AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವುದಾಗಿ ನಂಬಿಸಿ ವಂಚನೆ ಆರೋಪ; ಹಾಕಿ ತಂಡದ ಡಿಫೆಂಡರ್ ವರುಣ್ ಕುಮಾರ್ ವಿರುದ್ಧ ದೂರು ದಾಖಲು

2021ನೇ ಸಾಲಿನ ಅರ್ಜುನ ಪ್ರಶಸ್ತಿಗೆ ಭಾಜನರಾಗಿರುವ, ಭಾರತೀಯ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಕುಮಾರ್ ವಿರುದ್ಧ ಯುವತಿ ಗಂಭೀರ ಆರೋಪ ಮಾಡಿದ್ದು ಪೋಕ್ಸೋ ಪ್ರಕರಣ ದಾಖಲಾಗಿದೆ. 2019ರಲ್ಲಿ ಯುವತಿ 17ನೇ ವಯಸ್ಸಿನಲ್ಲಿ ಇರುವಾಗಲೇ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದಾರೆ ಎಂದು ಯುವತಿ ಆರೋಪ ಮಾಡಿದ್ದಾಳೆ.

ಮದುವೆಯಾಗುವುದಾಗಿ ನಂಬಿಸಿ ವಂಚನೆ ಆರೋಪ; ಹಾಕಿ ತಂಡದ ಡಿಫೆಂಡರ್ ವರುಣ್ ಕುಮಾರ್ ವಿರುದ್ಧ ದೂರು ದಾಖಲು
ವರುಣ್ ಕುಮಾರ್
ರಾಚಪ್ಪಾಜಿ ನಾಯ್ಕ್
| Edited By: ಆಯೇಷಾ ಬಾನು|

Updated on:Feb 06, 2024 | 10:10 AM

Share

ಬೆಂಗಳೂರು, ಫೆ.06: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ ಹಿನ್ನೆಲೆ ಭಾರತೀಯ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಕುಮಾರ್ (Varun Kumar) ಅವರ ಮೇಲೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ (Jnanabharathi Police Station) ಎಫ್ಐಆರ್ ದಾಖಲಾಗಿದೆ. 2021ನೇ ಸಾಲಿನ ಅರ್ಜುನ ಪ್ರಶಸ್ತಿಗೆ ಭಾಜನರಾಗಿರುವ ವರುಣ್ ಕುಮಾರ್ ವಿರುದ್ಧ ಯುವತಿ ಗಂಭೀರ ಆರೋಪ ಮಾಡಿದ್ದು ಪೋಕ್ಸೋ (Pocso) ಪ್ರಕರಣ ದಾಖಲಾಗಿದೆ. 2019ರಲ್ಲಿ ಯುವತಿ 17ನೇ ವಯಸ್ಸಿನಲ್ಲಿ ಇರುವಾಗಲೇ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವುದಾಗಿ ಯುವತಿ ಆರೋಪ ಮಾಡಿದ್ದಾಳೆ.

ದೂರುದಾರ ಯುವತಿ 2016-17ನೇ ಸಾಲಿನಲ್ಲಿ ನ್ಯಾಷನಲ್ ಸೆಂಟರ್ ಆಗಿ ಎಕ್ಸಿಲೆನ್ಸ್​ನಿಂದ ವಾಲಿಬಾಲ್ ಕ್ರೀಡೆಯಲ್ಲಿ ಆಯ್ಕೆಯಾಗಿ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ದಕ್ಷಿಣ ವಿಭಾಗದ ತರಬೇತಿ ಪಡೆಯುತ್ತಿದ್ದರು. ಆ ಸಂದರ್ಭದಲ್ಲಿ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಸ್ಟೆಲ್​ನಲ್ಲಿ ತಂಗಿದ್ದಳು. ಅಪ್ರಾಪ್ತೆಯಾಗಿದ್ದ ಯುವತಿಗೆ ಸಾಮಾಜಿಕ ಜಾಲತಾಣದ ಮೂಲಕ ಹಾಕಿ ಆಟಗಾರ ರುಣ್ ಕುಮಾರ್ ಪರಿಚಯವಾಗಿತ್ತು. 17 ವರ್ಷದವಳಾಗಿದ್ದ ದೂರುದಾರಳನ್ನ ಪ್ರೀತಿಸುವುದಾಗಿ ನಂಬಿಸಿದ್ದ ಹಾಕಿ ಆಟಗಾರ, ‘ನಿನ್ನ ಮನೆಯವರನ್ನ ಒಪ್ಪಿಸಿ ಮದುವೆಯಾಗುತ್ತೇನೆ. ಅಲ್ಲಿಯವರೆಗೂ ಪ್ರೇಮಿಗಳಾಗಿ ಇರೋಣ’ ಎಂದು ನಂಬಿಸಿದ್ದರು. ಆಕೆ 17 ವರ್ಷದವಳಿರುವಾಗಲೇ ಪ್ರೀತಿ, ಪ್ರೇಮ ಎಂದು ನಂಬಿಸಿ ಮದುವೆಯಾಗುವುದಾಗಿ ಮಾತು ಕೊಟ್ಟು ದೈಹಿಕ ಸಂಪರ್ಕ ಮಾಡಿದ್ದ. ಆದರೆ ಈಗ ಮದುವೆಯಾಗದೇ ವಂಚನೆ ಮಾಡಿದ್ದಾನೆ ಎಂದು ಯುವತಿ ದೂರು ದಾಖಲಿಸಿದ್ದಾಳೆ.

ಇದನ್ನೂ ಓದಿ: ರಾಷ್ಟ್ರ ರಾಜಕಾರಣಕ್ಕೆ ಜಯದೇವ ಮಾಜಿ ನಿರ್ದೇಶಕ ಡಾ ಮಂಜುನಾಥ್ ಕರೆತರಲು ಜೆಡಿಎಸ್ ಕಸರತ್ತು

2019ರಲ್ಲಿ ನೈಟ್ ಡಿನ್ನರ್ ನೆಪದಲ್ಲಿ ಜಯನಗರಕ್ಕೆ ಕರೆದೊಯ್ದು ಬಲವಂತವಾಗಿ‌ ದೈಹಿಕ ಸಂಪರ್ಕ ಬೆಳಸಿದ್ದ. ಇದಾದ ಬಳಿಕವೂ ನಿರಂತರ ಐದು ವರ್ಷಗಳ ಕಾಲ ಮದುವೆಯಾಗುವುದಾಗಿ ನಂಬಿಸಿ ಆಗಾಗ ದೈಹಿಕ ಸಂಪರ್ಕ ಮಾಡಿದ್ದ. ಒಂದು ವರ್ಷದ ಹಿಂದೆ ನನ್ನ ತಂದೆ ಮೃತಪಟ್ಟಾಗ ಮನೆ ಬಳಿ ಬಂದು ಸಾಂತ್ವನ ಹೇಳಿ ಹೋಗಿದ್ದ. ಆದರೆ ಈಗ ಸಂಪರ್ಕಕ್ಕೆ ಸಿಗದೇ ವಂಚಿಸುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಯಾರು ಈ ವರುಣ್ ಕುಮಾರ್?

ಭಾರತ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಕುಮಾರ್ ಮೂಲತಃ ಹಿಮಾಚಲ ಪ್ರದೇಶದವನು. ಹಾಕಿಗಾಗಿಯೇ ಪಂಜಾಬ್ ಗೆ ಶಿಫ್ಟ್ ಆಗಿದ್ದರು. 2017ರಲ್ಲಿ‌ ಭಾರತ ತಂಡದ ಪರ ಪಾದಾರ್ಪಣೆ ಮಾಡಿದ್ದರು. 2022ರ ಬರ್ಮಿಂಗ್ ಹ್ಯಾಂ – ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. 2022 ರ ಏಷ್ಯನ್ ಗೇಮ್ಸ್‌ ನಲ್ಲಿ ಚಿನ್ನ ಗೆದ್ದ ತಂಡದಲ್ಲಿದ್ದರು. 2020 ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತ ತಂಡದ ಸದಸ್ಯ. ಕಂಚಿನ ಸಾಧನೆ ಬಳಿಕ ವರುಣ್ ಕುಮಾರ್​ಗೆ ಹಿಮಾಚಲ ಪ್ರದೇಶ ಸರ್ಕಾರ 1 ಕೋಟಿ ಬಹುಮಾನ ಘೋಷಿಸಿತ್ತು. 2021ನೇ ಸಾಲಿನ ಅರ್ಜುನ ಪ್ರಶಸ್ತಿಗೂ ವರುಣ್ ಕುಮಾರ್ ಭಾಜನರಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:03 am, Tue, 6 February 24

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ