ಪಾಕಿಸ್ತಾನ ಪರ ಘೋಷಣೆ ಆರೋಪ, ರಾತ್ರಿ ಬಿಜೆಪಿ ಭಾರಿ ಪ್ರತಿಭಟನೆ: ಕಮಲ ನಾಯಕರು ಪೊಲೀಸ್ ವಶಕ್ಕೆ, ಸಿಎಆರ್​ ಮೈದಾನದಲ್ಲಿ ಹೈಡ್ರಾಮಾ!

| Updated By: Ganapathi Sharma

Updated on: Feb 28, 2024 | 6:36 AM

ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಮಾಡಲಾಗಿದೆ ಎಂಬ ಆರೋಪ ರಾಜಕೀಯ ತಿರುವು ಪಡೆದುಕೊಂಡಿದೆ. ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆರೋಪಿಸಿ ಬಿಜೆಪಿ ನಾಯಕರು ಮಂಗಳವಾರ ರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಗೆ ನುಗ್ಗಲು ಯತ್ನಿಸಿದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಾಕಿಸ್ತಾನ ಪರ ಘೋಷಣೆ ಆರೋಪ, ರಾತ್ರಿ ಬಿಜೆಪಿ ಭಾರಿ ಪ್ರತಿಭಟನೆ: ಕಮಲ ನಾಯಕರು ಪೊಲೀಸ್ ವಶಕ್ಕೆ, ಸಿಎಆರ್​ ಮೈದಾನದಲ್ಲಿ ಹೈಡ್ರಾಮಾ!
ಪಾಕಿಸ್ತಾನ ಪರ ಘೋಷಣೆ ಆರೋಪ, ರಾತ್ರಿ ಬಿಜೆಪಿಯಿಂದ ಭಾರಿ ಪ್ರತಿಭಟನೆ
Follow us on

ಬೆಂಗಳೂರು, ಫೆಬ್ರವರಿ 28: ರಾಜ್ಯಸಭೆ ಚುನಾವಣೆ (Rajya Sabha Election) ಗೆದ್ದ ನಾಸಿರ್ ಹುಸೇನ್ ಬೆಂಬಲಿಗರೊಬ್ಬರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ (BJP) ಮಂಗಳವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ವಿಧಾನಸೌಧದ ಲಾಂಜ್​ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ (Bengaluru) ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಂದ್ರ ವಿಭಾಗದ ಡಿಸಿಪಿ ಶೇಖರ್ ನೇತೃತ್ವದಲ್ಲಿ ವಶಕ್ಕೆ ಪಡೆದ ಕಾರ್ಯಕರ್ತರನ್ನು ಪೊಲೀಸ್ ವಾಹನದಲ್ಲಿ ತುಂಬಿಸಿ ಕರೆದೊಯ್ದಿದ್ದಾರೆ.

ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದವರನ್ನು ಮೈಸೂರು ರಸ್ತೆ ಸಿಎಆರ್ ಮೈದಾನದಲ್ಲಿ ಕೂಡಿ ಇಡಲಾಗಿತ್ತು. ಇದರಿಂದ ರೊಚ್ಚಿಗೆದ್ದ ಬಿಜೆಪಿ ನಾಯಕರು ಸಿಎಆರ್ ಮೈದಾನದಲ್ಲೇ ಕೂತು ಪ್ರತಿಭಟನೆ ಮುಂದುವರಿಸಿದರು. ನಮ್ಮನ್ನು ಕತ್ತಲೆಯಲ್ಲಿ ತಂದು ಕೂರಿಸಿದ್ದಾರೆಂದು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು

ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಆರೋಪ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು ಮಾಡಲಾಗಿದೆ. ಕರ್ತವ್ಯನಿರತ ಎಎಸ್​ಐ ಶಿವಕುಮಾರ್ ದೂರಿನ ಅನ್ವಯ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 505(1)(B), 153B ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಬಿಜೆಪಿ ಇಂದು (ಬುಧವಾರ) ಸದನ ಆರಂಭಕ್ಕೂ ಮುನ್ನ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲು ಯೋಜನೆ ರೂಪಿಸಿದೆ.

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಾಗೂ ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆ ಹಾಕುವಂತೆ ಬಿಜೆಪಿ ಕರೆ ನೀಡಿದೆ. ಪಾಕ್ ಪರ ಘೋಷಣೆ ಆರೋಪದ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪಾಕಿಸ್ತಾನ ಬೆಂಬಲಿತ ಘೋಷಣೆ ಕೂಗಿದವರು ಉಗ್ರರೇ ಇರಬೇಕು ಎಂದು ಪೋಸ್ಟ್ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ಮಾಜಿ ಸಚಿವ ಸುನೀಲ್ ಕುಮಾರ್, ಅತ್ಯಂತ ಆಘಾತಕಾರಿ ನಡವಳಿಕೆ ವಿಧಾನಸೌಧದಲ್ಲಿ ನಡೆದಿದೆ. ಇದರ ನೈತಿಕ ಹೊಣೆಯನ್ನು ಸಿಎಂ ಮತ್ತು ನಾಸಿರ್ ಹುಸೇನ್ ಹೊರಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವಿಧಾನಸೌಧದಲ್ಲಿ ರಾಜ್ಯಸಭಾ ಗೆಲುವಿನ ಸಂಭ್ರಮದ ವೇಳೆ ಮೊಳಗಿದ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ!

ಕೋಲಾರದಲ್ಲಿಯೂ ಪ್ರತಿಭಟನೆ

ವಿಧಾನಸೌಧದ ಲಾಂಜ್​ನಲ್ಲಿ ಪಾಕ್ ಪರ ಘೋಷಣೆ ಆರೋಪ ಖಂಡಿಸಿ ಕೋಲಾರದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ, ನಡೆಸಿದ ಶ್ರೀರಾಮಸೇನೆ ಕಾರ್ಯರ್ಕರು, ಕಾಂಗ್ರೆಸ್ ಸರ್ಕಾರ, ನಾಸೀರ್ ಹುಸೇನ್ ವಿರುದ್ದ ಘೋಷಣೆ ಕೂಗಿದ್ರು. ಅಲ್ಲದೆ ನಾಸಿರ್ ಹುಸೇನ್ ಬಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ರು. ಚಿಕ್ಕಮಗಳೂರಿನಲ್ಲೂ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯ್ತು.

ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ, ಅಪರಿಚಿತ ವ್ಯಕ್ತಿ ವಿರುದ್ಧ ಎಫ್​ಐಆರ್ ದಾಖಲು

ಬಿಜೆಪಿ ವಿರುದ್ಧ ದೂರು

ಮತ್ತೊಂದೆಡೆ, ಕೆಪಿಸಿಸಿ ಕಚೇರಿಗೆ ಬಿಜೆಪಿ ಮುತ್ತಿಗೆ ಹಾಕಿದ್ದಕ್ಕೆ ದೂರು ದಾಖಲಿಸಲಾಗಿದೆ. ಕಾಂಗ್ರೆಸ್ ಮುಖಂಡ ಮನೋಹರ್ ದೂರಿನನ್ವಯ ಹೈಗ್ರೌಂಡ್ಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 am, Wed, 28 February 24