AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 6, 7, 8ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಸಿಎಂ ಜತೆ ಚರ್ಚಿಸಿ ದಿನಾಂಕ ನಿಗದಿಪಡಿಸಿದ ವಿ.ಸುನಿಲ್ ಕುಮಾರ್​

ಜನವರಿ 6, 7, 8ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಿಎಂ ಬೊಮ್ಮಾಯಿ ಜೊತೆ ಚರ್ಚೆ ನಡೆಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ದಿನಾಂಕ ಅಂತಿಮಗೊಳಿಸಿದ್ದಾರೆ.

ಜನವರಿ 6, 7, 8ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಸಿಎಂ ಜತೆ ಚರ್ಚಿಸಿ ದಿನಾಂಕ ನಿಗದಿಪಡಿಸಿದ ವಿ.ಸುನಿಲ್ ಕುಮಾರ್​
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
TV9 Web
| Edited By: |

Updated on:Oct 12, 2022 | 8:24 PM

Share

ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು (Kannada Sahitya Sammelana) ಜನವರಿ 6, 7, 8ರಂದು ನಡೆಯಲಿದೆ. ಸಿಎಂ ಬೊಮ್ಮಾಯಿ ಜೊತೆ ಚರ್ಚೆ ನಡೆಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ದಿನಾಂಕ ಅಂತಿಮಗೊಳಿಸಿದ್ದಾರೆ. ಅ. 20 ರಂದು ಹಾವೇರಿಯಲ್ಲಿ ಪೂರ್ವಸಿದ್ಧತಾ ಸಭೆ ನಡೆಸಲು ನಿರ್ಧಾರ ಮಾಡಲಾಗಿದೆ. ಸಮ್ಮೇಳನಕ್ಕೆ 8 ರಿಂದ 10 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. 30 ಸಾವಿರ ವಸತಿ ವ್ಯವಸ್ಥೆ ಮಾಡಲಾಗಿದೆ. ಪ್ರತಿ ದಿ‌ನ 2.50 ಲಕ್ಷ ಜನರಿಗೆ ಊಟೋಪಚಾರ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಮ್ಮೇಳನ ಹಿನ್ನೆಲೆ ರಾಜ್ಯಾದ್ಯಂತ 45 ದಿನ ಕನ್ನಡ ರಥ ಮೆರವಣಿಗೆ ನಡೆಯಲಿದೆ.

ಈ ಭಾರಿ 86 ಸಾಧಕರಿಗೆ ಸನ್ಮಾನಿಸಲು ನಿರ್ಧಾರ ಮಾಡಲಾಗಿದ್ದು, ಸಮ್ಮೇಳನದ ಭಾಗವಾಗಿ 20ಕ್ಕೂ ಹೆಚ್ಚು ಉಪಸಮಿತಿಗಳ ರಚನೆ ಮಾಡಲಾಗಿದೆ. ಈ ಹಿಂದೆ ನ. 11, 12, 13 ರಂದು ಸಮ್ಮೇಳನ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಸಿಎಂ ಬೊಮ್ಮಾಯಿ ಕಾರ್ಯಗಳು ಮತ್ತು ಸಮ್ಮೇಳನಕ್ಕೆ ಅಗತ್ಯ ಸಿದ್ದತೆಯಾಗದ ಕಾರಣ ಮುಂದೂಡಲಾಗಿತ್ತು.

ಅರ್ಥಪೂರ್ಣ ಗೋಷ್ಠಿ ಆಯೋಜನೆ ಸೂಚನೆ

ಅರ್ಥಪೂರ್ಣ ಗೋಷ್ಠಿ ಆಯೋಜಿಸಿ ಗೋಷ್ಠಿಗಳಲ್ಲಿ ಹೆಚ್ಚಿನ ಜನ ಭಾಗವಹಿಸುವಂತಾಗಬೇಕು ಹಾಗೂ ಅವು ಅರ್ಥಪೂರ್ಣವಾಗಿರಬೇಕು. ಸಮಿತಿಗಳಲ್ಲಿ ಸಕ್ರಿಯವಾಗಿರುವ ಸ್ಥಳೀಯ ಜನರನ್ನು ತೊಡಗಿಸಿಕೊಳ್ಳಬೇಕು. ಗೋಷ್ಠಿಗಳಲ್ಲಿಯೂ ಸ್ಥಳೀಯರಿಗೆ ಅವಕಾಶ ನೀಡಬೇಕು. ಎಲ್ಲಾ ತಾಲ್ಲೂಕುಗಳ ಸ್ವಯಂಸೇವಕರು ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:05 pm, Wed, 12 October 22

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?