ಬ್ಯಾಟರಾಯನಪುರ ಠಾಣೆಯಲ್ಲಿ ಹಣ ದುರ್ಬಳಕೆ ಆರೋಪ: ಇನ್ಸ್‌ಪೆಕ್ಟರ್ ವಿರುದ್ಧ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು
ಕರ್ತವ್ಯದ ವೇಳೆ ಕಳ್ಳತನ ಪ್ರಕರಣವೊಂದರಲ್ಲಿ 72 ಲಕ್ಷ ರೂಪಾಯಿ ಜಪ್ತಿ ಮಾಡಿದ್ದ ಪೊಲೀಸ್ ಶಂಕರ್ ನಾಯ್ಕ್, ಈ ಹಣವನ್ನು ಸರ್ಕಾರದ ಖಜಾನೆ ಅಥವಾ ಠಾಣೆಯ ಸುಪರ್ದಿಗೆ ಕೊಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ದೂರು ದಾಖಲಾಗಿ, ಈ ಕೇಸ್ನ ತನಿಖೆಗೆ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದೀಗ ಪ್ರಕರಣ ರದ್ದು ಪಡಿಸಲು ನಿರಾಕರಿಸಿದೆ. ಈ ಕುರಿತು ಒಂದು ವರದಿ ಇಲ್ಲಿದೆ.
ಬೆಂಗಳೂರು, ಆ.09: ಬ್ಯಾಟರಾಯನಪುರದ ಠಾಣೆ(Byatarayanapura police station)ಯಲ್ಲಿ ಪ್ರಕರಣವೊಂದರ ಹಣ ದುರ್ಬಳಕೆ ಆರೋಪದ ಹಿನ್ನಲೆ ಇನ್ಸ್‌ಪೆಕ್ಟರ್ ಶಂಕರ್ ನಾಯ್ಕ್ ವಿರುದ್ದದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ (High Court)ತೆರವುಗೊಳಿಸಿದೆ. ಇನ್ಸ್‌ಪೆಕ್ಟರ್ ಶಂಕರ್ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ಪ್ರಕರಣ ರದ್ದು ಪಡಿಸಲು ನಿರಾಕರಿಸಿದೆ.
ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ
ಕರ್ತವ್ಯದ ವೇಳೆ ಕಳ್ಳತನ ಪ್ರಕರಣವೊಂದರಲ್ಲಿ 72 ಲಕ್ಷ ರೂಪಾಯಿ ಜಪ್ತಿ ಮಾಡಿದ್ದ ಪೊಲೀಸ್ ಶಂಕರ್ ನಾಯ್ಕ್, ಈ ಹಣವನ್ನು ಸರ್ಕಾರದ ಖಜಾನೆ ಅಥವಾ ಠಾಣೆಯ ಸುಪರ್ದಿಗೆ ಕೊಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಶಂಕರ್ ಹಾಗೂ ಮಧ್ಯವರ್ತಿ ಲೋಕನಾಥ್ ವಿರುದ್ಧ ಎಸಿಪಿ ಭರತ್ ರೆಡ್ಡಿ ನೀಡಿದ್ದ ದೂರು ಆಧರಿಸಿ 2023ರ ನವೆಂಬರ್ನಲ್ಲಿ ಎಫ್ಐಆರ್ ದಾಖಲಾಗಿತ್ತು.
ಇದನ್ನೂ ಓದಿ:ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಅವಘಡ; ಕಂಪ್ಯೂಟರ್, ಕೆಲ ದಾಖಲೆಗಳು ಸುಟ್ಟು ಭಸ್ಮ
ಪ್ರಕರಣದ ತನಿಖೆಗೆ ತಡೆ ನೀಡಿದ್ದ ಹೈಕೋರ್ಟ್
ಎಫ್ಐಆರ್ ದಾಖಲಾಗುತ್ತಿದ್ದಂತೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿಸಲಾಗಿತ್ತು. ಬಳಿಕ ಪ್ರಕರಣ ರದ್ದು ಕೋರಿ ಇನ್ಸ್ಪೆಕ್ಟ್ರ್ ಶಂಕರ್ ನಾಯ್ಕ್ ಹೈಕೋರ್ಟ್ ಮೆಟ್ಟಲೇರಿದ್ದರು. ನಂತರ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿತ್ತು. ಆದರೆ, ತಡೆಯಾಜ್ಞೆ ತೆರವುಗೊಳಿಸುವಂತೆ ಸಿಸಿಬಿ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಇದೀಗ ಹೈಕೋರ್ಟ್ ತೆರವುಗೊಳಿಸಿದೆ.
ಇನ್ನು ಉದ್ಯಮಿ ಹರೀಶ್ ಎಂಬುವವರ ಕಾರು ಚಾಲಕ ಸಂತೋಷ್ ಎಂಬಾತ 2022 ರಲ್ಲಿ ಹೊಸಕೋಟೆಯಲ್ಲಿ 72 ಲಕ್ಷ ರೂ.ಗಳನ್ನು ಕದ್ದಿದ್ದರು. ಇದನ್ನು ಲೋಕನಾಥ್ ಸಿಂಗ್ ಅವರು ಬ್ಯಾಟರಾಯನಪುರ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಂಕರ್ ಅವರ ಗಮನಕ್ಕೆ ತಂದಿದ್ದರು. ಬಳಿಕ ನಾಯ್ಕ್ ಅವರು ಸಂತೋಷ್‌ನಿಂದ 72 ಲಕ್ಷ ರೂ.ಗಳನ್ನು ವಸೂಲಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಅದನ್ನು ಪೊಲೀಸ್ ಠಾಣೆಯಲ್ಲಿ ಇಡದೆ, ಸರ್ಕಾರದ ಖಜಾನೆಗೂ ಇಡದೆ ವೈಯಕ್ತಿಕ ಬಳಕೆಗೆ ಉಪಯೋಗಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಈ ಪ್ರಕರಣದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:15 pm, Fri, 9 August 24