Alcohol Prices: ಅಬಕಾರಿ ಸುಂಕ ಹೆಚ್ಚಳ; ಮದ್ಯದ ದರ ಪರಿಷ್ಕರಿಸಲಿವೆ ಬೆಂಗಳೂರಿನ ಪಬ್, ಬಾರ್​​ಗಳು

ಬಜೆಟ್​ನಲ್ಲಿ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಶೇಕಡಾ 20 ರಷ್ಟು, ಬಿಯರ್ ಮೇಲಿನ ಸುಂಕವನ್ನು ಶೇ 10ರಷ್ಟು ಹೆಚ್ಚಿಸಲಾಗಿತ್ತು.

Alcohol Prices: ಅಬಕಾರಿ ಸುಂಕ ಹೆಚ್ಚಳ; ಮದ್ಯದ ದರ ಪರಿಷ್ಕರಿಸಲಿವೆ ಬೆಂಗಳೂರಿನ ಪಬ್, ಬಾರ್​​ಗಳು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Jul 21, 2023 | 4:09 PM

ಬೆಂಗಳೂರು, ಜುಲೈ 21: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಮಂಡಿಸಿದ್ದ ಬಜೆಟ್​​ನಲ್ಲಿ ಮದ್ಯದ ಮೇಲೆ ಅಬಕಾರಿ ಸುಂಕವನ್ನು ಶೇಕಡಾ 20 ರಷ್ಟು ಹೆಚ್ಚಳ (Excise Duty Hike) ಮಾಡಿದ್ದು, ಬಿಯರ್ ಮೇಲೆ ಶೇ 10ರಷ್ಟು ಹೆಚ್ಚಿಸಿದ್ದರು. ಇದು ಗುರುವಾರ ಜಾರಿಗೆ ಬಂದೆ. ಸುಂಕ ಹೆಚ್ಚಳದ ನಂತರ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲೀಕರು ಮದ್ಯದ ಬೆಲೆ ಪರಿಷ್ಕರಿಸಲು (Liquor prices) ಮುಂದಾಗಿದ್ದಾರೆ. ಆಲ್ಕೋಹಾಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳಕ್ಕೆ ಸಂಬಂಧಿಸಿ ಜುಲೈ 18ರಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದರ ನಂತರ ಬಾರ್ ಹಾಗೂ ಪಬ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಭಾರತದಲ್ಲಿ ತಯಾರಾಗುವ ವಿದೇಶಿ ಬ್ರಾಂಡ್​​ ಮದ್ಯಕ್ಕೆ (IMFL) ಸಂಬಂಧಿಸಿದ ಎಲ್ಲಾ 18 ಸ್ಲ್ಯಾಬ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ 20 ರಷ್ಟು ಹೆಚ್ಚಿಸುವುದಾಗಿ ಜುಲೈ 7ರಂದು ಮಂಡಿಸಿದ್ದ ಬಜೆಟ್​​​ನಲ್ಲಿ ಸಿದ್ದರಾಮಯ್ಯ ಘೋಷಿಸಿದ್ದರು. ಇದಲ್ಲದೇ ರಾಜ್ಯದಲ್ಲಿ ಬಿಯರ್ ಮೇಲಿನ ಸುಂಕ ಶೇ 10ರಷ್ಟು ಏರಿಕೆ ಮಾಡುವುದಾಗಿ ಘೋಷಿಸಿದ್ದರು.

ಹೆಚ್ಚುವರಿ ಅಬಕಾರಿ ಸುಂಕದ ಹೆಚ್ಚಳದಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮಾರ್ಚ್ 31, 2024 ಕ್ಕೆ ಕೊನೆಗೊಳ್ಳುವ ಹಣಕಾಸು ವರ್ಷದಲ್ಲಿ ಹೆಚ್ಚುವರಿಯಾಗಿ 36,000 ಕೋಟಿ ರೂ. ಅಬಕಾರಿ ಸುಂಕ ಸಂಗ್ರಹಿಸಲು ನೆರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: Liquor Price in Karnataka: ಮದ್ಯ ಪ್ರಿಯರಿಗೆ ಬಿಗ್ ಶಾಕ್, ಕರ್ನಾಟಕದಲ್ಲಿ ಅಬಕಾರಿ ತೆರಿಗೆ ಹೆಚ್ಚಳ

ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದ ಮತದಾರರಿಗೆ ಐದು ಉಚಿತ ಗ್ಯಾರಂಟಿಗಳ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರವು ಅವುಗಳನ್ನು ಜಾರಿಗೆ ತರಲು ಹೊರಟಿರುವುದರಿಂದ ಅದಕ್ಕಾಗಿ ಆದಾಯ ಕ್ರೂಡೀಕರಣಕ್ಕೆ ಮದ್ಯದ ಮೇಲಿನ ಅಬಕಾರಿ ಸುಂಕ ಹಚ್ಚಳದ ಮೊರೆ ಹೋಗಿದೆ.

ಬಜೆಟ್ ಮಂಡನೆಗೂ ಮುನ್ನವೇ ಮದ್ಯದ ಬೆಲೆಯಲ್ಲಿ ಏರಿಕೆಯಾಗಲಿರುವ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದರು.

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ