ಫೋಟೋ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್​, ಫೇಸ್​ಬುಕ್ ಹ್ಯಾಂಡ್ಲರ್ ವಿರುದ್ಧ ಬಿಜೆಪಿ ದೂರು

ಬಿಜೆಪಿ ನಾಯಕರ ಫೋಟೋ ದುರ್ಬಳಕೆ ಆರೋಪ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ  ಶಿವಕುಮಾರ್ ಮತ್ತು ಫೇಸ್ ಬುಕ್ ಹ್ಯಾಂಡ್ಲರ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ ಪೋಲೀಸ್ ಠಾಣೆಗೆ ಬಿಜೆಪಿ ಕಾನೂನು‌ ಪ್ರಕೋಷ್ಠದಿಂದ ದೂರು ನೀಡಲಾಗಿದೆ. ಕಾಂಗ್ರೆಸ್ ಪಕ್ಷದ ಫೇಸ್​ಬುಕ್ ಪೇಜ್​ನಲ್ಲಿ ಅವಹೇಳನಕಾರಿ ಸುಳ್ಳು ಸುದ್ದಿ ಪ್ರಕಟಿಸಿರುವ ಆರೋಪದಡಿ ಕಂಪ್ಲೇಂಟ್ ನೀಡಲಾಗಿದೆ.

ಫೋಟೋ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್​, ಫೇಸ್​ಬುಕ್ ಹ್ಯಾಂಡ್ಲರ್ ವಿರುದ್ಧ ಬಿಜೆಪಿ ದೂರು
ಹೈಗ್ರೌಂಡ್ಸ್​​ ಪೊಲೀಸ್ ಠಾಣೆಗೆ ದೂರು
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:Jan 06, 2024 | 6:08 PM

ಬೆಂಗಳೂರು, ಜನವರಿ 06: ಬಿಜೆಪಿ ನಾಯಕರ ಫೋಟೋ ದುರ್ಬಳಕೆ ಆರೋಪ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ  ಶಿವಕುಮಾರ್ (DK Shivakumar) ಮತ್ತು ಫೇಸ್ ಬುಕ್ ಹ್ಯಾಂಡ್ಲರ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ ಪೋಲೀಸ್ ಠಾಣೆಗೆ ಬಿಜೆಪಿ ಕಾನೂನು‌ ಪ್ರಕೋಷ್ಠದಿಂದ ದೂರು ನೀಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಚಿವರಾದ ಕೆಎಸ್. ಈಶ್ವರಪ್ಪ, ಸಿಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಹಾಗೂ ಸಂಸದ ಪ್ರತಾಪ್ ಸಿಂಹ ಫೋಟೋಗಳನ್ನು ದುರ್ಬಳಕೆ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಫೇಸ್​ಬುಕ್ ಪೇಜ್​ನಲ್ಲಿ ಅವಹೇಳನಕಾರಿ ಸುಳ್ಳು ಸುದ್ದಿ ಪ್ರಕಟಿಸಿರುವ ಆರೋಪದಡಿ ಕಂಪ್ಲೇಂಟ್ ನೀಡಲಾಗಿದೆ.

ಇದನ್ನೂ ಓದಿ: ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು ಮಂಜೂರು ಮಾಡಿದ ದೇವನಹಳ್ಳಿ ಕೋರ್ಟ್

ಬಿಜೆಪಿ ನಾಯಕರ ಫೋಟೋಗಳನ್ನು ಎಡಿಟ್​ ಮಾಡಿ ದುರ್ಬಳಕೆ ಮಾಡಲಾಗುತ್ತಿದೆ. ಆ ಮೂಲಕ  ತಪ್ಪುದಾರಿಗೆಳೆಯುವ, ಫ್ಯಾಬ್ರಿಕೇಟೆಡ್ ಪೋಸ್ಟ್‌ಶೇವ್ ಪೋಸ್ಟ್ ಮಾಡಲಾಗುತ್ತಿದೆ. ಕರ್ನಾಟಕದ ವಿವಿಧ ವರ್ಗದ ನಾಗರಿಕರ ನಡುವೆ ದ್ವೇಷವನ್ನು ಉತ್ತೇಜಿಸುವ ಮತ್ತು ಮತ್ತಷ್ಟು ಕೆಡಿಸುವ ಉದ್ದೇಶದಿಂದ ಮಾಡಿದ, ಸುಳ್ಳು ಮತ್ತು ಕಪೋಲಕಲ್ಪಿತ ಹೇಳಿಕೆಯ ಫಲಕಗಳನ್ನು ಹಾಕಲಾಗುತ್ತಿದೆ. ಜೊತೆಗೆ ಬಿಜೆಪಿ ಹಿರಿಯ ನಾಯಕರ ಇಮೇಜ್ ಅನ್ನು ಹಾನಿ ಮಾಡಲಾಗುತ್ತಿದೆ.

ಇದನ್ನೂ ಓದಿ: ರಾಮ ಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಜೈಲಿನಿಂದ ಬಿಡುಗಡೆ

ಈ ಪೋಸ್ಟ್‌ಗಳು ಪ್ರಚೋದನಕಾರಿ ಮತ್ತು ಶಾಂತಿ ಕದಡುವ ಉದ್ದೇಶದಿಂದ ಮಾಡಲಾಗುತ್ತಿದೆ. ಭಾರತೀಯ ಜನತಾ ಪಕ್ಷದ ವಿರುದ್ಧ ಕನ್ನಡಿಗರನ್ನು ದ್ವೇಷಿಸಲು ಪ್ರೇರೇಪಿಸುವ ಉದ್ದೇಶದಿಂದ ಮಾಡಲಾಗಿದೆ. ಈ ಪೋಸ್ಟ್‌ಗಳು ಪ್ರಚೋದನಕಾರಿಯಾಗಿದ್ದು, ಇದು ಕೆಲವು ವರ್ಗದ ಜನರನ್ನು ಪ್ರಚೋದಿಸುತ್ತದೆ ಎಂದು ಬಿಜೆಪಿ ತನ್ನ ದೂರಿನಲ್ಲಿ ಉಲ್ಲೇಖಿಸಿದೆ.

ಕಾಂಗ್ರೆಸ್ ಮತ್ತು ಕರ್ನಾಟಕ ಫೇಸ್ ಬುಕ್ ಹ್ಯಾಂಡಲ್​ರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ. ಭಾರತೀಯ ದಂಡ ಸಂಹಿತೆಯ 504 ಮತ್ತು 505(b) ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಕರ್ನಾಟಕದ ಫೇಸ್ ಬುಕ್ ಖಾತೆಯಲ್ಲಿ ಅಧಿಕೃತ ಪುಟವನ್ನು ನಿರ್ಬಂಧಿಸಲು ಮನವಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 5:56 pm, Sat, 6 January 24

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ