ಸ್ವಾಮೀಜಿ ಬಂಧನವಾಗಲಿ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತೆ: ಬಾಂಬ್​ ಸಿಡಿಸಿದ ಚೈತ್ರಾ ಕುಂದಾಪುರ

ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂ. ಪಡೆದು, ವಂಚನೆ ಮಾಡಿರುವ ಆರೋಪದ ಮೇರೆಗೆ ಬಂಧಿತರಾಗಿರುವ ಚೈತ್ರಾ ಕುಂದಾಪುರಳನ್ನು ಇಂದು ಬೆಳಗ್ಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತರಲಾಗಿದ್ದು, ಈ ವೇಳೆ ಆಕೆ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾಳೆ.

ಸ್ವಾಮೀಜಿ ಬಂಧನವಾಗಲಿ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತೆ: ಬಾಂಬ್​ ಸಿಡಿಸಿದ ಚೈತ್ರಾ ಕುಂದಾಪುರ
ಹಾಲಶೀ- ಚೈತ್ರಾ ಕುಂದಾಪುರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Sep 14, 2023 | 10:12 AM

ಬೆಂಗಳೂರು, (ಸೆಪ್ಟೆಂಬರ್ 14):  ಬೈಂದೂರು ವಿಧಾನಸಭೆ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್​ ಕೊಡಿಸುತ್ತೇನೆಂದು ಚೈತ್ರಾ ಕುಂದಾಪುರ(chaitra kundapura) ಉಂಡೆ ನಾಮ ಎಳೆದಿದ್ದಾಳೆ. ಗಗನ್ ಕಡೂರು, ಮೋಹನ್ ಕುಮಾರ್ ಅಲಿಯಾಸ್ ರಮೇಶ್​ ಮತ್ತು ಗ್ಯಾಂಗ್ ಜತೆ ಸೇರಿಕೊಂಡು ಉದ್ಯಮಿ ಬಳಿಯಿಂದ ಬರೋಬ್ಬರಿ 7 ಕೋಟಿ ಪೀಕಿದ್ದಾಳೆ. ಪ್ರಕರಣದ ಬಗ್ಗೆ ಇಂಚಿಂಚೂ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಸಿಸಿಬಿ ಪೊಲೀಸರು ಅಲರ್ಟ್ ಆಗಿ ಎಲ್ಲರನ್ನೂ ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಇದರ ಮಧ್ಯೆ ಚೈತ್ರಾ ಕುಂದಾಪುರ ಸ್ವಾಮೀಜಿ ಬಂಧನವಾಗಲಿ ಆಗ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ ಎಂದು ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾರೆ.

ಸಿಸಿಬಿ ಕಚೇರಿ ಮುಂದೆ ಪೊಲೀಸ್​ ವಾಹನದಿಂದ ಕೆಳಗಡೆ ಇಳಿಯುತ್ತಿದ್ದಂತೆ ಮಾಧ್ಯಮಗಳ ಕ್ಯಾಮೆರಾ ಮುಂದೆ ಮಾತನಾಡಿದ ಚೈತ್ರಾ, ಸ್ವಾಮೀಜಿ ಬಂಧನವಾಗಲಿ ಆಗ ಎಲ್ಲ ಸತ್ಯ ಹೊರಗಡೆ ಬರುತ್ತದೆ. ಇದರಲ್ಲಿ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ. ಇಂದಿರಾ ಕ್ಯಾಂಟೀನ್ ಬಿಲ್​ಗಾಗಿ ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎಂಎಲ್​ಎ ಟಿಕೆಟ್ ವಂಚನೆ: ಚೈತ್ರಾ ಕುಂದಾಪುರ ಅರೆಸ್ಟ್ ಆಗುತ್ತಿದ್ದಂತೆಯೇ ಸ್ವಾಮೀಜಿ ನಾಪತ್ತೆ  

ಚೈತ್ರಾಳ ಈ ಹೇಳಿಕೆ ಇದೀಗ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದು, ಅಭಿನವ ಹಾಲಶ್ರೀ ವಿಚಾರ ಪ್ತಸ್ತಾಪಿಸಿದ್ದೇಕೆ ಚೈತ್ರಾ ಕುಂದಾಪುರ? ಅವರು ಅರೆಸ್ಟ್ ಆಗಲಿ ಸತ್ಯ ಹೊರ ಬರುತ್ತೆ ಅಂದಿದ್ದೇಕೆ? ಸ್ವಾಮೀಜಿ‌ ನೇತೃತ್ವದಲ್ಲಿ ನಡೆದಿರುವುದಾದರೂ ಏನು? ಮೂವರ ನಡುವೆ ನಡೆದ ಮಾತುಕತೆ ಆದರು ಏನು? ಈ ಪ್ರಕರಣದಲ್ಲಿ ದೊಡ್ಡವರು ಸಹ ಶಾಮೀಲು ಆಗಿದ್ದಾರಾ? ಸ್ವಾಮೀಜಿ ಬಂಧನದ ಬಳಿಕ ಎಲ್ಲವೂ ಗೊತ್ತಾಗಲಿದೆಯಾ? ಎಂಬ ಪ್ರಶ್ನೆ ಉದ್ಭವಿಸಿವೆ.

ಹೊಸಪೇಟೆ ಜಿಲ್ಲೆಯ ಹಿರೇ ಹಡಗಲಿಯ ಹಾಲುಸ್ವಾಮಿ ಮಠದ ಅಭಿನವ ಶ್ರೀ ಹಾಲುಶ್ರೀ ಸ್ವಾಮೀಜಿ ಕೂಡ ಈ ಪ್ರಕರಣದಲ್ಲಿ ಇದ್ದು, ಎ3 ಆರೋಪಿಯಾಗಿದ್ದಾರೆ. ಆದ್ರೆ, ಚೈತ್ರಾ ಕುಂದಾಪುರ ಅರೆಸ್ಟ್ ಆಗುತ್ತಿದ್ದಂತೆಯೇ ಸ್ವಾಮೀಜಿ ನಾಪತ್ತೆಯಾಗಿದ್ದಾರೆ. ಮಠಕ್ಕೆ ಬರದೇ ಫೋನ್ ಸಂಪರ್ಕಕ್ಕೆ ಸಿಗದೇ ಗಯಾಬ್ ಆಗಿದ್ದಾರೆ. ಹೀಗಾಗಿ ಸಿಸಿಬಿ ಪೊಲೀಸರು ಸಹ ಸ್ವಾಮೀಜಿ ಬಂಧನಕ್ಕೆ ಬಲೆ ಬೀಸಿದ್ದು, ಅವರು ಸಿಕ್ಕ ಬಳಿಕ ಈ ಪ್ರಕರಣ ಮತ್ತಷ್ಟು ಸ್ಫೋಟಕ ಅಂಶಗಳು ಬಯಲಾಗಲಿವೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:58 am, Thu, 14 September 23

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್