ಬೆಂಗಳೂರು: ಇಂದು (ಆಗಸ್ಟ್ 9) ಮಧ್ಯಾಹ್ನ ಎಸ್ಎಸ್ಎಲ್ಸಿ (SSLC) ಫಲಿತಾಂಶ ಪ್ರಕಟವಾಗಲಿದೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಸಂಭಾಗಣದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿ ನಡೆಸಲಿದ್ದು, ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿದ ಸಚಿವ ಬಿ.ಸಿ.ನಾಗೇಶ್ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಚೆನ್ನಾಗಿ ಬರೆದಿರುವ ನಿರೀಕ್ಷೆ ಇದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಕೂಲ್ ಆಗಿ ಸ್ವೀಕರಿಸಬೇಕು. ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ಪಾಸ್ ಆಗುತ್ತಾರೆ. ಆದರೆ ಫಲಿತಾಂಶವನ್ನು ಸಮತೋಲನದಿಂದ ತೆಗೆದುಕೊಳ್ಳಬೇಕು ಅಂತ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಮೊನ್ನೆಯೇ ಬರಬೇಕಾಗಿತ್ತು. ಕಾರಣಾಂತರಗಳಿಂದ ಇಂದು ಫಲಿತಾಂಶ ಪ್ರಕಟವಾಗುತ್ತಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡುತ್ತಿದ್ದೇವೆ. 1 ವರ್ಷದಿಂದ ಶಾಲೆ ಇಲ್ಲದೆ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ಮಕ್ಕಳ ಭವಿಷ್ಯ ದೃಷ್ಟಿಯಿಂದ ಶಾಲೆ ಆರಂಭ ಮಾಡಿ ಅಂತ ಪೋಷಕರು, ಮಕ್ಕಳು ಎಲ್ಲಾ ಹೇಳುತ್ತಿದ್ದಾರೆ. ಆರಂಭದಲ್ಲಿ ಸ್ವಲ್ಪ ರಿಸ್ಕ್ ಇದ್ದರೂ ಅದನ್ನು ಎದುರಿಸುತ್ತೇವೆ ಎಂದು ಸಚಿವರು ಟಿವಿ9 ಗೆ ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮಕೈಗೊಂಡು ಶಾಲೆ ಆರಂಭಿಸಲಾಗುವುದು. ಶಾಲೆ ಆರಂಭ ಮಾಡುವುದು ಅನಿವಾರ್ಯ. ಹಾಗಾಗಿ ಎಲ್ಲರ ಸಲಹೆಗಳನ್ನು ತೆಗೆದುಕೊಂಡು ಶಾಲೆ ಆರಂಭ ಮಾಡುತ್ತೇವೆ ಅಂತ ನೂತನ ಸಚಿವ ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ
SSLC Results 2021: ಆಗಸ್ಟ್ 9, ಸೋಮವಾರ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಹೀಗೆ ಮಾಡಿ
(All students who have written the SSLC exam will pass and result should be balanced said Education Minister BC Nagesh)