ಜಯನಗರ ಕ್ಷೇತ್ರದಲ್ಲಿ ಅಕ್ರಮವಾಗಿ ಮತದಾರರ ಸೇರ್ಪಡೆ ಆರೋಪ; ಮುಖ್ಯ ಚುನಾವಣಾಧಿಕಾರಿಗೆ N.R.ರಮೇಶ್ ದೂರು

|

Updated on: Mar 13, 2023 | 12:54 PM

9 ತಿಂಗಳ ಅವಧಿಯಲ್ಲಿ ಸುಮಾರು 9,153ಕ್ಕೂ ಹೆಚ್ಚು ಜನರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ ಎಂದು N.R.ರಮೇಶ್ ದೂರು ಸಲ್ಲಿಸಿದ್ದಾರೆ.

ಜಯನಗರ ಕ್ಷೇತ್ರದಲ್ಲಿ ಅಕ್ರಮವಾಗಿ ಮತದಾರರ ಸೇರ್ಪಡೆ ಆರೋಪ; ಮುಖ್ಯ ಚುನಾವಣಾಧಿಕಾರಿಗೆ N.R.ರಮೇಶ್ ದೂರು
N.R.ರಮೇಶ್
Follow us on

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮವಾಗಿ ಮತದಾರರ ಸೇರ್ಪಡೆ ಮಾಡಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷ N.R.ರಮೇಶ್ ದೂರು ಸಲ್ಲಿಸಿದ್ದಾರೆ.

ಗುರಪ್ಪನಪಾಳ್ಯ ವಾರ್ಡ್, ಜಯನಗರ ಪೂರ್ವ ಮತ್ತು ಭೈರಸಂದ್ರ ವಾರ್ಡ್​ಗಳ ವ್ಯಾಪ್ತಿಯಲ್ಲಿ 9 ತಿಂಗಳ ಅವಧಿಯಲ್ಲಿ ಸುಮಾರು 9,153ಕ್ಕೂ ಹೆಚ್ಚು ಜನರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಈ ಪೈಕಿ ಶೇ. 50% ಕ್ಕೂ ಹೆಚ್ಚು ಮಂದಿ ತಮಿಳುನಾಡಿನ ಹೊಸೂರು, ಧರ್ಮಪುರಿ ಮತ್ತು ಕೃಷ್ಣಗಿರಿ ಭಾಗದವರಾಗಿದ್ದಾರೆ. ನಕಲಿ ಮತದಾರರ ಸೇರ್ಪಡೆಗೆ ಅಧಿಕಾರಿಗಳು ಹಣ ಪಡೆದಿದ್ದಾರೆ ಎಂದು ಆರೋಪಿಸಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ N.R.ರಮೇಶ್ ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿ: ನೆಲಮಂಗಲ: ವ್ಯಕ್ತಿಯಿಂದ ಸ್ಮಶಾನ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಆಕ್ರೋಶ

ತಮ್ಮ​ ಹಾಗೂ ಕುಟುಂಬದವರ ಕಾಲ್​ ಡಿಟೈಲ್ಸ್​​ ಸಂಗ್ರಹ ಆರೋಪ, ಪೊಲೀಸ್ ಮಹಾನಿರ್ದೇಶಕರಿಗೆ ಎಂಬಿ ಪಾಟೀಲ್​ ದೂರು

ಜಯಪುರ: ನನ್ನ ಹಾಗೂ ನನ್ನ ಕುಟುಂಬ, ಆಪ್ತರ ಕಾಲ್​ ಡಿಟೈಲ್ಸ್​​ ಸಂಗ್ರಹ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್​ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹಾಗೂ ಪೊಲೀಸ್ ಮಹಾನಿರೀಕ್ಷಕರಿಗೆ ದೂರು ನೀಡಿದ್ದಾರೆ. ನನ್ನ ಹಾಗೂ ನನ್ನ ಕುಟುಂಬ ಮತ್ತು ಆಪ್ತರ ಕಾಲ್ ಡಿಟೇಲ್ಸ್ ಯಾರಿಗೂ ನೀಡಬಾರದೆಂದು ದೂರು ಸಲ್ಲಿಸಿದ್ದಾರೆ.

ದೂರಿನಲ್ಲೇನಿದೆ?

ನನ್ನ ಕ್ಷೇತ್ರ ಬಬಲೇಶ್ವರದಲ್ಲಿ ಕೆಲವರು ದುರುದ್ದೇಶದಿಂದ ಬೇರೆ ಬೇರೆ ಜಿಲ್ಲೆಗಳಲ್ಲಿ ಕಾಲ್ ಹಿಸ್ಟರಿ ತೆಗೆಸುತ್ತಿದ್ದಾರೆ. ಬೆಳಗಾವಿ, ಬಾಗಲಕೋಟೆ, ಕಲಬುರಗಿ ಹಾಗೂ ಇತರೆ ಜಿಲ್ಲೆಗಳಲ್ಲಿ ಕಾಲ್ ಹಿಸ್ಟರಿ ತೆಗೆಸಲಾಗುತ್ತಿದೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ನಮ್ಮ ವಿರೋಧಿಗಳು ಈ ಕೃತ್ಯ ಮಾಡುತ್ತಿದ್ದಾರೆಂದು ಎಂಬಿ ಪಾಟೀಲ್ ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನನ್ನ ಮೊಬೈಲ್ ಕರೆ ಮಾಹಿತಿ, ನನ್ನ ಪತ್ನಿ ಆಶಾ ಪಾಟೀಲ್, ಸಹೋದರ ಹಾಗೂ ಪರಿಷತ್ ಸದಸ್ಯ ಸುನಿಲಗೌಡ ಪಾಟೀಲ್, ಪುತ್ರ ಬಸನಗೌಡ ಪಾಟೀಲ್, ಹಾಗೂ ಬಿಎಲ್​ಡಿಇ ಪ್ರಚಾರ ಅಧಿಕಾರಿ ಮಹಾಂತೇಶ ಬಿರಾದಾರ ಕಾಲ್ ಹಿಸ್ಟರಿ ತೆಗೆಸುತ್ತಿದ್ದಾರೆ. ಇದು ವೈಯಕ್ತಿಕ ಮಾಹಿತಿ ಕಸಿಯುವ ಯತ್ನವಾಗಿರುತ್ತದೆ. ಈ ಕಾರಣ ನಮ್ಮೆಲ್ಲರ ಕಾಲ್ ಹಿಸ್ಟರಿಗಳನ್ನ ಯಾರಿಗೂ ನೀಡದಂತೆ ಮನವಿ. ನಮ್ಮೆಲ್ಲರ ಕಾಲ ಹಿಸ್ಟರಿಗಳನ್ನ ಯಾರಿಗೂ ನೀಡದಂತೆ ಸಂಬಂಧಿಸಿದ ಸಿಮ್​ ಏಜೆನ್ಸಿ ಹಾಗೂ ಪೊಲೀಸ್ ಇಲಾಖೆಯವರಿಗೆ ಕಟ್ಟುನಿಟ್ಟಾಗಿ ಸೂಚಿಸಲು ದೂರಿನಲ್ಲಿ ಎಂಬಿ ಪಾಟೀಲ್ ಉಲ್ಲೇಖ ಮಾಡಿದ್ದಾರೆ. ಒಂದು ವೇಳೆ ನಮ್ಮೆಲ್ಲರ ಕಾಲ್ ಹಿಸ್ಟರಿ ನೀಡಿದರೆ ಅದಕ್ಕೆ ಎಜೆನ್ಸಿ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ಹೊಣೆಯಾಗುತ್ತದೆ ಎಂದು ಕೆಪಿಸಿಸಿ ಪ್ರಚಾರ ಸಮೀತಿ ಅಧ್ಯಕ್ಷ ಎಂಬಿ ಪಾಟೀಲ್ ದೂರು ದಾಖಲಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:54 pm, Mon, 13 March 23