ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ಆರೋಪ; ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ 2 ಪ್ರತ್ಯೇಕ ದೂರು

ನಿನ್ನೆಯಿಂದ ವಿಧಾನಸಭೆ ಅಧಿವೇಶನ ಶುರುವಾಗಿದೆ. ಇದರ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು ಸಲ್ಲಿಕೆ ಮಾಡಲಾಗಿದೆ. ಹೌದು, ಉದ್ದೇಶಪೂರ್ವಕವಾಗಿ ಸಿಎಂ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ದೂರು ಸಲ್ಲಿಸಿದ್ದಾರೆ.

ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ಆರೋಪ; ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ 2 ಪ್ರತ್ಯೇಕ ದೂರು
ಸಿಎಂ ಸಿದ್ದರಾಮಯ್ಯ
Follow us
ಪ್ರಸನ್ನ ಗಾಂವ್ಕರ್​
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 16, 2024 | 3:28 PM

ಬೆಂಗಳೂರು, ಜು.16: ವಿಧಾನಸಭೆ ಕಲಾಪ ನಿನ್ನೆಯಿಂದ ಶುರುವಾಗಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು ಸಲ್ಲಿಕೆ ಮಾಡಲಾಗಿದೆ. 2018-23ರ ಚುನಾವಣೆಯ ಅಫಿಡವಿಟ್​ನಲ್ಲಿ ಸಿದ್ದರಾಮಯ್ಯ ಅವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ(TJ Abraham) ಅವರು ದೂರು ಸಲ್ಲಿಸಿದ್ದಾರೆ.

ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪ

2018ರ ವಿಧಾನಸಭೆ ಚುನಾವಣೆ ವೇಳೆ ಸಿದ್ದರಾಮಯ್ಯ ಅವರು ನೀಡಿದ್ದ ಅಫಿಡವಿಟ್​ನಲ್ಲಿ ಪತ್ನಿ ಪಾರ್ವತಿ ಹೆಸರಿನಲ್ಲಿ 3 ಎಕರೆ 16 ಗುಂಟೆ ಕೃಷಿ ಜಮೀನು ಇದ್ದು, ಇದರ ಮೌಲ್ಯ 25 ಲಕ್ಷ ರೂ. ಎಂದು ನಮೂದಿಸಿದ್ದಾರೆ. ಆದರೆ, 2005ರಲ್ಲೇ ಈ ಜಮೀನು ಪರಿವರ್ತನೆ ಮಾಡಿಸಿದ್ದ ದಾಖಲೆ ನೀಡಿ ದೂರು ಸಲ್ಲಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆ ವೇಳೆ 14 ಮುಡಾ ಸೈಟ್​​ಗಳ ಮೌಲ್ಯ ಕೇವಲ 8 ಕೋಟಿ ಎಂದು ಅಫಿಡವಿಟ್​​ನಲ್ಲಿ ನಮೂದಿಸಿದ್ದಾರೆ.

ಇದನ್ನೂ ಓದಿ:ಯಾವುದೇ ಪ್ರಶ್ನೆ ಕೇಳಿ ಉತ್ತರಿಸಲು ನಾವು ರೆಡಿ, ಚರ್ಚೆ ಇವತ್ತೇ ಕೊನೆಗೊಳ್ಳಲಿ ಎಂದ ಸಿದ್ದರಾಮಯ್ಯ, ಶಿವಕುಮಾರ್

ಇನ್ನು ಮುಡಾದ 14 ಸೈಟ್​ಗಳ ಅಸಲಿ ಮಾರುಕಟ್ಟೆ ಮೌಲ್ಯ 34 ಕೋಟಿ ರೂಪಾಯಿಯಾಗಿದ್ದು, ಉದ್ದೇಶಪೂರ್ವಕವಾಗಿ ಸಿಎಂ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿಗೆ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಹಾಂ ಅವರು ಎರಡನೇ ದೂರು ಸಲ್ಲಿಸಿದ್ದಾರೆ. ಮುಡಾ ಹಗರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ತಲೆಗೆ ಮತ್ತೊಂದು ದೂರು ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು