ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ
ಶನಿವಾರ ರಾತ್ರಿ 11:20ಕ್ಕೆ ಬೆಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ AI 1132 ಏರ್ ಇಂಡಿಯಾ ವಿಮಾನ ಕ್ಷಣದಲ್ಲಿ ಹೊಗೆ ಕಾಣಿಸಿಕೊಂಡಿದೆ. ಟೇಕ್ ಆಫ್ ಆದ ಕೆಲವೆ ಕ್ಷಣದಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ವಿಮಾನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ತುರ್ತು ಲ್ಯಾಂಡ್ ಮಾಡಲಾಗಿದೆ.
ಬೆಂಗಳೂರು, ಮೇ 19: ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ (Air India) ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಬೆಂಗಳೂರಿನ (Bengaluru) ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ (KIAB) ತುರ್ತು ಭೂಸ್ಪರ್ಶವಾಗಿದೆ. AI 1132 ಏರ್ ಇಂಡಿಯಾ ವಿಮಾನ ರಾತ್ರಿ 11.20ಕ್ಕೆ ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ತೆರಳಲು ಟೇಕ್ ಆಫ್ ಆಗಿತ್ತು. ಆದರೆ ವಿಮಾನದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೆ ಪೈಲಟ್ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಎಮರ್ಜೆನ್ಸಿ ಲ್ಯಾಂಡ್ ಮಾಡಿದರು. ಇದರಿಂದ ಭಾರಿ ಅನಾಹುತ ತಪ್ಪಿದೆ. ವಿಮಾನ ಭೂ ಸ್ಪರ್ಶವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕೂಡಲೆ ಬೆಂಕಿಯನ್ನು ನಂದಿಸಿದ್ದಾರೆ. ವಿಮಾನದಲ್ಲಿದ್ದ ಸಿಬ್ಬಂದಿ ಸೇರಿ 170 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.
ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ
ನವದೆಹಲಿ: ಶುಕ್ರರವಾರ ಮೇ 17 ರಂದು ಸಂಜೆ 6 ಗಂಟೆ ಸುಮಾರಿಗೆ ನವದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದ ಬೆಂಕಿ ಕಾಣಿಸಿಕೊಂಡಿತ್ತು. ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 175 ಪ್ರಯಾಣಿಕರಿದ್ದ ವಿಮಾನ ಟೇಕ್ ಆಫ್ ಆಗುವ ವೇಳೆ ಹವಾನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೆ ಎಚ್ಚೆತ್ತ ಸಿಬ್ಬಂದಿ ಅಲರ್ಟ್ ಮಾಡಿದ್ದು, ಪೈಲೆಟ್ ವಿಮಾನವನ್ನು ದೆಹಲಿ ನಿಲ್ದಾಣದಲ್ಲೇ ಲ್ಯಾಂಡ್ ಮಾಡಿದ್ದರು. ಇದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.
ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪ್ರಯಾಣಿಕ ಅರೆಸ್ಟ್
ಅಮೆರಿಕಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ
ಕಳೆದ ವರ್ಷ ಫೆಬ್ರವರಿಯಲ್ಲಿ ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಸ್ವೀಡನ್ನಲ್ಲಿ ತುರ್ತು ಭೂ ಸ್ಪರ್ಶವಾಗಿತ್ತು. ಸುಮಾರು 300 ಪ್ರಯಾಣಿಕರನ್ನು ಹೊತ್ತು ಅಮೆರಿಕದ ನೆವಾರ್ಕ್ಗೆ ತೆರಳುತ್ತಿತ್ತು. ವಿಮಾನ ತುರ್ತು ಭೂಸ್ಪರ್ಶವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದರು.
ನೆವಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಬೋಯಿಂಗ್ 777-300ER ಏರ್ ಇಂಡಿಯಾ ವಿಮಾನದ ಇಂಜಿನ್ನಲ್ಲಿ ತೈಲ ಸೋರಿಕೆಯಾದ ಕಾರಣ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:06 am, Sun, 19 May 24