ಏಪ್ರಿಲ್ 11 ರಿಂದ 14ರ ವರೆಗೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ; ವಿವರ ಇಲ್ಲಿದೆ

| Updated By: ganapathi bhat

Updated on: Apr 10, 2022 | 4:53 PM

ಏಪ್ರಿಲ್ 13, 14 ರಂದು ಮುತ್ಯಾಲಮ್ಮ ದೇವಿ ರಥೋತ್ಸವ ಹಿನ್ನೆಲೆ ಭಾರತೀನಗರ ಠಾಣಾ ವ್ಯಾಪ್ತಿಯಲ್ಲಿ 2 ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ನೀಡಿದ್ದಾರೆ.

ಏಪ್ರಿಲ್ 11 ರಿಂದ 14ರ ವರೆಗೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ; ವಿವರ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಕೋದಂಡರಾಮಸ್ವಾಮಿ ಪಲ್ಲಕ್ಕಿ ಉತ್ಸವ ಹಿನ್ನೆಲೆ ಏಪ್ರಿಲ್ 11, 12 ರಂದು ಹಲಸೂರು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. 2 ದಿನ ಹಲಸೂರು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಆಗಿರಲಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ನೀಡಿದ್ದಾರೆ. ಅಲ್ಲದೆ, ಏಪ್ರಿಲ್ 13, 14 ರಂದು ಮುತ್ಯಾಲಮ್ಮ ದೇವಿ ರಥೋತ್ಸವ ಹಿನ್ನೆಲೆ ಭಾರತೀನಗರ ಠಾಣಾ ವ್ಯಾಪ್ತಿಯಲ್ಲಿ 2 ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

ಪೂರ್ವ ವಿಭಾಗದ ಭಾರತೀನಗರ, ಕಮರ್ಷಿಯಲ್ ಸ್ಟ್ರೀಟ್, ಪುಲಿಕೇಶಿ ನಗರ, ಶಿವಾಜಿನಗರ, ಡಿಜೆ ಹಳ್ಳಿ ಸೇರಿದಂತೆ ಉತ್ತರ ವಿಭಾಗದ ಜೆ.ಸಿ.ನಗರ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್ 13, 14 ರಂದು ಮದ್ಯ ಮಾರಾಟ ನಿಷೇಧ ಇರಲಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಈ ಬಗ್ಗೆ ಆದೇಶ ನೀಡಿದ್ದಾರೆ.

ಬಬಿಎಂಟಿಸಿ ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು? ಪ್ರಯಾಣಿಕರ ಆತಂಕಕ್ಕೆ ಮುಕ್ತಿ ಯಾವಾಗ?

ಇತ್ತೀಚೆಗೆ ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್​ಗಳು (BMTC Buses) ಹೊತ್ತಿ ಉರಿಯುತ್ತಿರುವ ಘಟನೆಗಳು ನಡೆಯುತ್ತಿವೆ. ಮೂರು ನಾಲ್ಕು ತಿಂಗಳುಗಳಿಂದ ಬಸ್ಗಳು ಬೆಂಕಿಗಾಹುತಿಯಾಗುತ್ತಿವೆ. ಕಳೆದ ಎರಡು ತಿಂಗಳಲ್ಲಿ ಮೂರು ಬಸ್​ಗಳು ಸುಟ್ಟು ಹೋಗಿವೆ. ನಿತ್ಯ ಲಕ್ಷಾಂತರ ಪ್ರಯಾಣಿಕರು (Passengers) ಸಂಚಾರ ಮಾಡುವ ಬಿಎಂಟಿಸಿ ಬಸ್​ಗಳು ಸುರಕ್ಷಿತ ಅಲ್ವಾ? ಎಂಬ ಅನುಮಾನ ಮೂಡಿದೆ. ಜೊತೆಗೆ ಬಿಎಂಟಿಸಿ ಬಸ್​ಗಳ ನಿರ್ವಹಣೆಯಲ್ಲಿ ಪದೇ ಪದೇ ನಿರ್ಲಕ್ಷ್ಯ ವಹಿಸಿದ್ಯಾ ಎಂಬ ಶಂಕೆ ವ್ಯಕ್ತವಾಗುತ್ತಿದೆ.

ಅಧಿಕಾರಿಗಳ ಬೇಜವಾಬ್ದಾರಿನೇ ಇದಕ್ಕೆ ಕಾರಣ ಆಯಿತಾ? ಅಧಿಕಾರಿಗಳ ಕಮಿಷನ್ ಧನದಾಹಕ್ಕೆ ಬಿಎಂಟಿಸಿ ಬಸ್​ಗಳು ಬೆಂಕಿ ಆಹುತಿ ಆಗುತ್ತಿದ್ಯಾ? ಈ ಹಿಂದೆ ಎರಡು ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದರೂ ಅಧಿಕಾರಿಗಳು ಯಾಕೆ ಎಚ್ಚೆತ್ತುಕೊಂಡಿಲ್ಲ? ಎಂಬ ಪ್ರಶ್ನೆಗಳ ಸರಮಾಲೆ ಹುಟ್ಟಿಕೊಂಡಿದ್ದು, ಸಾಲು ಸಾಲು ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪ್ರಯಾಣಿಕರಿಗೆ ಆತಂಕ ಹೆಚ್ಚಾಗಿದೆ.

ಬಿಎಂಟಿಸಿ ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನಿರಬಹುದು?

* ಅಶೋಕ್ ಲೇಲ್ಯಾಂಡ್ ಕಂಪನಿಯಲ್ಲಿ ಬಸ್​ಗಳ ವಿನ್ಯಾಸ ಲೋಪದೋಷ.
* ನಗರದ 48 ಡಿಪೋಗಳಲ್ಲಿ ಬಸ್ ನಿರ್ವಹಣೆಯಲ್ಲಿ ವೈಫಲ್ಯ.
* ಬಸ್ ಡಿಪೋಗಳಿಂದ ಹೊರಬರುವ ಮುನ್ನ ಬಸ್​ಗಳನ್ನ ಪರಿಶೀಲನೆ ಮಾಡುತ್ತಿಲ್ಲ.
* ಕಳಪೆ ಗುಣಮಟ್ಟದ ಸ್ಪೇರ್ ಪಾರ್ಟ್ಸ್ ಖರೀದಿ.
* ಬಿಸಿಲಿನ ಧಗೆಯಿಂದ ಇಂಜಿನ್ನಲ್ಲಿ ತಾಂತ್ರಿಕ ದೋಷ.

ಇದನ್ನೂ ಓದಿ: ದಾವಣಗೆರೆಯಲ್ಲಿ ಮದ್ಯ ಸೇವನೆಗೆ ಹಣ ಕೊಡದ ತಂದೆಯನ್ನೇ ಕೊಲೆ ಮಾಡಿದ ಮಗ! ಆರೋಪಿ ಅರೆಸ್ಟ್

ಇದನ್ನೂ ಓದಿ: ಕರ್ನಾಟಕದ ಬಾರ್ ಆ್ಯಂಡ್ ರೆಸ್ಟೋರೆಂಟ್​ಗಳಲ್ಲಿ ಮದ್ಯ ಖಾಲಿ! ಇಂದು ಸಂಜೆಯಿಂದ ಮದ್ಯ ಪ್ರಿಯರಿಗೆ ಇಲ್ಲ ಎಣ್ಣೆ

Published On - 4:40 pm, Sun, 10 April 22