ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್; ನಾಳೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಉಪಕರಣಗಳು ಹಸ್ತಾಂತರ

ಸರಕಾರಿ ಶಾಲೆಗಳು ಹಾಗೂ ಅಂಗನವಾಡಿಗಳು ಯಾವುದೇ ಖಾಸಗಿ ಶಾಲೆಗಳಿಗೂ ಕಮ್ಮಿಯಿಲ್ಲದಂತೆ ಅತ್ಯುತ್ತಮ ಶಿಕ್ಷಣ ನೀಡುವಂತಾಗಬೇಕು. ಅಲ್ಲದೆ, ಕೊರೊನಾ ಸಂಕಷ್ಟದ ಕಾಲದಲ್ಲಿ ಆನ್​ಲೈನ್​ ಶಿಕ್ಷಣವೇ ಪ್ರಧಾನವಾಗಿದೆ.

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್; ನಾಳೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಉಪಕರಣಗಳು ಹಸ್ತಾಂತರ
ಸರಕಾರಿ ಶಾಲೆಗಳು ಸ್ಮಾರ್ಟ್ ಆಗಲಿವೆ
Edited By: sandhya thejappa

Updated on: Jan 09, 2022 | 2:17 PM

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್ ಆಗಲಿವೆ. ರಾಜ್ಯದಲ್ಲೆ ಪ್ರಪ್ರಥಮವಾಗಿ ಒಂದು ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್ ಉಪಕರಣಗಳನ್ನು ಹೊಂದುವ ಹೆಗ್ಗಳಿಕೆಗೆ ಪಾತ್ರವಾಗಲಿವೆ. ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಕೆ ಜೆ ಜಾರ್ಜ್ ಅವರ ಕಾಳಜಿಯಿಂದಾಗಿ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್ ಆಗಿವೆ. ಕೆ ಜೆ ಜಾರ್ಜ್ ಅವರು ತಮ್ಮ ಸಿಎಸ್ಆರ್ ನಿಧಿಯನ್ನು ಬಳಸಿಕೊಂಡು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ (28) ಸರಕಾರಿ ಶಾಲೆಗಳಿಗೂ ಸ್ಮಾರ್ಟ್ ಕ್ಲಾಸ್ ಉಪಕರಣಗಳನ್ನು ಒದಗಿಸಿದ್ದಾರೆ.

ನಾಳೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಉಪಕರಣಗಳ ಹಸ್ತಾಂತರ
ನನ್ನ ಕ್ಷೇತ್ರದ ಸರಕಾರಿ ಶಾಲೆಗಳು ಹಾಗೂ ಅಂಗನವಾಡಿಗಳು ಯಾವುದೇ ಖಾಸಗಿ ಶಾಲೆಗಳಿಗೂ ಕಮ್ಮಿಯಿಲ್ಲದಂತೆ ಅತ್ಯುತ್ತಮ ಶಿಕ್ಷಣ ನೀಡುವಂತಾಗಬೇಕು. ಅಲ್ಲದೆ, ಕೊರೊನಾ ಸಂಕಷ್ಟದ ಕಾಲದಲ್ಲಿ ಆನ್​ಲೈನ್​ ಶಿಕ್ಷಣವೇ ಪ್ರಧಾನವಾಗಿದೆ. ಈ ಶಿಕ್ಷಣದಿಂದ ಸರಕಾರಿ ಶಾಲೆಯ ಮಕ್ಕಳು ವಂಚಿತರಾಗಬಾರದು ಎಂದು ಕೆ ಜೆ ಜಾರ್ಜ್ ಅಭಿಪ್ರಾಯಪಟ್ಟರು.

ಹೊಸ ತಂತ್ರಜ್ಞಾನ ಬಳಸಿಕೊಂಡು ನೀಡಲಾಗುವ ಶಿಕ್ಷಣದಿಂದ ವಿದ್ಯಾರ್ಥಿಗಳು ಇನ್ನು ಚೆನ್ನಾಗಿ ವಿಷಯಗಳನ್ನು ಅರ್ಥೈಸಿಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಸರಕಾರಿ ಶಾಲೆಯ ಮಕ್ಕಳು ಸ್ಮಾರ್ಟ್ ಶಿಕ್ಷಣ ಪಡೆದುಕೊಳ್ಳಬೇಕು ಎನ್ನುವ ಉದ್ದೇಶದಿಂದ 28 ಸರಕಾರಿ ಶಾಲೆಗಳಿಗೂ ಸ್ಮಾರ್ಟ್ ಶಿಕ್ಷಣ ನೀಡುವ ಉಪಕರಣಗಳನ್ನು ನೀಡಲಾಗುತ್ತಿದೆ. ನನ್ನ ಒಡೆತನದ ಕಂಪನಿಯ ಸಿಎಸ್ಆರ್ ನಿಧಿಯನ್ನು ಇದಕ್ಕಾಗಿ ಬಳಸಿಕೊಳ್ಳಲಾಗಿದೆ ಎಂದು ಶಾಸಕರಾದ ಕೆ ಜೆ ಜಾರ್ಜ್ ತಿಳಿಸಿದರು.

ನಾಳೆ ಬಾಣಸವಾಡಿಯಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಉಪಕರಣಗಳನ್ನು ಹಸ್ತಾಂತರಿಸಲಾಗುತ್ತದೆ.

ಇದನ್ನೂ ಓದಿ

Virat Kohli: ಒಂದು ಇನ್​ಸ್ಟಾಗ್ರಾಮ್ ಪೋಸ್ಟ್​ಗೆ ವಿರಾಟ್ ಕೊಹ್ಲಿ ಪಡೆಯುವ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ

ದೇಶದಲ್ಲಿ ಏರಿಕೆಯಾಗುತ್ತಲೇ ಇರುವ ಕೊವಿಡ್​ 19 ಕೇಸ್​ಗಳು; ಇಂದು ಸಂಜೆ 4.30ಕ್ಕೆ ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

Web contact

TV9 Kannada

Read More
Follow Us