ಆಸ್ತಿ ಅವ್ಯವಹಾರ ಆರೋಪ: ಮುರುಘಾ ಶ್ರೀ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಿದ ಬೆಂಗಳೂರು ಕೋರ್ಟ್
ಮುರುಘಾ ಮಠದ ಸ್ವಾಮೀಜಿ ಮತ್ತೊಂದು ಸಂಕಷ್ಟ ಎದುರಾಗಿದ್ದು, ಬೆಂಗಳೂರು ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ನಿಂದ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ.
ಬೆಂಗಳೂರು: ಪೋಕ್ಸೋ ಕೇಸ್ (Pocso Act) ನಲ್ಲಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ (Shivamurthy Swamiji) ಬಂಧನ ಮಾಡಲಾಗಿದ್ದು, ಸದ್ಯ ಅವರ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ಮುರುಘಾಶ್ರೀಗಳ ವಿರುದ್ಧ ಪಿ.ಎಸ್.ಪ್ರಕಾಶ್ ಎಂಬುವರ ಖಾಸಗಿ ದೂರು ನೀಡಿದ್ದಾರೆ. 8 ಕೋಟಿ ಮೌಲ್ಯದ ಮಠದ ಆಸ್ತಿ 49 ಲಕ್ಷ ರೂಪಾಯಿಗಳಿಗೆ ಮಾರಾಟವಾಗಿದೆ. ತಿಪ್ಪಶೆಟ್ಟಿ ಮಠಕ್ಕೆ ಸೇರಿದ ಕೆಂಗೇರಿ ಸೂಲಿಕೆರೆಯ ಜಮೀನು ಮಾರಾಟ ಮಾಡಲಾಗಿದೆ. ಮಠದ 7 ಎಕರೆ 18 ಗುಂಟೆ ಜಮೀನು ಅಕ್ರಮ ಮಾರಾಟ, ವಂಚನೆ, ವಿಶ್ವಾಸದ್ರೋಹ ಆರೋಪ ಮಾಡಿದ್ದು, ಮುರುಘಾ ಶರಣರ ವಿರುದ್ಧ 2013ರಲ್ಲಿ ಖಾಸಗಿ ದೂರು ದಾಖಲಾಗಿತ್ತು. ಸಮನ್ಸ್ ನೀಡಿದರೂ ಕೋರ್ಟ್ಗೆ ಹಾಜರಾಗದ ಹಿನ್ನೆಲೆಯಲ್ಲಿ ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಲಾಗಿತ್ತು.
ಹೀಗಾಗಿ ಮುರುಘಾ ಮಠದ ಸ್ವಾಮೀಜಿ ಮತ್ತೊಂದು ಸಂಕಷ್ಟ ಎದುರಾಗಿದ್ದು, ಬೆಂಗಳೂರು ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ನಿಂದ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ. 2 ವರ್ಷದ ಹಿಂದೆ ಮುರುಘಾಶ್ರೀಗಳ ವಿರುದ್ಧ ಪಂಚಾಕ್ಷರಯ್ಯ ಎಂಬುವರು ದೂರು ನೀಡಿದ್ದರು. ಕೋರ್ಟ್ಗೆ ಹಾಜರಾಗದೇ ಮುರುಘಾ ಶರಣರು ನಿರ್ಲಕ್ಷ್ಯ ತೋರಿದ್ದರು.
ಎದೆನೋವು ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ:
ಪೋಕ್ಸೋ ಕೇಸ್ನಲ್ಲಿ ಮುರುಘಾಶ್ರೀಗಳ ಬಂಧನ ಪ್ರಕರಣ ಸಂಬಂಧ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ ಶ್ರೀಗಳ ವೈದ್ಯಕೀಯ ತಪಾಸಣೆ ಮಾಡಲಾಗುತ್ತಿದೆ. ಜಿಲ್ಲಾ ಕಾರಾಗೃಹದಿಂದ ಜಿಲ್ಲಾಸ್ಪತ್ರೆಗೆ ಮುರುಘಾಶ್ರೀ ಶಿಫ್ಟ್ ಮಾಡಿದ್ದು, ಹಿರಿಯ ವೈದ್ಯೆ ರೂಪಾ, ಹೆರಿಗೆ ತಜ್ಞ ಡಾ ಶಿವಕುಮಾರ್ ಸೇರಿ ಮೂವರು ವೈದ್ಯರ ನೇತೃತ್ವದಲ್ಲಿ ಶ್ರೀಗಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಇನ್ನೂ ಶ್ರೀಗಳ ಅಡ್ವೋಕೆಟ್ ಉಮೇಶ್ ಚಿತ್ರದುರ್ಗ ಡಿಸ್ಟ್ರಿಕ್ಟ್ ಸರ್ಜನ್ ಡಾ. ಬಸವರಾಜ್ರಿಂದ ಮಾಹಿತಿ ಪಡೆಯುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆ ಶಿಫ್ಟ್ ಮಾಡಿ ಎಂದು ಡಿಸ್ಟ್ರಿಕ್ಟ್ ಸರ್ಜನ್ ಡಾ. ಬಸವರಾಜ್ ಹೇಳಿದ್ದಾರೆ ಎಂದು ಅಡ್ವೋಕೆಟ್ ಉಮೇಶ್ ಮಾಹಿತಿ ನೀಡಿದರು. ಸ್ವಾಮೀಜಿಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಲೇಡಿ ವಾರ್ಡನ್ ಬಂಧನ:
ಪೋಕ್ಸೋ ಪ್ರಕರಣ ದಲ್ಲಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂಧನ ಸಂಬಂಧ A- 2 ಆಗಿರುವ ಲೇಡಿ ವಾರ್ಡನ್ನ್ನು ಚಿತ್ರದುರ್ಗ ಪೊಲೀಸರಿಂದ ಬಂಧನ ಮಾಡಲಾಗಿದೆ. ನಿನ್ನೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು, ಇಂದು ಬಂಧಿಸಿ ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಿದ್ದಾರೆ. ಮುರುಘಾಶ್ರೀ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧನವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.