AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ನಿಂದನೆ ಆರೋಪ: ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಸಂಪಿಗೆಹಳ್ಳಿ ಠಾಣೆ ಪೊಲೀಸ್​​

ಜಾತಿ ನಿಂದನೆ ಆರೋಪದಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹರೀಶ್ ಭೈರಪ್ಪ ಎಂಬುವವರು ದೂರಿ ಆಧಾರದ ಮೇಲೆ ಎಫ್ಐಆರ್​ ದಾಖಲಾಗಿತ್ತು.​ ನಾಳೆ ನ್ಯಾಯಾಲಯದ ಪೊಲೀಸರು ಮುಂದೆ ಹಾಜರುಪಡಿಸಲಿದ್ದಾರೆ. 

ಜಾತಿ ನಿಂದನೆ ಆರೋಪ: ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಸಂಪಿಗೆಹಳ್ಳಿ ಠಾಣೆ ಪೊಲೀಸ್​​
ಪುನೀತ್ ಕೆರೆಹಳ್ಳಿ
Follow us
Jagadisha B
| Updated By: ಗಂಗಾಧರ​ ಬ. ಸಾಬೋಜಿ

Updated on:Nov 03, 2023 | 10:22 PM

ಬೆಂಗಳೂರು, ನವೆಂಬರ್​​​​​ 03: ಜಾತಿ ನಿಂದನೆ ಆರೋಪದಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ (Puneeth Kerehalli) ಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾತಿ ನಿಂದನೆ  ಆರೋಪ ಹಿನ್ನೆಲೆ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆಯಲ್ಲಿ ಹರೀಶ್ ಭೈರಪ್ಪ ಎಂಬುವವರು ದೂರಿ ಆಧಾರದ ಮೇಲೆ ಎಫ್ಐಆರ್​ ದಾಖಲಾಗಿತ್ತು.​ ನಾಳೆ ನ್ಯಾಯಾಲಯದ ಪೊಲೀಸರು ಮುಂದೆ ಹಾಜರುಪಡಿಸಲಿದ್ದಾರೆ.

ಈ ಕುರಿತಾಗಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಟ್ವೀಟ್ ಮಾಡಿದ್ದು, ಜಾತಿ ನಿಂದನೆನಾ? ಯಾವಾಗ? ಏನಂತ? ಯಾರಿಗೆ? ಅಂದು ಉಪೇಂದ್ರ, ಇಂದು ಪುನೀತ್, ನಾಳೆ ಇನ್ಯಾರೋ? ಅಟ್ರಾಸಿಟಿ ದುರ್ಬಳಕೆ ಇದಕ್ಕೆ ತಡೆ ಯಾವಾಗ. ಇದಕ್ಕೊಂದು ಬೃಹತ್ ಹೋರಾಟ ಆಗಲೇಬೇಕು ಎಂದು ಬರೆದುಕೊಂಡಿದ್ದಾರೆ.

ಪುನೀತ್ ಕೆರೆಹಳ್ಳಿ ಟ್ವೀಟ್​

ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ಸೇರಿದಂತೆ ಇತರೆ ಆರೋಪಿಗಳನ್ನ 7 ದಿನ ಪೋಲಿಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿಯನ್ನು ಸಿಸಿಬಿ ಪೊಲೀಸರು ಇತ್ತೀಚೆಗೆ ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಸೇರಿಸಿದ್ದರು. ಬಳಿಕ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಸಲಹಾ ಸಮಿತಿಯನ್ನು ನೇಮಕ ಮಾಡಿತ್ತು. ಪುನೀತ್ ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ವರದಿಯಲ್ಲಿ ಸಲಹಾ ಸಮಿತಿ ಅಭಿಪ್ರಾಯ ವ್ಯಕ್ತಪಡಿಸಿತ್ತು. ಹಾಗಾಗಿ ಪುನೀತ್ ಕೆರೆಹಳ್ಳಿಯನ್ನು ಬಂಧನದಿಂದ ಸರ್ಕಾರ ಮುಕ್ತಗೊಳಿಸಿತ್ತು.

ಇದನ್ನೂ ಓದಿ: ಬೆಳಗಾವಿ: ಗಂಡನನ್ನೇ ಕೊಲೆ ಮಾಡಿ ಸಹಜ ಸಾವೆಂದು ನಾಟಕ; ತನಿಖೆ ಬಳಿಕ ಹೊರಬಿತ್ತು ಹತ್ಯಗೆ ಕಾರಣ?

ಜಾನುವಾರು ಸಾಗಾಟ ವೇಳೆ ಇದ್ರೀಶ್ ಪಾಷಾ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿದಂತೆ ಇತರೆ ನಾಲ್ಕು ಆರೋಪಿಗಳಿಗೆ 7 ದಿನಗಳ‌ ಕಾಲ ಪೋಲಿಸ್ ಕಸ್ಟಡಿಗೆ ನೀಡಿ ಕನಕಪುರ JMFC ನ್ಯಾಯಾಲಯ ಆದೇಶ ಹೊರಡಿಸಿತ್ತು.

ವಿವಿಧ ಠಾಣೆಯಲ್ಲಿ ಪ್ರಕರಣಗಳು ದಾಖಲು

ಪುನೀತ್ ಕೆರೆಹಳ್ಳಿ ವಿರುದ್ಧ ಡಿಜೆ ಹಳ್ಳಿ, ಬೇಗೂರು, ಕಗ್ಗಲಿಪುರ, ಹಲಸೂರು ಗೇಟ್, ಚಾಮರಾಜಪೇಟೆ, ಎಲೆಕ್ಟ್ರಾನಿಕ್ ಸಿಟಿ, ಮಳವಳ್ಳಿ ಮತ್ತು ಸಾತನೂರು ಪೊಲೀಸ್​ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಇತ್ತೀಚೆಗೆ ರಾಮನಗರ ಜಿಲ್ಲೆಯಲ್ಲಿ ಗೋ ಸಾಗಣೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಸಾಯಿಸಿದ್ದರು ಎಂಬ ಪ್ರಕರಣ ಕೂಡ ದಾಖಲಾಗಿತ್ತು. ಬಳಿಕ ಇತನನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಬಳಿಕ ಗೂಂಡಾ ಕಾಯ್ದೆಯಡಿ ಪರಪ್ಪನ ಆಗ್ರಹಾರಕ್ಕೆ ಹಾಕಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:11 pm, Fri, 3 November 23

VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ