AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕಾಕ್​ನಿಂದ ಬೆಂಗಳೂರಿಗೆ ತಂದಿದ್ದ 23 ಕೋಟಿ ರೂ. ಮೌಲ್ಯದ ಗಾಂಜಾ ವಿಮಾನ ನಿಲ್ದಾಣದಲ್ಲಿ ವಶ

ಇಷ್ಟು ದಿನ ಬೆಂಗಳೂರು ಏರ್​ಪೋರ್ಟ್​ನಲ್ಲಿ ವಾಮ ಮಾರ್ಗವಾಗಿ ಕೋಟಿ ಕೋಟಿ ರೂಪಾಯಿ ಬೆಲೆಬಾಳುವ ಚಿನ್ನಾಭರಣಗಳನ್ನು ಸಾಗಿಸಲಾಗುತ್ತಿತ್ತು. ಇದೀಗ ವಿಮಾನ ನಿಲ್ದಾಣದ ಮೂಲಕ ಕೋಟಿ ಕೋಟಿ ರೂ. ಬೆಲೆಬಾಳುವ ಗಾಂಜಾ ಸಾಗಿಸಲು ಹೋದ ಖದೀಮರು ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. 23 ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಬ್ಯಾಂಕಾಕ್​ನಿಂದ ಬೆಂಗಳೂರಿಗೆ ತಂದಿದ್ದ 23 ಕೋಟಿ ರೂ. ಮೌಲ್ಯದ ಗಾಂಜಾ ವಿಮಾನ ನಿಲ್ದಾಣದಲ್ಲಿ ವಶ
ಸಾಂದರ್ಭಿಕ ಚಿತ್ರ
ನವೀನ್ ಕುಮಾರ್ ಟಿ
| Edited By: |

Updated on: Jan 17, 2025 | 7:51 AM

Share

ಬೆಂಗಳೂರು, ಜನವರಿ 17: ಪ್ರತಿ ನಿತ್ಯ ದೇಶ ವಿದೇಶಗಳಿಗೆ ಸಾವಿರಾರು ಜನ ಪ್ರಯಾಣಿಸುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ತಂದಿದ್ದ ಕೋಟಿ ಕೋಟಿ ರೂಪಾಯಿ ಬೆಲೆ ಬಾಳುವ ಗಾಂಜಾವನ್ನು ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಬ್ಯಾಂಕಾಕ್​ನಿಂದ ಬೆಂಗಳೂರಿಗೆ ಬಂದಿದ್ದ ಹೈಡ್ರೋಪೋನಿಕ್ಸ್ ಗಾಂಜಾ, ಮೈರವಾನ್ ಗಾಂಜಾ ಹೂ ಸೇರಿದಂತೆ ವಿವಿಧ ಬಗೆಯ 23 ಕೋಟಿ ರೂ. ಮೌಲ್ಯದ 23 ಕೆಜಿ ಗಾಂಜಾ ವನ್ನು ವಶಕ್ಕೆ ಪಡೆಯಲಾಗಿದೆ.

ಈ ಗಾಂಜಾವನ್ನು ಪ್ರತಿಷ್ಠಿತ ಶಾಲಾ ಕಾಲೇಜು ಹಾಗೂ ಪಾರ್ಟಿಗಳು ನಡೆಯುವ ಜಾಗಗಳಿಗೆ ತಲುಪಿಸಲು ತರಲಾಗಿತ್ತು ಎಂದು ಹೇಳಲಾಗುತ್ತಿದ್ದು, ಶ್ರೀಮಂತರು ಹೆಚ್ಚಾಗಿ ಬಳಸುವ ಗಾಂಜಾ ಇದಾಗಿದೆ.

ವಿಮಾನ ನಿಲ್ದಾಣದಲ್ಲಿ ಗಾಂಜಾ ಪತ್ತೆಯಾಗಿದ್ಹೇಗೆ?

ಕೆಂಪೇಗೌಡ ಏರ್ಪೋರ್ಟ್​​ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ಮಾಡುವ ವೇಳೆ, ಪ್ರತ್ಯೇಕ ಕವರ್​ಗಳಲ್ಲಿ ಪ್ಯಾಕ್ ಮಾಡಿಕೊಂಡು ಲಗೇಜ್ ಬ್ಯಾಗ್​ನಲ್ಲಿ ಇಟ್ಟಿಕೊಂಡು ಅಕ್ರಮವಾಗಿ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಲಗೇಜ್ ಚೆಕ್ ಮಾಡುವ ವೇಳೆ ಗಾಂಜಾ ಸಮೇತ ಮೂವರು ಆರೋಪಿಗಳ‌ನ್ನು ಬಂಧಿಸಿದ್ದಾರೆ. ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆ ಬಾಳುವ ಹೈಡ್ರೋಪೋನಿಕ್ ಗಾಂಜಾವನ್ನು ಆರೋಪಿಗಳು ಸಾಗಿಸುತ್ತಿದ್ದು, ಆರೋಪಿಗಳ ಮೇಲೆ ಎನ್​ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಮಾವ ಎನ್ನುವ ಕಾಮ‌ ಕ್ರಿಮಿಯ ಸಂಗ ಮಾಡಿ ಸಾವಿನ ಮನೆ ಸೇರಿದ ಸೊಸೆ ಟೆಕ್ಕಿ

ಒಟ್ಟಾರೆ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಡ್ರಗ್ಸ್ ಜೊತೆಗೆ ವಿದೇಶದಿಂದ ಹೆಚ್ಚು ಬೆಲೆ ಬಾಳುವ ಗಾಂಜಾದಂತಹ ಮಾದಕ ವಸ್ತುಗಳ ಸಾಗಾಣಿಕೆ ಮಾಡಲು ಯತ್ನಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೆ ಇದೆ. ಈ ಗಾಂಜಾವನ್ನು ಎಲ್ಲಿಗೆ ಪೂರೈಸಲು ತರಲಾಗಿತ್ತು? ಯಾರಿಗೆ ಕೊಡಲು ತಂದಿದ್ದರು ಎಂಬುದನ್ನು ಇನ್ನಷ್ಟೇ ಅಧಿಕಾರಿಗಳು ತನಿಖೆ ನಡೆಸಿ ಪತ್ತೆ ಹಚ್ಚಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More