ಭ್ರಷ್ಟಾಚಾರ ಆರೋಪ: ಬಿ.ಎಸ್ ಯಡಿಯೂರಪ್ಪ, ವಿಜಯೇಂದ್ರ ಸೇರಿದಂತೆ ಪ್ರತಿವಾದಿಗಳಿಗೆ ಹೈಕೋರ್ಟ್ ನೋಟಿಸ್

ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ,‌ ಶಶಿಧರ ಮರಡಿ, ಸಂಜಯ್​​ಶ್ರೀ, ಚಂದ್ರಕಾಂತ ರಾಮಲಿಂಗಮ್, ಡಾ.ಜಿ.ಸಿ.ಪ್ರಕಾಶ್, ಎಸ್​​.ಟಿ.ಸೋಮಶೇಖರ್, ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಭ್ರಷ್ಟಾಚಾರ ಆರೋಪ: ಬಿ.ಎಸ್ ಯಡಿಯೂರಪ್ಪ, ವಿಜಯೇಂದ್ರ ಸೇರಿದಂತೆ ಪ್ರತಿವಾದಿಗಳಿಗೆ ಹೈಕೋರ್ಟ್ ನೋಟಿಸ್
ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ
Follow us
TV9 Web
| Updated By: Skanda

Updated on: Aug 03, 2021 | 1:16 PM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ವಿಚಾರದಲ್ಲಿ ಪ್ರಾಸಿಕ್ಯೂಷನ್​ಗೆ ಪೂರ್ವಾನುಮತಿ ಸಿಗದೇ ಇರುವುದರಿಂದ ಕೇಸ್ ವಜಾ ಆಗಿತ್ತು. ಆದರೆ, ಇದೀಗ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಯಾಗಿದ್ದು, ಯಡಿಯೂರಪ್ಪ ಸೇರಿದಂತೆ ಪ್ರತಿವಾದಿಗಳಿಗೆ ಹೈಕೋರ್ಟ್ ನೋಟಿಸ್ (Notice) ನೀಡಿದೆ. ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ,‌ ಶಶಿಧರ ಮರಡಿ, ಸಂಜಯ್​​ಶ್ರೀ, ಚಂದ್ರಕಾಂತ ರಾಮಲಿಂಗಮ್, ಡಾ.ಜಿ.ಸಿ.ಪ್ರಕಾಶ್, ಎಸ್​​.ಟಿ.ಸೋಮಶೇಖರ್, ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿಗೆ ನೋಟಿಸ್ ಜಾರಿ ಮಾಡಲಾಗಿದೆ. ದೂರುದಾರ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠದಿಂದ ನೋಟಿಸ್ ಜಾರಿ ಮಾಡಲಾಗಿದೆ.

ಯಡಿಯೂರಪ್ಪ ಈಗ ಮುಖ್ಯಮಂತ್ರಿ ಅಲ್ಲದೇ ಇರುವುದರಿಂದ ಪೂರ್ವಾನುಮತಿ ಅಗತ್ಯವಿಲ್ಲವೆಂದು ವಕೀಲರು ವಾದ ಮಂಡಿಸಿದ್ದಾರೆ. ಟಿ.ಜೆ.ಅಬ್ರಹಾಂ ಈ ವಿಚಾರವಾಗಿ ಅರ್ಜಿ ಸಲ್ಲಿಸಿದ್ದು, ಅವರ ಪರವಾದ ವಕೀಲರು ಹೀಗೆ ವಾದ ಮಂಡಿಸಿದ್ದಾರೆ. ಪೂರ್ವಾನುಮತಿ ಬಗ್ಗೆ ವಾದ ಆಲಿಸಬೇಕಾದ ಅಗತ್ಯ ಇರುವುದರಿಂದ ಹೈಕೋರ್ಟ್ ಏಕಸದಸ್ಯ ಪೀಠದಿಂದ ಯಡಿಯೂರಪ್ಪ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ನೀಡಲಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮತ್ತು ಅವರ ಕುಟುಂಬದವರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ಅಥವಾ ಎಸ್ಐಟಿ ತನಿಖೆಗೆ ವಹಿಸಬೇಕೆಂದು ಕೋರಿ ಪಿಐಎಲ್ ಸಲ್ಲಿಸುವುದಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್​ನಲ್ಲಿ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು.  ಆದರೆ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್​, ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆ ಈಗಿನದನ್ನು ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ತಿರಸ್ಕರಿಸಿತ್ತು.

ಅದೇ ವೇಳೆ, ಅರ್ಜಿಯನ್ನು ಮಾರ್ಪಡಿಸಿ ಸಂಬಂಧಿಸಿದ ಪೀಠಕ್ಕೆ ವರ್ಗಾಯಿಸಲು ರಿಜಿಸ್ಟ್ರಾರ್ ಜನರಲ್‌ರಿಗೆ ಹೈಕೋರ್ಟ್ ಸೂಚನೆ ನೀಡಿತ್ತು. ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಪೂರ್ವಾನುಮತಿ ನಿರಾಕರಣೆ ಹಿನ್ನೆಲೆ ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಲು ನಿರಾಕರಿಸಿತ್ತು. ಹೀಗಾಗಿ ಟಿ.ಜೆ.ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಬಿಎಸ್‌ ಯಡಿಯೂರಪ್ಪ, ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ: ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದ ಹೈಕೋರ್ಟ್ 

ಭ್ರಷ್ಟಾಚಾರ ತಡೆ ಕಾಯ್ದೆಗೆ ವಿರುದ್ಧ ಆದೇಶ ನೀಡಬಾರದು: ಡಿ ಕೆ ಶಿವಕುಮಾರ್ ಪರ ವಕೀಲರ ಮನವಿಗೆ ಸಿಬಿಐ ಆಕ್ಷೇಪ

(Allegations of corruption High Court issues notice to defendants including BS Yediyurappa and Vijayendra)

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!