ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಹೆಚ್ಚಳ: ಮತ್ತೊಂದು ದೆಹಲಿ ಆಗಲಿದ್ಯ ನಮ್ಮ ಬೆಂಗಳೂರು?

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವರ್ಷದಿಂದ ವರ್ಷಕ್ಕೆ ವಾಯು ಮಾಲಿನ್ಯದ ಪ್ರಮಾಣ ಹೆಚ್ಚಳವಾಗ್ತಿದೆ. ರಾಜಧಾನಿಯಲ್ಲಿ ಪ್ರತಿದಿನ ಎರಡು ಸಾವಿರ ಹೊಸ ವಾಹನಗಳು ರೋಡಿಗಿಳಿಯುತ್ತಿದ್ರೆ, ತಿಂಗಳಿಗೆ ಸರಾಸರಿ- 54 ಸಾವಿರ ವಾಹನಗಳು ರಿಜಿಸ್ಟರ್ ಆಗ್ತಿವೆ. ಇದರಿಂದ ನಗರದಲ್ಲಿ ವಾಯು ಮಾಲಿನ್ಯದ ಪ್ರಮಾಣ ಹೆಚ್ಚಳವಾಗ್ತಿದೆ. ಬೆಂಗಳೂರು ಮತ್ತೊಂದು ದೆಹಲಿ ಆಗಲಿದ್ಯ ಅನ್ನೋ ಆತಂಕ ಶುರುವಾಗಿದೆ.

ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಹೆಚ್ಚಳ: ಮತ್ತೊಂದು ದೆಹಲಿ ಆಗಲಿದ್ಯ ನಮ್ಮ ಬೆಂಗಳೂರು?
ಸಾಂದರ್ಭಿಕ ಚಿತ್ರ
Follow us
Kiran Surya
| Updated By: ಆಯೇಷಾ ಬಾನು

Updated on: Sep 09, 2024 | 7:34 AM

ಬೆಂಗಳೂರು, ಸೆ.09: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಪ್ರತಿದಿನ ಎರಡು ಸಾವಿರ ಹೊಸ ವಾಹನಗಳು ರಿಜಿಸ್ಟರ್ ಆಗ್ತಿದೆ. ರಾಜ್ಯದಲ್ಲಿ ಪ್ರತಿ ತಿಂಗಳು 1.5 ಲಕ್ಷ ನೂತನ ವಾಹನಗಳ ನೋಂದಣಿ ಆಗ್ತಿದೆ. ಸಿಲಿಕಾನ್ ಸಿಟಿ ರಸ್ತೆಗೆ ಪ್ರತಿ ತಿಂಗಳು 60 ಸಾವಿರ ನೂತನ ವಾಹನಗಳು ರೋಡಿಗಿಳಿಯುತ್ತಿವೆ. ಸಾರಿಗೆ ಇಲಾಖೆಯ ಅಧಿಕೃತ ಮಾಹಿತಿಯ ಪ್ರಕಾರ, ಇಡೀ ರಾಜ್ಯದಲ್ಲಿ ಪ್ರತಿನಿತ್ಯ ಕನಿಷ್ಟ ಬರೋಬ್ಬರಿ 5 ಸಾವಿರ ನೂತನ ವಾಹನಗಳು ನೋಂದಣಿಯಾಗ್ತಿದ್ದಾವೆ. ಅಂದ್ರೆ, ತಿಂಗಳಿಗೆ ಒಂದೂವರೆ ಲಕ್ಷ ಹಾಗೂ ವರ್ಷಕ್ಕೆ 18 ಲಕ್ಷ ವಾಹನಗಳು ಹೊಸದಾಗಿ ರಾಜ್ಯದ ರಸ್ತೆಗೆ ಇಳಿಯುತ್ತಿವೆ. ಕಳೆದ ವರ್ಷಕ್ಕಿಂತ ಈ ವರ್ಷ ನೋಂದಣಿ ಆಗಿರೋ ವಾಹನಗಳ ಪ್ರಮಾಣದಲ್ಲಿ ಶೇ. 6.5ರಷ್ಟು ಏರಿಕೆಯಾಗಿದೆ (Air Pollution). ಈ ಬಗ್ಗೆ ತಜ್ಞರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

  • HSR ಲೇಔಟ್ ಭಾಗದಲ್ಲಿ 21 ರಿಂದ 22ನೇ ಇಸವಿಯಲ್ಲಿ 79.8.%, 2022 ರಿಂದ 2023ರಲ್ಲಿ- 93.8 ಶೇಕಡ, 23 ರಿಂದ 24 ಆಗಸ್ಟ್ ವರೆಗೆ 92.0 ಶೇಕಡ ವಾಹನ ಖರೀದಿ ಹೆಚ್ಚಳವಾಗಿದೆ.
  • ಕವಿಕಾ ಸ್ಟೇಷನ್- 2021-2022ನಲ್ಲಿ 73.9%, 2022-2023ನಲ್ಲಿ 83.2%, 2023ರಿಂದ 2024 ಆಗಸ್ಟ್​ ವರೆಗೆ 73.7% ಇದೆ.
  • ಸಿಟಿ ರೈಲ್ವೆ ಸ್ಟೇಷನ್- 2021-2022ರಲ್ಲಿ68.%, 2022-2023ರಲ್ಲಿ -77.6%, 2023ರಿಂದ 2024ರ ಆಗಸ್ಟ್ ವರೆಗೆ 71.9%.
  • ಹೆಬ್ಬಾಳ ವೆಟರ್ನರಿ ಕಾಲೇಜು ಸ್ಟೇಷನ್- 2021-2022ರಲ್ಲಿ63.5%,  2022-2023ರಲ್ಲಿ64.4%, 2023ರಿಂದ 2024ರ ಆಗಸ್ಟ್ ವರೆಗೆ 62.9%.
  • ಶಾಲಿನಿ ಗ್ರೌಂಡ್ ಸ್ಟೇಷನ್- 2021-2022ರಲ್ಲಿ 60.8%, 2022-2023ರಲ್ಲಿ 67.1%,
  • 2023ರಿಂದ 2024ರ ಆಗಸ್ಟ್ ವರೆಗೆ 79.6%.

ಇದನ್ನೂ ಓದಿ: ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ವಾಯು ಗುಣಮಟ್ಟ ಗಣನೀಯ ಕುಸಿತ, ಗಾಳಿಯಲ್ಲಿ ಹೆಚ್ಚಿದ ಅಪಾಯಕಾರಿ ಕಣಗಳು: ಅಧ್ಯಯನ ವರದಿ

ಇನ್ನೂ ದೆಹಲಿಯಲ್ಲಿ ಹದಿನೈದು ವರ್ಷ ಮೇಲ್ಪಟ್ಟ ಪೆಟ್ರೋಲ್ ವಾಹನಗಳು, ಹತ್ತು ವರ್ಷ ಮೇಲ್ಪಟ್ಟ ಡಿಸೇಲ್ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಆದರೆ ಕರ್ನಾಟಕ ರಾಜ್ಯದಲ್ಲಿ ಹದಿನೈದು ವರ್ಷ ಮೇಲ್ಪಟ್ಟ ಸರ್ಕಾರಿ ಮತ್ತು ನಿಗಮ ಮಂಡಲಿಗಳ ವಾಹನಗಳನ್ನು ಮಾತ್ರ ಕಡ್ಡಾಯವಾಗಿ ಗುಜರಿಗೆ ಹಾಕಬೇಕು ಅನ್ನೋ ರೂಲ್ಸ್ ಇದೆ. ಬೇರೆ ಯಾವುದೇ ವಾಹನಗಳನ್ನು ಕಡ್ಡಾಯವಾಗಿ ಗುಜರಿಗೆ ಹಾಕುವ ರೂಲ್ಸ್ ಇಲ್ಲ ಹಾಗಾಗಿ 10-15 ವರ್ಷ ಮೇಲ್ಪಟ್ಟ ವಾಹನಗಳಿಂದ ಹೆಚ್ಚಿನ ವಾಯುಮಾಲಿನ್ಯ ಆಗುತ್ತಿದೆ. ಇನ್ನು ಬೆಂಗಳೂರಿನಲ್ಲಿರುವ 11 ವಾಯುಮಾಲಿನ್ಯ ನಿಯಂತ್ರಣ ಕೇಂದ್ರಗಳಲ್ಲಿ ಐದು ಕೇಂದ್ರಗಳ ಮಾಹಿತಿಯ ಆಧಾರದಲ್ಲಿ ಹೇಳುವುದಾದರೆ, ಪ್ರತಿ ಕೇಂದ್ರದಲ್ಲೂ ವರ್ಷದಿಂದ ವರ್ಷಕ್ಕೆ ವಾಯುಮಾಲಿನ್ಯದ ಪ್ರಮಾಣ ಹೆಚ್ಚಳವಾಗ್ತಿರೋದು ಅಂಕಿ ಅಂಶಗಳಲ್ಲಿ ತಿಳಿಯುತ್ತದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಬೆಂಗಳೂರು ಮತ್ತೊಂದು ದೆಹಲಿ ಆಗಬಹುದು ಎಂದು ಬೆಂಗಳೂರಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಒಟ್ನಲ್ಲಿ ದಿನದಿಂದ ದಿನಕ್ಕೆ ಬೆಂಗಳೂರಲ್ಲಿ ಹೊಸ ವಾಹನಗಳ ಸಂಖ್ಯೆ ಹೆಚ್ಚಾಗ್ತಾನೆ ಇದೆ. ಇದರಿಂದ ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣವು ಹೆಚ್ಚುತ್ತಿದ್ದು, ಜನರಿಗೆ ಉಸಿರಾಟದ ಸಮಸ್ಯೆ ಹೆಚ್ವಾಗುವ ಭಯ ಹೆಚ್ಚಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು