AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ಪಾಸ್! ಫಲಿತಾಂಶವನ್ನು ಸಮತೋಲನದಿಂದ ತೆಗೆದುಕೊಳ್ಳಬೇಕು- ಶಿಕ್ಷಣ ಸಚಿವ ಬಿ.ಸಿ.ನಾಗೇಶ್

1 ವರ್ಷದಿಂದ ಶಾಲೆ ಇಲ್ಲದೆ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ಮಕ್ಕಳ ಭವಿಷ್ಯ ದೃಷ್ಟಿಯಿಂದ ಶಾಲೆ ಆರಂಭ ಮಾಡಿ ಅಂತ ಪೋಷಕರು, ಮಕ್ಕಳು ಎಲ್ಲಾ ಹೇಳುತ್ತಿದ್ದಾರೆ.

SSLC ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ಪಾಸ್! ಫಲಿತಾಂಶವನ್ನು ಸಮತೋಲನದಿಂದ ತೆಗೆದುಕೊಳ್ಳಬೇಕು- ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 09, 2021 | 9:26 AM

Share

ಬೆಂಗಳೂರು: ಇಂದು (ಆಗಸ್ಟ್ 9) ಮಧ್ಯಾಹ್ನ ಎಸ್ಎಸ್ಎಲ್​ಸಿ (SSLC) ಫಲಿತಾಂಶ ಪ್ರಕಟವಾಗಲಿದೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಸಂಭಾಗಣದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿ ನಡೆಸಲಿದ್ದು, ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿದ ಸಚಿವ ಬಿ.ಸಿ.ನಾಗೇಶ್ ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳು ಪರೀಕ್ಷೆ ಚೆನ್ನಾಗಿ ಬರೆದಿರುವ ನಿರೀಕ್ಷೆ ಇದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಕೂಲ್ ಆಗಿ ಸ್ವೀಕರಿಸಬೇಕು. ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ಪಾಸ್ ಆಗುತ್ತಾರೆ. ಆದರೆ ಫಲಿತಾಂಶವನ್ನು ಸಮತೋಲನದಿಂದ ತೆಗೆದುಕೊಳ್ಳಬೇಕು ಅಂತ ತಿಳಿಸಿದ್ದಾರೆ.

ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ ಮೊನ್ನೆಯೇ ಬರಬೇಕಾಗಿತ್ತು. ಕಾರಣಾಂತರಗಳಿಂದ ಇಂದು ಫಲಿತಾಂಶ ಪ್ರಕಟವಾಗುತ್ತಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡುತ್ತಿದ್ದೇವೆ. 1 ವರ್ಷದಿಂದ ಶಾಲೆ ಇಲ್ಲದೆ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ಮಕ್ಕಳ ಭವಿಷ್ಯ ದೃಷ್ಟಿಯಿಂದ ಶಾಲೆ ಆರಂಭ ಮಾಡಿ ಅಂತ ಪೋಷಕರು, ಮಕ್ಕಳು ಎಲ್ಲಾ ಹೇಳುತ್ತಿದ್ದಾರೆ. ಆರಂಭದಲ್ಲಿ ಸ್ವಲ್ಪ ರಿಸ್ಕ್ ಇದ್ದರೂ ಅದನ್ನು ಎದುರಿಸುತ್ತೇವೆ ಎಂದು ಸಚಿವರು ಟಿವಿ9 ಗೆ ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮಕೈಗೊಂಡು ಶಾಲೆ ಆರಂಭಿಸಲಾಗುವುದು. ಶಾಲೆ ಆರಂಭ ಮಾಡುವುದು ಅನಿವಾರ್ಯ. ಹಾಗಾಗಿ ಎಲ್ಲರ ಸಲಹೆಗಳನ್ನು ತೆಗೆದುಕೊಂಡು ಶಾಲೆ ಆರಂಭ ಮಾಡುತ್ತೇವೆ ಅಂತ ನೂತನ ಸಚಿವ ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

Karnataka SSLC Result: ಇಂದು ಮಧ್ಯಾಹ್ನ 3.30ಕ್ಕೆ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಗೊಂದಲ ಬೇಡ ಈ ಅಂಶಗಳನ್ನು ನೆನಪಿಡಿ

SSLC Results 2021: ಆಗಸ್ಟ್ 9, ಸೋಮವಾರ ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಹೀಗೆ ಮಾಡಿ

(All students who have written the SSLC exam will pass and result should be balanced said  Education Minister BC Nagesh)

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್