಗ ಸ್ಫೋಟಿಸಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಹೋಗುವಂತೆ ಪ್ಲ್ಯಾನ್​ ರೂಪಿಸಲಾಗಿತ್ತು. ಟಿ ನಾಸಿರ್​ ಪೊಲೀಸರ ಕೈಯಿಂದ ತಪ್ಪಿಸಿಕೊಂಡ ಬಳಿಕ, ಆತನನ್ನು ಬಾಂಗ್ಲಾದೇಶಕ್ಕೆ ಕಳುಹಿಸಲು ಆರೋಪಿಗಳು ನಿರ್ಧರಿಸಿದ್ದರು ಎಂದು ಎನ್​​ಐಎ ವಿಚಾರಣೆ ತಿಳಿದುಬಂದಿದೆ.

ಇನ್ನು, ಉಗ್ರ ನಾಸೀರ್​ಗೆ ಪೊಲೀಸ್ ಸಮವಸ್ತ್ರ ಧರಿಸಿ ಕರೆದುಕೊಂಡು ಹೋಗಬೇಕು ಎಂದು ಪ್ಲಾನ್ ಮಾಡಲಾಗಿತ್ತು. ಈ ಸಂಬಂಧ ಆರೋಪಿಗಳು 10 ಜೊತೆ ಪೊಲೀಸ್ ಸಮವಸ್ತ್ರ ಖರೀದಿ ಮಾಡಿದ್ದರು. ಸದ್ಯ ಹತ್ತೂ ಜೊತೆ ಪೊಲೀಸ್ ಸಮವಸ್ತ್ರಗಳನ್ನು ಎನ್​ಐಎ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ
Image
ಕೊಯಮತ್ತೂರು ಬಾಂಬ್​ ಸ್ಫೋಟದ ಆರೋಪಿ 27 ವರ್ಷದ ಬಳಿಕ ಕರ್ನಾಟಕದಲ್ಲಿ ಅರೆಸ್ಟ್
Image
ಸಂಪುಟ ವಿಸ್ತರಣೆಗಾಗಿ ದೆಹಲಿಗೆ ಬಂದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
Image
ಹಲವು ಸ್ಫೋಟಗಳ ಮಾಸ್ಟರ್ ಮೈಂಡ್ ನಾಸೀರ್ ಜತೆ ಬಂಧಿತರಿಗೆ ಪ್ರಬಲ ನಂಟು
Image
ಅಡ್ವಾಣಿ ಮೇಲೆ ದಾಳಿಯ ಸಂಚು ರೂಪಿಸಿದ್ದ ಉಗ್ರ ಅಬೂಬಕರ್ ಅರೆಸ್ಟ್​

ಇದನ್ನೂ ಓದಿ: ಉಗ್ರ ನಾಸಿರ್​ನನ್ನು ಎಸ್ಕೆಫ್ ಮಾಡಿಸಲು ಫಾತಿಮಾ ತಡರಾತ್ರಿ ಪ್ಲಾನ್​: ಫೋನ್​ನಲ್ಲಿ ಗಂಟೆಗಟ್ಟಲೇ ಮಾತುಕತೆ

ಪೊಲೀಸ್​ ಸಮವಸ್ತ್ರ ಖರೀದಿಗೆ ಎಎಸ್​ಐ ಚಾನ್ ಪಾಷ ಸಹಾಯ ಮಾಡಿದ್ದನು. ಎಎಸ್​ಐ ಚಾನ್ ಪಾಷಾ ಸೂಚನೆ ಮೇರೆಗೆ ಉಳಿದ ಆರೋಪಿಗಳು ಶಿವಾಜಿನಗರದಲ್ಲಿ ಪೊಲೀಸ್ ಸಮವಸ್ತ್ರ ಖರೀದಿ ಮಾಡಿದ್ದರು. ಎಎಸ್​​ಐ ಚಾನ್ ಪಾಷ ಟಿ ನಾಸಿರ್​ನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಲು ಸಿಬ್ಬಂದಿಗಳನ್ನು ನಿಯೋಜನೆ ಮಾಡಿದ್ದನು. ಟಿ ನಾಸಿರ್​ನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಲು ವಯಸ್ಸಾಗಿರುವ ಮತ್ತು ಶಕ್ತಿ ಇಲ್ಲದವರನ್ನು ನೇಮಕ ಮಾಡಿದ್ದನು.

ನಂತರ ದಾರಿ ನಡುವೆ ಸ್ಫೋಟಿಸಿ, ಪೊಲೀಸ್ ಸಮವಸ್ತ್ರದಲ್ಲಿ ಟಿ ನಾಸಿರ್​ನನ್ನು ಪರಾರಿ ಮಾಡಿಸುವುದು ಇವರ ಯೋಜನೆಯಾಗಿತ್ತು. ನಂತರ ಕೇರಳಕ್ಕೆ ಕರೆದುಕೊಂಡು ಹೋಗಿ, ಅಲ್ಲಿಂದ ಸಮುದ್ರ ಮಾರ್ಗವಾಗಿ ಪಶ್ಚಿಮ ಬಂಗಾಳಕ್ಕೆ, ಇಲ್ಲಿಂದ ಬಾಂಗ್ಲಾದೇಶಕ್ಕೆ ಕರೆದುಕೊಂಡು ಹೋಗುವ ಪ್ಲಾನ್ ಆರೋಪಿಗಳು ರೂಪಿಸಿದ್ದರು ಎಂಬುದು ತನಿಖೆ ವೇಳೆ ಬಯಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 6:02 pm, Mon, 14 July 25

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ